ರಾಜ್ಯದ ಆರೋಗ್ಯ ವ್ಯವಸ್ಥೆಗೆ ಬಲ: 1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ : ಸಚಿವ ಸುಧಾಕರ್

ಉತ್ತರ ಕರ್ನಾಟಕ ಭಾಗದಲ್ಲಿ ವೈದ್ಯರ ಕೊರತೆ ನೀಗಿಸಲು ಕ್ರಮ

Team Udayavani, May 24, 2021, 8:00 PM IST

ರಾಜ್ಯದ ಆರೋಗ್ಯ ವ್ಯವಸ್ಥೆಗೆ ಬಲ: 1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ : ಸಚಿವ ಸುಧಾಕರ್

ಬೆಂಗಳೂರು : ಸೋಮವಾರ ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಒಟ್ಟು 1,763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೋವಿಡ್, ಬ್ಲ್ಯಾಕ್ ಫಂಗಸ್ ಸ್ಥಿತಿಗತಿ ಕುರಿತು ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 1,763 ವೈದ್ಯರನ್ನು ನೇರ ನೇಮಕಾತಿ ಮಾಡುವ ಪ್ರಕ್ರಿಯೆ ಮುಗಿದು ಅಧಿಸೂಚನೆ ಹೊರಡಿಸಲಾಗಿದೆ. 715 ತಜ್ಞರು, 75 ಜನರಲ್ ಮೆಡಿಸಿನ್, 57 ಜನರಲ್ ಸರ್ಜನ್, 145 ಗೈನಕಾಲಜಿಸ್ಟ್, 40 ಇಎನ್ ಟಿ, 35 ಚರ್ಮರೋಗ ತಜ್ಞರು, 142 ಅರವಳಿಕೆ ತಜ್ಞರು, 153 ಮಕ್ಕಳ ತಜ್ಞರು, 17 ರೇಡಿಯಾಲಜಿಸ್ಟ್ ಗಳನ್ನು ನೇಮಿಸಲಾಗುತ್ತಿದೆ. ಜೊತೆಗೆ 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಇದರಿಂದಾಗಿ ಆರೋಗ್ಯ ವ್ಯವಸ್ಥೆ ಬಲವಾಗಲಿದೆ. ಉತ್ತರ ಕರ್ನಾಟಕ ಭಾಗದ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಿದ್ದು, ಈಗ ಸಮಸ್ಯೆ ನೀಗಲಿದೆ. ಗದಗ, ಹುಬ್ಬಳ್ಳಿ, ಬೆಳಗಾವಿ, ರಾಯಚೂರು ಮೊದಲಾದ ಜಿಲ್ಲೆಗಳಿಗೆ ಮೊದಲ ಪ್ರಾಶಸ್ತ್ಯ ನೀಡಿ ಅಲ್ಲಿಗೆ ನೇಮಿಸಬೇಕೆಂದು ಸೂಚಿಸಲಾಗಿದೆ. ಶೀಘ್ರದಲ್ಲಿ ಸ್ಥಳ ನಿಯೋಜನೆ ಮಾಡಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇದನ್ನೂ ಓದಿ :ಉಡುಪಿ : ಬ್ಲಾಕ್‌ ಫಂಗಸ್ ಚಿಕಿತ್ಸೆಗೆ ಬೆಡ್‌ಗಳನ್ನು ಮೀಸಲಿಡಿ: ಸಚಿವ ಬೊಮ್ಮಾಯಿ ಸೂಚನೆ

1,200 ಟನ್ ಹಂಚಿಕೆ

ರಾಜ್ಯಕ್ಕೆ 230 ಟನ್ ನಿಂದ ಆರಂಭಿಸಿ 1,015 ಟನ್ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ. ಈಗ ಮತ್ತಷ್ಟು ಏರಿಕೆ ಮಾಡಿ 1,200 ಟನ್ ಆಕ್ಸಿಜನ್ ಹಂಚಿಕೆ ಮಾಡಲಾಗಿದೆ. ಇದಕ್ಕಾಗಿ ಕೇಂದ್ರದ ಸಚಿವರಿಗೆ, ಪ್ರಧಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದರು.

ಎಲ್ಲ ಕೋವಿಡ್ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುತ್ತಿದೆ. ಇದರಿಂದ ಸಂಬಂಧಿಕರು ಆರೈಕೆ ಹೇಗಾಗುತ್ತಿದೆ ಎಂದು ನೋಡಬಹುದು, ಹೊರಗಿನಿಂದ ಬರುವುದನ್ನು ತಪ್ಪಿಸುವುದರಿಂದ ಬ್ಲ್ಯಾಕ್ ಫಂಗಸ್ ನಿಯಂತ್ರಿಸಬಹುದು, ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಬಹುದು. ಪ್ರತಿ ಜಿಲ್ಲೆಯ ಆಸ್ಪತ್ರೆಗಳ ಕಾರ್ಯನಿರ್ವಹಣೆಯನ್ನು ಒಂದೇ ಕಡೆ ವೀಕ್ಷಿಸುವ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದರು.

ಆರೋಗ್ಯ ಸಹಾಯಕರಿಗೆ ಅಧಿಕಾರಿಗಳು ಎಂದು ಪದನಾಮ ಬದಲಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರಿಗೆ 10 ಸಾವಿರ ರೂ., ನರ್ಸಿಂಗ್ ಸಿಬ್ಬಂದಿಗೆ 8 ಸಾವಿರ ರೂ., ಗ್ರೂಪ್ ಡಿ ಸಿಬ್ಬಂದಿಗೆ 10 ಸಾವಿರ ರೂ. ರಿಸ್ಕ್ ಭತ್ಯೆಯನ್ನು ಏಪ್ರಿಲ್ 1 ರಿಂದ ನೀಡಲು ಆದೇಶಿಸಲಾಗಿದೆ. ಆಶಾ ಕಾರ್ಯಕರ್ತರಿಗೆ ಪ್ರತಿ ತಿಂಗಳ ಮೊದಲ ವಾರದಲ್ಲೇ ವೇತನ ಪಾವತಿಸುವ ವ್ಯವಸ್ಥೆ ತರಲಾಗಿದೆ. 17 ಜಿಲ್ಲೆಗಳಲ್ಲಿ ವೇತನ ಸಂಪೂರ್ಣ ಸಿಕ್ಕಿದೆ. ಎರಡು ದಿನಗಳಲ್ಲಿ ಉಳಿದೆಡೆ ವೇತನ ಕೈ ಸೇರಲಿದೆ ಎಂದು ಸ್ಪಷ್ಟಪಡಿಸಿದರು.

446 ಮಂದಿಗೆ ಬ್ಲ್ಯಾಕ್ ಫಂಗಸ್

ಈವರೆಗೆ ರಾಜ್ಯದಲ್ಲಿ 446 ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗಿದ್ದಾರೆ. 433 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 11 ಮಂದಿ ಮನೆಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿದೆ. 12 ರೋಗಿಗಳು ಮೃತಪಟ್ಟಿದ್ದಾರೆ. ಈ ಸೋಂಕು ನಿವಾರಣೆಗೆ 1 ಸಾವಿರ ಔಷಧಿ ವೈಲ್ ಗಳು ಕೇಂದ್ರದಿಂದ ಸಿಗಲಿದೆ ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.