ಕೋವಿಡ್‌ ಕೊಂಡಿ ಕಳಚಲು ಸಿಎಂ ಅಗತ್ಯ ನೆರವು

Team Udayavani, May 24, 2021, 8:59 PM IST

24-12

ಹೊನ್ನಾಳಿ: ನನ್ನ ಮನವಿ ಮೇರೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ 25 ಆಕ್ಸಿಜನ್‌ ಕಾನ್ಸನ್‌ಟ್ರೇಟರ್‌ಗಳನ್ನು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ನೀಡಿದ್ದಾರೆ. ಈ ಹಿಂದೆ 18 ಆಕ್ಸಿಜನ್‌ ಕಾನ್ಸಟ್ರೇಟರ್‌ಗಳನ್ನು ನೀಡಿದ್ದರು. ಒಟ್ಟು 43 ಆಕ್ಸಿಜನ್‌ ಕಾನ್ಸನ್‌ ಟ್ರೇಟರ್‌ಗಳನ್ನು ಕೊಟ್ಟಂತಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಪಟ್ಟಣದ ತಾಲೂಕು ಆಸ್ಪತ್ರೆಗೆ ಭಾನುವಾರ ಬೆಂಗಳೂರಿನಿಂದ ಬಂದ 25 ಆಕ್ಸಿಜನ್‌ ಕಾನ್ಸನ್‌ಟ್ರೇಟರ್‌ಗಳನ್ನು ಬರಮಾಡಿಕೊಂಡು ಅವರು ಮಾತನಾಡಿದರು. ತಾಲೂಕು ಆಸ್ಪತ್ರೆಗೆ ಆಕ್ಸಿಜನ್‌ ಘಟಕ, 43 ಆಕ್ಸಿಜನ್‌ ಕಾನ್ಸಟ್ರೇಟರ್‌ಗಳನ್ನು ಕೊಡುವುದಲ್ಲದೆ ಕೊರೊನಾ ಕೊಂಡಿ ಕಳಚಲು ಸಿಎಂ ಎಲ್ಲಾ ಸಾಧನ ಸಲಕರಣಗಳನ್ನು ನಮ್ಮ ತಾಲೂಕಿಗೆ ನೀಡುತ್ತಿದ್ದಾರೆ. ಶನಿವಾರ ಸಿಎಂ ಬಿಎಸ್‌ವೈ ಅವರನ್ನು ಭೇಟಿ ಮಾಡಿ ಆಕ್ಸಿಜನ್‌ ಕಾನ್ಸನ್‌ ಟ್ರೇಟರ್‌ಗಳನ್ನು ಮಂಜೂರು ಮಾಡುವಂತೆ ಬೇಡಿಕೆ ಸಲ್ಲಿಸಿದ್ದೆ. ಮರು ಮಾತನಾಡದೆ ತಕ್ಷಣ ಆಕ್ಸಿಜನ್‌ ಕಾನ್ಸನ್‌ಟ್ರೇಟರ್‌ಗಳನ್ನು ತಾಲೂಕು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ ಎಂದರು.

ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಪ್ರತಿಯೊಂದು ಗ್ರಾಮಕ್ಕೆ ನಾನು ಅ ಧಿಕಾರಿಗಳೊಂದಿಗೆ ಭೇಟಿ ನೀಡಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಪರಿ ಪರಿಯಾಗಿ ಮನವಿ ಮಾಡಿಕೊಂಡಿದ್ದರೂ ಅನೇಕರು ಪರೀಕ್ಷೆಗೊಳಗಾಗುತ್ತಿಲ್ಲ. ಇದೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೊರೊನಾ ಉಲ್ಬಣವಾದ ನಂತರ ದೂರವಾಣಿ ಕರೆ ಮಾಡಿ ನಮಗೆ ಬೆಡ್‌ ಬೇಕು, ಆಕ್ಸಿಜನ್‌ ಬೇಕು, ವೆಂಟಿಲೇಟರ್‌ ಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.

ಮೊದಲೆ ಎಚ್ಚೆತ್ತುಕೊಳ್ಳಿ ಎಂದು ಸೂಚಿಸಿದರೆ ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸದ್ಯಕ್ಕೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 75, ಮೊರಾರ್ಜಿ ವಸತಿ ಶಾಲೆಯಲ್ಲಿ 118, ಸಾಸ್ವೆಹಳ್ಳಿ ವಸತಿ ಶಾಲೆಯಲ್ಲಿ 11, ಜೀನಹಳ್ಳಿ ಹಾಸ್ಟೆಲ್‌ನಲ್ಲಿ 1, ಕೂಲಂಬಿ ಸಮುದಾಯ ಭವನದಲ್ಲಿ 18 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡನೇ ಪ್ರಾರಂಭವಾದಾಗಿನಿಂದ ಇದುವರೆಗೆ ವಿವಿಧ ಸ್ಥಳಗಳಲ್ಲಿ ಒಟ್ಟು 1739 ಸೋಂಕಿತರಿದ್ದಾರೆ.

ಇದರಲ್ಲಿ 627 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದು, 1047 ಪ್ರಕರಣಗಳು ಸಕ್ರಿಯವಾಗಿವೆ. 65 ಮಂದಿ ಮೃತಪಟ್ಟಿದ್ದಾರೆ ಎಂದರು. ಪುರಸಭಾಧ್ಯಕ್ಷ ಕೆ.ವಿ. ಶ್ರೀಧರ, ತಹಶೀಲ್ದಾರ್‌ ಬಸನಗೌಡ ಕೊಟೂರ, ಸಿಪಿಐ ಟಿ.ವಿ. ದೇವರಾಜ್‌, ಪಿಎಸ್‌ಐ ಬಸವರಾಜ ಆರ್‌. ಬಿರಾದಾರ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಕೆಂಚಪ್ಪ ಇದ್ದರು.

ಟಾಪ್ ನ್ಯೂಸ್

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

DK-Shivakumar

Congress Politics: ಡಿಸಿಎಂ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ಭೇಟಿ: ಹೈಕಮಾಂಡ್‌ ಜತೆ ಚರ್ಚೆ

BY-Vijayendara

By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

DK-Shivakumar

Congress Politics: ಡಿಸಿಎಂ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ಭೇಟಿ: ಹೈಕಮಾಂಡ್‌ ಜತೆ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.