ಇಂದು ಆರೈಕೆ ಕೇಂದ್ರ ಉದ್ಘಾಟನೆ
Team Udayavani, May 24, 2021, 9:10 PM IST
ಕಂಪ್ಲಿ: ಪಟ್ಟಣದ ಕಮ್ಮವಾರಿ ಭವನ ಹಿಂಭಾಗದಲ್ಲಿರುವ ಕಲ್ಗುಡಿ ಲೇಔಟ್ ಬಳಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಎಸ್‌ಬಿ ಫೌಂಡೇಶನ್ ಸಂಸ್ಥೆಯಿಂದ ಮೇ 24ರ ಸೋಮವಾರ ಆರಂಭಗೊಳ್ಳುವ ಆಕ್ಸಿಜನ್ ಕಾನ್ಸಂಟ್ರೇಟರ್ ವ್ಯವಸ್ಥಿತ 50 ಹಾಸಿಗೆಯ ಉಚಿತ ಕೋವಿಡ್ ಕೇರ್ ಸೆಂಟರ್‌ಗೆ ಮಾಜಿ ಶಾಸಕ ಟಿ.ಎಚ್.ಸುರೇಶ್ ಬಾಬು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.
ಮಾಜಿ ಶಾಸಕ ಟಿ.ಎಚ್.ಸುರೇಶ್‌ಬಾಬು ಮಾತನಾಡಿ, ಕೊರೊನಾ ಎರಡನೇ ಅಲೆಯು ಜನರ ಪ್ರಾಣದ ಮೇಲೆ ದಾಳಿ ಮಾಡುತ್ತಿದೆ. ಇದರಿಂದ ಸಾಕಷ್ಟು ಜನರು ಸರಿಯಾದ ಚಿಕಿತ್ಸೆಗಾಗಿ ಹರಸಾಹಸ ಪಡುತ್ತಿದ್ದಾರೆ. ಕೊರೊನಾ ನಿಯಂತ್ರಣ ಜತೆಗೆ ಕೋವಿಡ್ ಸೋಂಕಿತರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕಂಪ್ಲಿಯ ಕಲ್ಗುಡಿ ಲೇಔಟ್ ಬಳಿಯಲ್ಲಿರುವ ಸರ್ಕಾರಿ ಬಾಲಕರ ವಸತಿ ನಿಲಯದಲ್ಲಿ ಎಸ್‌ಬಿ ಫೌಂಡೇಶನ್ ವತಿಯಿಂದ ಸಜ್ಜಾಗಿರುವ ಆಕ್ಸಿಜನ್ ಕಾನ್ಸೆಂಟ್ರೇಟರ್ ವ್ಯವಸ್ಥಿತ 50 ಹಾಸಿಗೆಗಳ ಉಚಿತ ಕೋವಿಡ್ ಕೇರ್‌ನ್ನು ಮೇ 24ರಂದು ಸಚಿವರಾದ ಬಿ.ಶ್ರೀರಾಮುಲು, ಆನಂದ್‌ಸಿಂಗ್ ನೇತೃತ್ವದಲ್ಲಿ ಉದ್ಘಾಟಿಸುವ ಮೂಲಕ ಚಾಲನೆ ನೀಡಲಾಗುವುದು.
ಕಾರ್ಯಕ್ರಮದಲ್ಲಿ ಸಂಸದ ದೇವೇಂದ್ರಪ್ಪ, ಸ್ಥಳೀಯ ಶಾಸಕರು, ಜನ ಪ್ರತಿನಿಧಿ ಗಳು ಹಾಗೂ ಅ ಧಿಕಾರಿಗಳು ಭಾಗವಹಿಸಲಿದ್ದಾರೆ. ಜನರು ಕೊರೊನಾಗೆ ಭಯಪಡದೇ, ಜಾಗೃತಿ ವಹಿಸಿ, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೊನಾದಿಂದ ದೂರ ಉಳಿಯಬೇಕು ಎಂದರು.
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ವಿ.ಸುದರ್ಶನರೆಡ್ಡಿ, ಸದಸ್ಯ ಎಸ್.ಎಂ.ನಾಗರಾಜ, ಮಂಡಲ ಅಧ್ಯಕ್ಷ ಅಳ್ಳಳ್ಳಿ ವೀರೇಶ್, ಪ್ರಧಾನ ಕಾರ್ಯದರ್ಶಿ ಜಿ.ಸುಧಾಕರ, ನಗರ ಘಟಕ ಅಧ್ಯಕ್ಷ ಕೊಡಿದಲ್ ರಾಜು, ವಿಮ್ಸ್ ಮಾಜಿ ನಿರ್ದೇಶಕ ಡಾ.ದೇವನಂದ್, ಉಚಿತ ಕೋವಿಡ್ ಕೇರ್ ಸೆಂಟರ್‌ನ ಉಸ್ತುವಾರಿ ಡಾ.ಕೃಷ್ಣಕುಮಾರನಾಯಕ್, ಬಾಲಕರ ವಸತಿ ನಿಲಯ ಪಾಲಕ ವಿರೂಪಾಕ್ಷಿ, ಮುಖಂಡರಾದ ಪಿ.ಬ್ರಹ್ಮಯ್ಯ, ಬಿ.ಸಿದ್ದಪ್ಪ, ಎನ್.ಪುರುಷೋತ್ತಮ, ಭಾಸ್ಕರ್ ರೆಡ್ಡಿ, ಮರಿಯಪ್ಪ ನಾಯಕ, ವಿರೂಪಾಕ್ಷಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.