ಫೇಸ್‌ಬುಕ್, ಟ್ವಿಟರ್‌ಗೆ ನಿಷೇಧದ ಭೀತಿ : ಸರಕಾರದ ನಿಯಮ ಪಾಲನೆ ವಿಫಲ ಹಿನ್ನೆಲೆ ಕ್ರಮ
Team Udayavani, May 25, 2021, 7:30 AM IST
ಹೊಸದಿಲ್ಲಿ: ಸದ್ಯದಲ್ಲೇ ದೇಶಾದ್ಯಂತ ಫೇಸ್‌ಬುಕ್, ಟ್ವಿಟರ್ ಬ್ಯಾನ್ ಆಗಲಿವೆಯೇ?
ಡಿಜಿಟಲ್ ಕಂಟೆಂಟ್ ಗಳ ಮೇಲೆ ನಿಯಂತ್ರಣ ಹೇರಲು ಕೇಂದ್ರ ಸರಕಾರ ಜಾರಿ ಮಾಡಿರುವ ನಿಯಮಗಳನ್ನು ಟ್ವಿಟರ್, ಫೇಸ್ ಬುಕ್, ಇನ್ ಸ್ಟಾಗ್ರಾಂ ಸೇರಿದಂತೆ ಬಹುತೇಕ ಸಾಮಾಜಿಕ ಜಾಲತಾಣಗಳು ಇನ್ನೂ ಅನುಸರಿಸಿಲ್ಲ. ಮಂಗಳವಾರದಿಂದಲೇ ಈ ನಿಯಮಗಳು ಜಾರಿಗೆ ಬರಲಿದ್ದು, ನಿಯಮ ಪಾಲಿಸದ ತಾಣಗಳನ್ನು ಸರಕಾರ ಬ್ಲಾಕ್ ಮಾಡುವ ಸಾಧ್ಯತೆ ಅಧಿಕವಾಗಿದೆ.
ನಿಯಮ ಪಾಲನೆ ಅಧಿಕಾರಿಗಳ ನೇಮಕ, ಭಾರತದಲ್ಲಿರುವ ಆ ಅಧಿಕಾರಿಗಳ ಹೆಸರು ಮತ್ತು ಸಂಪರ್ಕ ಸಂಖ್ಯೆ ಸಲ್ಲಿಕೆ, ದೂರುಗಳು ಬಂದರೆ ಕೂಡಲೇ ಪರಿಹರಿಸುವುದು, ಆಕ್ಷೇಪಾರ್ಹ ಕಂಟೆಂಟ್ ಗಳ ಮೇಲೆ ನಿಗಾ ಇಡುವುದು ಮತ್ತು ಅವುಗಳನ್ನು ತೆಗೆದುಹಾಕುವುದು ಸೇರಿದಂತೆ ಕೆಲವೊಂದು ನಿಯಮಗಳನ್ನು ಪಾಲಿಸುವಂತೆ ಕಳೆದ ಫೆ.25ರಂದು ಸರಕಾರ ಸೂಚಿಸಿತ್ತು. ಜತೆಗೆ ಇದನ್ನು ಪೂರ್ಣಗೊಳಿಸಲು 3 ತಿಂಗಳ ಗಡುವು ನೀಡಿತ್ತು. ಮೇ 25ರಂದು ಈ ಗಡುವು ಮುಗಿದಿದ್ದು, ಜಾಲತಾಣಗಳಿಗೆ ನಿಷೇಧದ ಭೀತಿ ಶುರುವಾಗಿದೆ.
ಟೂಲ್‌ಕಿಟ್: ಟ್ವಿಟರ್‌ಗೆ ನೋಟಿಸ್
ಹೊಸದಿಲ್ಲಿ: ಕಾಂಗ್ರೆಸ್ ನದ್ದು ಎನ್ನಲಾದ ಟೂಲ್‌ಕಿಟ್ ಅನ್ನು “ತಿರುಚಿದ ಅಂಶಗಳುಳ್ಳ ವಿಷಯ’ ಎಂದು ಉಲ್ಲೇಖೀಸಿದ್ದ ಟ್ವಿಟರ್‌ಗೆ ದಿಲ್ಲಿ ಪೊಲೀಸರ ವಿಶೇಷ ಘಟಕ ಸೋಮವಾರ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು ಟೂಲ್‌ಕಿಟ್ ಕುರಿತು ಮಾಡಿದ್ದ ಟ್ವೀಟ್ ಅನ್ನು ಟ್ವಿಟರ್ ಇತ್ತೀಚೆಗೆ “ತಿರುಚಿದ ಅಂಶಗಳುಳ್ಳ ವಿಷಯ’ ಎಂದು ಘೋಷಿಸದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ ನೇತೃತ್ವದ ಸರಕಾರವನ್ನು ದೂಷಿಸಲೆಂದು ಕಾಂಗ್ರೆಸ್ ಈ ಟೂಲ್ ಕಿಟ್ ಸಿದ್ಧಪಡಿಸಿತ್ತು ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಇದನ್ನು ನಕಲಿ ಟೂಲ್‌ಕಿಟ್ ಎಂದು ಕರೆದಿದ್ದ ಕಾಂಗ್ರೆಸ್ ಎಫ್ಐಆರ್ ಕೂಡ ದಾಖಲಿಸಿತ್ತು. ಪ್ರಕರಣ ತನಿಖೆ ಹಂತದಲ್ಲಿರುವಾಗ ನೀವು ಮಧ್ಯಪ್ರವೇಶಿಸಬೇಡಿ ಎಂದು ಟ್ವಿಟರ್‌ಗೆ ಕೇಂದ್ರ ಸರಕಾರ ಖಡಕ್ ಸೂಚನೆಯನ್ನೂ ನೀಡಿತ್ತು. ಸೋಮವಾರ ಪೊಲೀಸರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಟ್ವಿಟರ್ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದಾರೆ.
ರಮಣ್ ಸಿಂಗ್ ಹೇಳಿಕೆ ದಾಖಲು: ನಕಲಿ ಟೂಲ್‌ಕಿಟ್ ಹಂಚಿಕೊಂಡಿರುವ ಆರೋಪಕ್ಕೆ ಸಂಬಂಧಿಸಿ ಸೋಮವಾರ ರಾಯು³ರ ಪೊಲೀಸರು ಛತ್ತೀಸ್ ಗಡದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ರಮಣ್ ಸಿಂಗ್ ಅವರ ಹೇಳಿಕೆ ದಾಖಲಿಸಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.