![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 25, 2021, 9:45 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಮೇ 29 ಹಾಗೂ ಮೇ 30 ರಂದು ಎರಡು ದಿನಗಳ ಕಾಲ ವಾರಾಂತ್ಯದ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಕೋವಿಡ್-19 ಹರಡುವುದನ್ನು ತಡೆಗಟ್ಟಲು ಮೇ 29ರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಅನಾವಶ್ಯಕವಾಗಿ ಓಡಾಡುವುದನ್ನು ಸಂಪೂರ್ಣವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿ ನಿಷೇಧಿಸಿ ಆದೇಶಿಸಲಾಗಿತ್ತು. ಆದರೆ, ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮೇ 29ರ ಬೆಳಗ್ಗೆ 6 ಗಂಟೆಯಿಂದ ಮೇ 31ರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅವಕಾಶ: ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧಿ ಪೂರೈಕೆ ಮತ್ತು ಖರೀದಿಗೆ ಹಾಗೂ ಅಂತರ್‌ರಾಜ್ಯ ಹಾಗೂ ಅಂತರ್ ಜಿಲ್ಲೆಗಳಿಗೆ ಸಂಚರಿಸುವ ಸರಕು ಮತ್ತು ಸಾಗಾಣಿಕಾ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಇದನ್ನೂ ಓದಿ :ಕೋವಿಡ್ ದೂರಮಾಡಲು ನೂರಾರು ಕೆಜಿ ಅನ್ನ ಚೆಲ್ಲಿ ಮೌಢ್ಯಾಚರಣೆ : ಗ್ರಾಮಸ್ಥರ ಕ್ರಮಕ್ಕೆ ಅಸಮಾಧಾನ
ಆದೇಶದಲ್ಲಿ ಸೂಚಿಸಿರುವ ದಿನಗಳಂದು ಈಗಾಗಲೇ ಪೂರ್ವಾನುಮತಿ ಪಡೆದುಕೊಂಡು ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳಿಗೆ ಮಾತ್ರ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.