ಕೇಂದ್ರ ಸರ್ಕಾರದ ನೂತನ ಐಟಿ ನಿಯಮ: ದೆಹಲಿ ಹೈಕೋರ್ಟ್ ಮೊರೆ ಹೋದ ವಾಟ್ಸಾಪ್ ?
Team Udayavani, May 26, 2021, 10:32 AM IST
ನವದೆಹಲಿ: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆ್ಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ ಎಂದು ವರದಿ ತಿಳಿಸಿದೆ. ಅದಾಗ್ಯೂ ಈ ಮಾಹಿತಿ ಖಚಿತವಾಗಿಲ್ಲ.
ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ನೂತನ ಐಟಿ ನಿಯಮಗಳನ್ನು ಜಾರಿ ಮಾಡಲು ಸಾಮಾಜಿಕ ಜಾಲತಾಣಗಳಿಗೆ ನೀಡಿರುವ ಗಡುವು ಬುಧವಾರ (26-5-2021) ಮುಗಿಯಲಿದ್ದು, ಇದಕ್ಕೆ ತಡೆ ಕೋರಿ ಕ್ಯಾಲಿಫೋರ್ನಿಯಾ ಮೂಲದ ವಾಟ್ಸಾಪ್ ಕಾನೂನು ಹೋರಾಟಕ್ಕಿಳಿದಿದೆ.
“ಮಾಹಿತಿಯ ಪ್ರಾಥಮಿಕ ಮೂಲವನ್ನು ಗುರುತಿಸಲು” ಕೆಲವೊಂದು ನಿಬಂಧನೆಗಳನ್ನು ಮಾಡಬೇಕಾಗಿದೆ, ಈ ಅಂಶವನ್ನು ಪ್ರಶ್ನಿಸಿ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ
ಇದನ್ನೂ ಓದಿ: ವಾಟ್ಸಾಪ್, ಫೇಸ್ ಬುಕ್, ಟ್ವಿಟ್ಟರ್ ಬ್ಲಾಕ್ ? ಸಂಸ್ಥೆಗಳು ಹೇಳುವುದೇನು ?
ಭಾರತದಲ್ಲಿ ಸುಮಾರು 400 ಮಿಲಿಯನ್ ಬಳಕೆದಾರರನ್ನು ಹೊಂದಿರುವ ವಾಟ್ಸಾಪ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ ಎಂದು ರಾಯಿಟರ್ಸ್ ಕೂಡ ವರದಿ ಮಾಡಿದ್ದು, ಆದರೆ ದೃಢೀಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಹೊಸ ನಿಯಮಗಳ ಜಾರಿಗೆ ಕಳೆದ ಫೆಬ್ರವರಿಯಲ್ಲೇ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮೇ 25ರ ಗಡುವು ನೀಡಿತ್ತು. ಆದರೆ, ವಾಟ್ಸ್‌ಆ್ಯಪ್, ಫೇಸ್ ಬುಕ್, ಟ್ವಿಟರ್ ಸೇರಿದಂತೆ ಬಹುತೇಕ ತಾಣಗಳು ಈ ನಿಯಮಗಳನ್ನು ಅನುಷ್ಠಾನ ಮಾಡಿಲ್ಲ. ಟ್ವಿಟರ್ ಮಾದರಿಯ ಭಾರತದ ಆವೃತ್ತಿ “ಕೂ’ ಮಾತ್ರವೇ ಹೊಸ ಮಾರ್ಗಸೂಚಿಗಳನ್ನು ಪಾಲಿಸಿದೆ.
ಇದೇ ವೇಳೆ, ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್ ನಂಥ ಒಟಿಟಿ ಪ್ಲಾಟ್‌ಫಾರಂಗಳಿಗೂ “ದೂರು ಪರಿಹಾರ ಅಧಿಕಾರಿ” ಗಳನ್ನು ನೇಮಕ ಮಾಡುವಂತೆ ಸರ್ಕಾರ ಸೂಚಿಸಿದೆ. ವಿವಿಧ ಸಚಿವಾಲಯಗಳ ಪ್ರತಿ ನಿಧಿಗಳನ್ನು ಒಳಗೊಂಡ ಸಮಿತಿ ರಚಿಸಿ, ಒಟಿಟಿ ಕಂಟೆಂಟ್‌ಗಳ ಮೇಲೆ ನಿಯಂತ್ರಣ ಹೇರಬೇಕು ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.