ಜುಲೈಗೆ ಕೆಂಗೇರಿವರೆಗೆ ಮೆಟ್ರೋ ರೈಲು
Team Udayavani, May 26, 2021, 12:50 PM IST
ಬೆಂಗಳೂರು: ಮೈಸೂರು ರಸ್ತೆಯ ನಾಯಂಡಹಳ್ಳಿ ನಿಲ್ದಾಣದಿಂದ ಕೆಂಗೇರಿ ನಿಲ್ದಾಣದವರೆಗೆ ಮೆಟ್ರೋ ಸೇವೆ ಜುಲೈ ವೇಳೆಗೆಮುಕ್ತವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಅಧಿಕಾರಿಗಳ ಜತೆಮೆಟ್ರೋ ರೈಲಿನಲ್ಲೇ ಸಂಚರಿಸಿದಅವರು, ನಮ್ಮ ಮೆಟ್ರೋ ರೈಲು ಹಂತ-2ರ ರೀಚ್-2ವಿಸ್ತರಿಸಿದ ಮಾರ್ಗ (ಮೈಸೂರು ರಸ್ತೆಯನಾಯಂಡಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ) ನೂತನ ಸಂಚಾರಮಾರ್ಗದ ಪರಿವೀಕ್ಷಣೆ ನಡೆಸಿದರು.
ನಂತರ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು,ನಮ್ಮ ಮೆಟ್ರೋ ಯೋಜನೆಯ ಹಂತ-2 ರಡಿನಾಯಂಡಹಳ್ಳಿಯಿಂದ ಕೆಂಗೇರಿ ವರೆಗಿನ ರೀಚ್-2ರವಿಸ್ತರಣಾ ಮಾರ್ಗದ ಕಾಮಗಾರಿ ಬಹುತೇಕಪೂರ್ಣಗೊಂಡಿದ್ದು, ಜುಲೈನಲ್ಲಿ ಪ್ರಯಾಣಿಕರಿಗೆಮುಕ್ತವಾಗಲಿದೆ. ಒಟ್ಟು 7.53 ಕಿ.ಮೀ. ಉದ್ದದ ಈವಿಸ್ತರಣೆ ಕಾಮಗಾರಿಗೆ 1,560 ಕೋಟಿ ರೂ. ವೆಚ್ಚತಗುಲಿದ್ದು, ಭೂ-ಸ್ವಾಧೀನಕ್ಕೆ 360 ಕೋಟಿ ರೂ.ವೆಚ್ಚವಾಗಿದೆ.
ಅದರಿಂದಾಗಿ ಪೂರ್ವ-ಪಶ್ಚಿಮಕಾರಿಡಾರ್ ಮಾರ್ಗದ ಉದ್ದ 18.1 ಕಿ.ಮೀ. ಗೆಹೆಚ್ಚಳವಾಗಿದೆ. ಅದರಲ್ಲಿ ನಾಯಂಡಹಳ್ಳಿ,ರಾಜರಾಜೇಶ್ವರಿ ನಗರ, ಜ್ಞಾನಭಾರತಿ, ಪಟ್ಟಣಗೆರೆ,ಕೆಂಗೇರಿ ಬಸ್-ಟರ್ಮಿನಲ್ ಹಾಗೂ ಕೆಂಗೇರಿ -ಒಟ್ಟು6 ನಿಲ್ದಾಣಗಳಿವೆ. ನಾಯಂಡಹಳ್ಳಿ, ರಾಜರಾಜೇಶ್ವರಿನಗರ, ಜ್ಞಾನಭಾರತಿ ನಿಲ್ದಾಣಗಳಲ್ಲಿ ಪಾರ್ಕಿಂಗ್‌ಸೌಲಭ್ಯಕಲ್ಪಿಸಲಾಗಿದೆ ಎಂದು ಹೇಳಿದರು.ಕೆಂಗೇರಿ ಬಸ್-ಟರ್ಮಿನಲ್ ನಿಲ್ದಾಣದಲ್ಲಿ ಎರಡು ಅಂತಸ್ತಿನ ಪಾರ್ಕಿಂಗ್ ಸೌಲಭ್ಯ ಲ್ಪಿಸಲಾಗಿದೆ.
ಕೆಂಗೇರಿಬಸ್-ಟರ್ಮಿನಲ್ ನಿಲ್ದಾಣಹೊರತು ಪಡಿಸಿ ಉಳಿದಎಲ್ಲ ನಿಲ್ದಾಣಗಳನ್ನು ರಸ್ತೆ ದಾಟಲು ಪಾದಚಾರಿಗಳು ಬಳಸಬಹುದಾಗಿದೆ. ಬೈಯಪ್ಪನಹಳ್ಳಿಯಿಂದಕೆಂಗೇರಿಗೆ ಪ್ರಯಾಣಿಸಲು 56 ರೂ. ದರನಿಗದಿಪಡಿಸಲಾಗಿದೆ. ಮೆಟ್ರೋ ಜಾಲದ ಅತಿ ಉದ್ದದಮಾರ್ಗ, ಕೆಂಗೇರಿಯಿಂದ ಸಿಲ್ಕ್ ಇನ್ಸಿ rಟ್ಯೂಟ್ ವರೆಗೆ60 ರೂ. ದರ ನಿಗದಿಪಡಿಸಲಾಗಿದೆ. ಈ ವಿಸ್ತರಣೆಯಕಾರ್ಯಾಚರಣೆಯಿಂದ ಪ್ರತಿ ದಿನ ಸರಾಸರಿ 75,000ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಈಮಾರ್ಗದಲ್ಲಿ ಒನ್-ನೇಷನ್-ಒನ್-ಕಾರ್ಡ್‌ಯೋಜನೆಯ ಅನುಷ್ಠಾನಕ್ಕೆ ಪೂರಕವಾಗಿಆಟೊಮ್ಯಾಟಿಕ್ ಫೇರ್ ಕಲೆಕ್ಷನ್ ವ್ಯವಸ್ಥೆಅಳವಡಿಸಲಾಗಿದೆ. ರೈಲಿನ ಪರೀಕ್ಷಾರ್ಥ ಓಡಾಟವೂ ಪೂರ್ಣವಾಗಿದೆ ಎಂದರು.ಪ್ರತಿ ನಿಲ್ದಾಣದ ಛಾವಣಿಯಲ್ಲಿ 250 ಕಿಲೋವ್ಯಾಟ್ ಸೌರವಿದ್ಯುತ್ ಪ್ಯಾನೆಲ್ ಅಳವಡಿಸಲುಅವಕಾಶ ಕಲ್ಪಿಸಲಾಗಿದೆ.
ಕೆಂಗೇರಿಯಿಂದ ಚಲ್ಲಘಟ್ಟವರೆಗಿನ ವಿಸ್ತರಣೆ ಕಾಮಗಾರಿಯೂ ಪ್ರಗತಿಯಲ್ಲಿದ್ದು,ಮಾರ್ಚ್ 2022ರ ಅಂತ್ಯದಲ್ಲಿ ಈ ಕಾಮಗಾರಿಪೂರ್ಣಗೊಳ್ಳುವ ನಿರೀಕ್ಷೆಯಿದೆ.ಬೆಂಗಳೂರು ನಗರದಸಂಚಾರ ವ್ಯವಸ್ಥೆ ಸುಗಮಗೊಳ್ಳಲು ಹಾಗೂ ಒಂದುಭಾಗದಿಂದ ಇನ್ನೊಂದು ಭಾಗಕ್ಕೆ ಸುಲಭವಾಗಿಸಂಚರಿಸಲು ನಮ್ಮ ಮೆಟ್ರೋ ರೈಲುವರದಾನವಾಗಲಿದೆ. ಈ ಯೋಜನೆ ನಿಗದಿತಕಾಲಮಿತಿಯೊಳಗೆ ಪೂರ್ಣಗೊಳಿಸಲು ನಮ್ಮಸರ್ಕಾರ ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದುವಿವರಿಸಿದರು.ಪರಿಶೀಲನೆ ವೇಳೆ ನಮ್ಮ ಮೆಟ್ರೋ ವ್ಯವಸ್ಥಾಪಕನಿರ್ದೇಶಕ ರಾಕೇಶ್ ಸಿಂಗ್ ಹಾಗೂ ಇತರೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.