ಮೇಕೆದಾಟು ಯೋಜನೆ ವಿವಾದ: ನಾಳೆ ಕಾನೂನು ತಜ್ಞರ ಮಹತ್ವದ ಸಭೆ; ಸಚಿವ ಬಸವರಾಜ ಬೊಮ್ಮಾಯಿ

Team Udayavani, May 26, 2021, 1:40 PM IST

bommai

ಬೆಂಗಳೂರು: ಮೇಕೆದಾಟು ಯೋಜನೆಯಲ್ಲಿ ಪರಿಸರಕ್ಕೆ ತೊಂದರೆ ಆಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲು ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ಪೀಠ ದಿನಪತ್ರಿಕೆಯ ವರದಿಯನ್ನು ಆಧರಿಸಿ ಸ್ವಯಂ ಪ್ರೇರಣೆಯಿಂದ ರಚನೆ ಮಾಡಿರುವ ಸಮಿತಿಯ ವಿರುದ್ಧ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧತೆ ನಡೆಸುವ ಸಂಬಂಧ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕಾನೂನು ತಜ್ಞರ ಉನ್ನತ ಮಟ್ಟದ  ಸಭೆ ನಡೆಯಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನ ಟೌನ್ ಹಾಲ್ ಬಳಿ  ಬೆಂಗಳೂರು ನಗರ ಸಂಚಾರ ಪೊಲೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು‌.

ರಾಷ್ಟ್ರೀಯ ಹಸಿರು ಪೀಠ ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸೋಮೋಟೋ ದೂರು ದಾಖಲಿಸಿಕೊಂಡಿದೆ.  ಇದಕ್ಕೆ ಸಂಬಂಧಪಟ್ಟಂತೆ ಸಮಿತಿ ರಚನೆ ಮಾಡಿದೆ. ಮೇಕೆದಾಟು ಯೋಜನೆಗೆ ಭೇಟಿ ನೀಡಬೇಕು. ಅಲ್ಲಿ ಪರಿಸರ ನಾಶ ಆಗಿದೆಯೇ?  ಪರಿಸರಕ್ಕೆ ತೊಂದರೆಯಾಗಿದೆಯೆ? ಎಂಬುದರ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸಮಿತಿ ರಚಿಸಿದೆ.  ಈ ಸಂಬಂಧ ಯಾರೂ ಅಧಿಕೃತವಾಗಿ ದೂರು ನೀಡದಿದ್ದರೂ ಹಸಿರುಪೀಠ ಸ್ವಯಂ ಪ್ರೇರಿತವಾಗಿ ಸಮಿತಿ ರಚನೆ ಮಾಡಿದೆ.  ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕುರಿತು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಲಿದೆ ಎಂದರು.

ಇದನ್ನೂ ಓದಿ:  ಸಿ.ಎಸ್.ಆರ್ ಸೌಲಭ್ಯದ ಸಮಗ್ರ ಆನ್ ಲೈನ್ ವೇದಿಕೆ ‘ಆಕಾಂಕ್ಷಾ’ ಪೋರ್ಟಲ್ ಗೆ ಚಾಲನೆ

ಗುರುವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ,  ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ,  ಅಂತರ್ ರಾಜ್ಯ ಜಲ ವಿವಾದದ ಕಾನೂನು ಪಂಡಿತರು,  ಹಿರಿಯ ವಕೀಲರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಈಗಾಗಲೇ ಮೇಕೆದಾಟು  ಯೋಜನೆಯ ಬಗ್ಗೆ ಸುಪ್ರೀಂಕೋರ್ಟ್ಗೆ ಎಲ್ಲ ವಿವರವನ್ನು ನೀಡಲಾಗಿದೆ.  ಕರ್ನಾಟಕ ತನ್ನ ಹಕ್ಕಿನ ನೀರನ್ನು ಬಳಕೆ ಮಾಡಿಕೊಳ್ಳುತ್ತಿದೆ.  ಇಂಥ ಸಂದರ್ಭದಲ್ಲಿ ಸಮಿತಿ ರಚನೆ ಮಾಡಿದ್ದು ಎಷ್ಟು ಸಮಯೋಚಿತ?  ಹಾಗೂ ಎಷ್ಟು ಕಾನೂನುಬದ್ಧ ಎಂಬ ಪ್ರಶ್ನೆ ಉದ್ಭವಿಸಿದೆ‌.  ಹೀಗಾಗಿ ಈ ವಿಚಾರದಲ್ಲಿ  ಕಾನೂನಾತ್ಮಕವಾಗಿ ಕರ್ನಾಟಕದ ಹಿತ ಕಾಪಾಡುವುದು ನಮ್ಮ ಕೆಲಸ.  ಅದನ್ನು ಯಾವ ರೀತಿ ಪರಿಣಾಮಕಾರಿಯಾಗಿ ಮಾಡಬೇಕು ಎಂಬುದರ ಕುರಿತು ನಾಳೆ ಪ್ರಮುಖವಾದ ಸಭೆ ನಡೆಯಲಿದೆ ಎಂದು ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ:  ಕರಾವಳಿ ಹೆಮ್ಮೆ; ಬ್ಲ್ಯಾಕ್ ಫಂಗಸ್ ಔಷಧ ಅಭಿವೃದ್ಧಿ ರೂವಾರಿ ಗಂಗೊಳ್ಳಿಯ ಶ್ರೀಕಾಂತ್ ಎ ಪೈ

ಟಾಪ್ ನ್ಯೂಸ್

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.