ತನ್ನನ್ನು ಬಂಧಿಸಲು ಬಂದಿದ್ದಾರೆಂದು ತಿಳಿದು, ಕಾರಿನಲ್ಲಿ ಪಾರಾಗಲು ಯತ್ನಿಸಿದವ ಸೆರೆ

Team Udayavani, May 26, 2021, 3:53 PM IST

ಅಡ್ಡಾದಿಡ್ಡಿ ಕಾರ್ ಚಲಾಯಿಸಿದವನನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

ಕಾರವಾರ: ತನ್ನನ್ನು ಬಂಧಿಸಲು ಬಂದಿದ್ದಾರೆಂದು ತಿಳಿದು,  ಕಾರ್ ನಲ್ಲಿ ಸಂಚರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಸೆರೆ ಹಿಡಿದಿರುವ ಘಟನೆ ನಗರದಲ್ಲಿ ನಡೆದಿದೆ.

ಕಾರವಾರದ ಸಿದ್ದರದ ಸಂದೀಪ ಗಾಂವಕರ್ (40) ಎಂಬಾತ ತನ್ನ ತಾಯಿಗೆ ಹೊಡೆದು ಗಲಾಟೆ ಮಾಡಿಕೊಂಡಿದ್ದ. ಈ ಬಗ್ಗೆ ವಿಚಾರಿಸಲು ಪಿಎಸ್​ಐ ರೇವಣ್ಣ ಸಿದ್ದಪ್ಪ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಆರೋಪಿ ಕಳ್ಳತನ ಪ್ರಕರಣದಲ್ಲಿ ಬೇಕಾಗಿರುವುದನ್ನು ಗಮನಿಸಿದ ಪೊಲೀಸರು, ತಕ್ಷಣ ಆತನ ಬಂಧನಕ್ಕೆ ಮುಂದಾದರು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಆತ ಕಾರು ಚಲಾಯಿಸಿಕೊಂಡು ಪರಾರಿಯಾಗಲು ಯತ್ನಿಸಿದ.  ತಕ್ಷಣ ಪೊಲೀಸರು ಆತನನ್ನು ಬೆನ್ನಟ್ಟಿ ಸೆರ ಹಿಡಿಯಲು ಮುಂದಾಗಿದರು .

ಈ ವೇಳೆ ಸಿಕ್ಕ ಸಿಕ್ಕ ವಾಹನಗಳು, ಕಾಪೌಂಡ್​ಗೆ ಗುದ್ದಿ, ಎಲ್ಲೆಂದರಲ್ಲಿ ಕಾರ್ ಚಲಾಯಿಸಿ  , ಆರೋಪಿ ಪರಾರಿಯಾಗಲು ಯತ್ನಿಸಿದ್ದ.ಆರೋಪಿ ಸಂದೀಪ ಗಾಂವಕರ್​​​ನ ಅವಾಂತರಈ ಬಗ್ಗೆ ಮಾಹಿತಿ ಪಡೆದ ನಗರ ಠಾಣೆಯ  ಪಿಎಸ್ಐ ಸಂತೋಷ್ ಕುಮಾರ್, ಗೀತಾಂಜಲಿ ಚಿತ್ರಮಂದಿರದ ಬಳಿ ಸಿಬ್ಬಂದಿಯೊಂದಿಗೆ ಬ್ಯಾರಿಕೇಡ್ ಹಾಕಿ ಆರೋಪಿಯನ್ನು ತಡೆಯಲು ಯತ್ನಿಸಿದ್ದರು. ಅಲ್ಲಿಯೂ ಕಾರು ನಿಲ್ಲಿಸದ ಆರೋಪಿ ಸಂದೀಪ್, ವೇಗವಾಗಿ ಕಾರ್ ಚಲಾಯಿಸಿ  ತಪ್ಪಿಸಿಕೊಳ್ಳಲು ಯತ್ನಿಸಿದ .

ಆದರೂ ಬಿಡದ ಪೊಲೀಸರು ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ್ದರು. ಕೊನೆಗೆ ಕಾಳಿ ನದಿ ತೀರದ ಖಾಪ್ರಿಯ ದೇವಸ್ಥಾನ ಹಿಂಬದಿಯಲ್ಲಿರುವ  ಕೃಷ್ಣಾನಂದ ಜೋಶಿ   ಮನೆಯ ಕಂಪೌಡ್​ಗೆ ಕಾರು ಗುದ್ದಿದ ಆರೋಪಿ, ಅಲ್ಲಿಂದಲೂ ಓಡಿ ಹೋಗಲು ಯತ್ನಿಸಿದ್ದ. ಆದರೆ, ಈ ವೇಳೆ ಅಲರ್ಟ್ ಆದ ಪೊಲೀಸರು,  ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ  ಯಶಸ್ವಿಯಾಗಿದ್ದಾರೆ. ಬಳಿಕ ಆತನ ಎರಡು ಕೈಗೆ ಹಗ್ಗ ಬಿಗಿದು ಠಾಣೆಗೆ ಒಯ್ದರು.

ಕಾರ್  ಕದ್ದ ಪ್ರಕರಣ ಇತ್ತು :

ಆರೋಪಿ ಸಂದೀಪ್ ಗಾಂವಕರ್ 2019ರಲ್ಲಿ ಬ್ರಾಹ್ಮಣ ಗಲ್ಲಿಯ ವಕೀಲ ವಿವೇಕ ಪ್ರಭು ಎಂಬುವರ ಮನೆಯಲ್ಲಿ ಕೆಲಸಕ್ಕಿದ್ದಾಗ ಕಾರು ಕದ್ದು ತಲೆಮರೆಸಿಕೊಂಡಿದ್ದ. ಕಾರವಾರದಲ್ಲಿ ಇರುವ ಬಗ್ಗೆ ಬುಧುವಾರವ ಮಾಹಿತಿ ಪಡೆದ ಪೊಲೀಸರು , ಬಂಧಿಸಲು ಮುಂದಾದರು. ಲಾಕ್​ಡೌನ್ ಆಗಿದ್ದರಿಂದ ರಸ್ತೆಯಲ್ಲಿ ಜನರ ಓಡಾಟವಿರಲಿಲ್ಲ. ಹಾಗಾಗಿ, ಆರೋಪಿ ಸಂದೀಪ ಅವಾಂತರದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಟಾಪ್ ನ್ಯೂಸ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.