ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಅಗತ್ಯ ಕ್ರಮ

Team Udayavani, May 26, 2021, 10:08 PM IST

26-17

ಚಿತ್ರದುರ್ಗ: ಜಿಲ್ಲೆಯ 519 ಹಳ್ಳಿಗಳು ಕೋವಿಡ್‌ ಸೋಕಿತ ಗ್ರಾಮಗಳಾಗಿದ್ದು ಜನರು ತೊಂದರೆಗೆ ಸಿಲುಕಿದ್ದಾರೆ. ಈ ನಿಟ್ಟಿನಲ್ಲಿ ಸೋಂಕು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದ ತಮಟಕಲ್ಲು ರಸ್ತೆಯಲ್ಲಿರುವ ಬಿ.ಸಿ.ಎಂ ಹಾಸ್ಟೆಲ್‌ನಲ್ಲಿ ಮಂಗಳವಾರ ಜಿಲ್ಲಾಡಳಿತ ಹಾಗೂ ಪ್ರಕಾಶ್‌ ಸ್ಪಾಂಜ್‌ ಪ್ರಾಯೋಜಕತ್ವದಲ್ಲಿ 250 ಬೆಡ್‌ ಸಾಮರ್ಥ್ಯದ ಕೋವಿಡ್‌ ಕೇರ್‌ ಸೆಂಟರ್‌ ಹಾಗೂ 20 ಆಕ್ಸಿಜನ್‌ನೆಟೆಡ್‌ ಬೆಡ್‌ ಸೌಲಭ್ಯದ ಕೋವಿಡ್‌ ಕೇರ್‌ ಸೆಂಟರ್‌ ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್‌-19 ಸಾಂಕ್ರಾಮಿಕ ರೋಗಕ್ಕೆ ಸಂಬಂ  ಧಿಸಿದಂತೆ ಜಿಲ್ಲೆಯಲ್ಲಿ 5,600 ಸಕ್ರಿಯ ಜಿಲ್ಲೆಯಲ್ಲಿ ಪಾಸಿಟಿವ್‌ ರೇಟ್‌ ಕಡಿಮೆ ಇದೆ.

ಜಿಲ್ಲಾಡಳಿತ ಕೋವಿಡ್‌ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಕೊರೊನಾ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡುವುದರಿಂದ ಸೋಂಕು ಇಡೀ ಕುಟುಂಬಕ್ಕೆ ಹರಡುತ್ತದೆ. ಹಾಗಾಗಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಸ್ಥಾಪನೆ ಮಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 22 ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್‌-19 ಸೋಂಕು ಗ್ರಾಮೀಣ ಪ್ರದೇಶಗಳಿಗೂ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳ ಜನರನ್ನು ಸುರಕ್ಷಿತವಾಗಿ ಕಾಪಾಡುವ ನಿಟ್ಟಿನಲ್ಲಿ ಕೋವಿಡ್‌ ಸೋಂಕಿನ ಲಕ್ಷಣಗಳಿರುವವರನ್ನು ಗುರುತಿಸಿ ಪರೀಕ್ಷೆಗೆ ಒಳಪಡಿಸಿ ಪಾಸಿಟಿವ್‌ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಗುಣಮುಖರನ್ನಾಗಿಸಲಾಗುವುದು.

ಈ ನಿಟ್ಟಿನಲ್ಲಿ ಎಲ್ಲ ಕಡೆ ಆಕ್ಸಿಜನ್‌ ಬೆಡ್‌ ಸೌಲಭ್ಯ ಕಲ್ಪಿಸಲಾಗುವುದು ಎಂದರು. ಇದೇ ವೇಳೆ ನಗರದ ಬಿವಿಕೆಎಸ್‌ ಬಡಾವಣೆಯಲ್ಲಿರುವ ಸಮಾಜಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ 70 ಹಾಸಿಗೆ ಸಾಮರ್ಥ್ಯದ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಲಾಗಿದೆ. ಸಚಿವರು ಅಲ್ಲಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಸ್ತುತ ಇಲ್ಲಿ 68 ಜನರು ದಾಖಲಾಗಿದ್ದು, ದಾಖಲಾದವರಲ್ಲಿ 37 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇವರಿಗೆ ಊಟ, ವಸತಿ, ಬಿಸಿ ನೀರು ಹಾಗೂ ಎಲ್ಲಾ ಔಷಧವನ್ನು ಸರ್ಕಾರವೇ ಒದಗಿಸುತ್ತಿದ್ದು, ಚಿಕಿತ್ಸೆಗಾಗಿ ಒಬ್ಬರು ವೈದ್ಯರು, ನರ್ಸ್‌ ಮತ್ತು ಸಿಬ್ಬಂದಿಗಳಿದ್ದಾರೆ.

ಕೋವಿಡ್‌ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ಪಡೆಯಬೇಕು. ಯಾರಿಗೆ ಮನೆಯಲ್ಲಿ ಪ್ರತ್ಯೇಕ ವ್ಯವಸ್ಥೆ ಇಲ್ಲವೊ ಅವರಿಗಾಗಿ ಕೇರ್‌ ಸೆಂಟರ್‌ ಗಳನ್ನು ತೆರೆಯಲಾಗಿದೆ. ಜನರು ಇವುಗಳ ಉಪಯೋಗ ಪಡೆದು ತಮ್ಮ ಕುಟುಂಬವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು ಎಂದು ಸಚಿವ ಶ್ರೀರಾಮುಲು ಕೋರಿದರು.

ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ, ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿ  ಕಾರಿ ಜಿ. ರಾ ಧಿಕಾ, ಡಿಎಚ್‌ಒ ಡಾ| ಪಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎಚ್‌.ಜೆ. ಬಸವರಾಜಪ್ಪ, ತಹಶೀಲ್ದಾರ್‌ ಜೆ.ಸಿ.ವೆಂಕಟೇಶಯ್ಯ, ತಾಲೂಕು ಆರೋಗ್ಯಾಧಿ ಕಾರಿ ಡಾ| ಬಿ.ವಿ. ಗಿರೀಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.