ಇಂದಿನಿಂದ ದಿನ ಬಿಟ್ಟು ದಿನ ಲಾಕ್‌ಡೌನ್‌


Team Udayavani, May 26, 2021, 10:15 PM IST

26-18

ಚಿತ್ರದುರ್ಗ: ಜಿಲ್ಲೆಯಾದ್ಯಂತ ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮೇ 26 ರಿಂದ ಜೂನ್‌ 7 ರಂದು ಬೆಳಗ್ಗೆ 6 ಗಂಟೆಯವರೆಗೆ ದಿನ ಬಿಟ್ಟು ದಿನ ಸಂಪೂರ್ಣ ಲಾಕ್‌ ಡೌನ್‌ ವಿಧಿಸಲಾಗಿದೆ.

ವಾರಾಂತ್ಯದ ದಿನಗಳಾದ ಶನಿವಾರ ಮತ್ತು ಭಾನುವಾರಗಳಂದು ಸಂಪೂರ್ಣ ಲಾಕ್‌ಡೌನ್‌ ಇರುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 27, 29, 30 ಹಾಗೂ ಜೂನ್‌ 1, 3, 5 ಹಾಗೂ 6 ರಂದು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ ಡೌನ್‌ ವಿಧಿಸಲಾಗಿದೆ.

ಈ ದಿನಗಳಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಸೇವೆಗಳಿರುವುದಿಲ್ಲ. ತರಕಾರಿ, ಹಣ್ಣು, ದಿನಸಿ ಅಂಗಡಿಗಳೂ ಇರುವುದಿಲ್ಲ. ಹಾಲಿನ ಉತ್ಪನ್ನಗಳು ಮಾತ್ರ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಇರುತ್ತವೆ. ಮೇ 26, 28, 31 ಹಾಗೂ ಜೂನ್‌ 2 ಹಾಗೂ 4 ರಂದು ಬೆಳಗ್ಗೆ 6 ರಿಂದ 10 ರವರೆಗೆ ಸಂಪೂರ್ಣ ಲಾಕ್‌ ಡೌನ್‌ ನಿಂದ ವಿನಾಯಿತಿ ನೀಡಲಾಗಿದೆ.

ಲಾಕ್‌ ಡೌನ್‌ ವಿನಾಯಿತಿ ದಿನಗಳಂದು ಬೆಳಿಗ್ಗೆ 06 ರಿಂದ 10 ರವರೆಗೆ ಅಗತ್ಯ ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು. ಸಂಪೂರ್ಣ ಲಾಕ್‌ ಡೌನ್‌ ವಿಧಿಸಿರುವ ದಿನಗಳಂದು ಹಾಲಿನ ಉತ್ಪನ್ನಗಳ ಮಾರಾಟಕ್ಕೆ ಬೆಳಿಗ್ಗೆ 6 ರಿಂದ 10 ರವರೆಗೆ ಅವಕಾಶ ಕಲ್ಪಿಸಲಾಗಿದೆ. ವೈದ್ಯಕೀಯ ತುರ್ತು ಸೇವೆಗಳು, ಎಲ್ಲಾ ಆಸ್ಪತ್ರೆ, ಮೆಡಿಕಲ್ಸ…, ಪೆಟ್ರೋಲ್‌ ಬಂಕ್‌, ಇ-ಕಾಮರ್ಸ, ತಿಂಡಿ ಮತ್ತು ಊಟ ಪಾರ್ಸಲ್‌ ಸೇವೆಗಳು, ಗೂಡ್ಸ… ವಾಹನಗಳ ಸಂಚಾರ, ದಿನಸಿ ಪಾರ್ಸೆಲ್‌ ಸೇವೆಗಳು, ಸರ್ಕಾರದ ಮೇ 7 ಮತ್ತು 21ರಂದು ಇನ್ನಿತರೆ ಹೆಚ್ಚುವರಿ ಆದೇಶದಲ್ಲಿ ಉಲ್ಲೇಖೀಸಿರುವಂತೆ ನಿರಂತರ ಉತ್ಪಾದನಾ ಕೈಗಾರಿಕೆ, ಉದ್ದಿಮೆಗಳ ಸೇವೆ ಪಡೆಯಬಹುದಾಗಿದೆ.

ಸಂಪೂರ್ಣ ಲಾಕ್‌ ಡೌನ್‌ ಹೊರತಾದ ದಿನಗಳಲ್ಲಿನ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮೇ 7 ಮತ್ತು 21ರಂದು ಇನ್ನಿತರೆ ಹೆಚ್ಚುವರಿ ಆದೇಶಗಳಲ್ಲಿ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ನಿರ್ಬಂಧಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಚಟುವಟಿಕೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಈ ಆದೇಶದ ಜೊತೆಗೆ ಈಗಾಗಲೇ ಸಿ.ಆರ್‌.ಪಿ.ಸಿ 144 ರಡಿಯಲ್ಲಿ ಹೊರಡಿಸಿರುವ ನಿಷೇಧಾಜ್ಞೆ ಆದೇಶ ಸಹ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಪಾಲಾಕ್ಷ ಇದ್ದರು.

ಟಾಪ್ ನ್ಯೂಸ್

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

13

Kollywood: ಯೂಟ್ಯೂಬ್‌ ವಿಮರ್ಶೆ ಬ್ಯಾನ್‌ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

15

Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ… ‌

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

15

Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ… ‌

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.