ಕೋವಿಡ್ ನಿರ್ವಹಣೆಗಾಗಿ ನಿಯಮ ಸಡಿಲಿಕೆ
Team Udayavani, May 26, 2021, 10:21 PM IST
ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕಾಗಿ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯದ ತುರ್ತು ಕಾಮಗಾರಿಗಳಿಗೆ ವ್ಯಯ ಮಾಡಲಾಗುವ ಹಣವನ್ನು 15ನೇ ಹಣಕಾಸಿನ ಅನುದಾನದಲ್ಲಿ ಬಳಸಿಕೊಳ್ಳಲು ಗ್ರಾ.ಪಂ. ಅಧ್ಯಕ್ಷರು-ಸದಸ್ಯರು, ಪಂಚಾಯಿತಿಗಳಿಗೆ ಅನುಮತಿ ನೀಡಲಾಗಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಬೆಳಗಾವಿ ಮತ್ತು ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಯಾ ಜಿಲ್ಲೆಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿಗಳೊಂದಿಗೆ ಮಂಗಳವಾರ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.
ಈ ಹಿಂದೆ ಸದರಿ ಅನುದಾನವನ್ನು ಬಳಸಿಕೊಳ್ಳಲು ಕ್ರಿಯಾ ಯೋಜನೆ ಸಿದ್ಧಪಡಿಸಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅ ಧಿಕಾರಿಗಳ ಅನುಮೋದನೆ ಪಡೆಯಬೇಕಾಗಿತ್ತು. ಪ್ರಸ್ತುತ ಸಂದರ್ಭದಲ್ಲಿ ಈ ನಿಯಮವನ್ನು ಸಡಿಲಿಸಲಾಗಿದೆ ಎಂದರು. ಗ್ರಾಮೀಣ ಪ್ರದೇಶದಲ್ಲಿನ ಕಂಟೋನ್ಮೆಂಟ್ ಝೋನ್ಗಳನ್ನು ಹೊರತುಪಡಿಸಿ ಉಳಿದೆ ಗ್ರಾಮೀಣ ಪ್ರದೇಶಗಳಲ್ಲಿ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದ್ದು ಬೆಳಿಗ್ಗೆ ಮತ್ತು ಮಧ್ಯಾಹ್ನ 2ಅವಧಿ ಯಲ್ಲಿ ಸೀಮಿತ 40ಜನರ ತಂಡಗಳಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ ಎಂದರು.
ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂ ದಿ ಕೊರೊನಾ ಸೋಂಕಿಗೆ ಒಳಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಸಂದರ್ಭದಲ್ಲಿ ವೈದ್ಯಕೀಯ ವೆಚ್ಚ ಮರುಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಜನರಲ್ ವಾರ್ಡ್ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಲ್ಲಿ ದಿನವೊಂದಕ್ಕೆ ಹತ್ತುಸಾವಿರ, ಹೈಡಿಪೆಂಡೆನ್ಸಿ ಯುನಿಟ್ ನಲ್ಲಿದ್ದರೆ ಹನ್ನೆರೆಡು ಸಾವಿರ, ವೆಂಟಿಲೇಟರ್ ಇಲ್ಲದೆ ತೀವ್ರ ನಿಗಾ ಘಟಕದಲ್ಲಿದ್ದರೆ ಹದಿನೈದು ಸಾವಿರ ಹಾಗೂ ಐಸೊಲೇಶನ್ ಸಹಿತ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ನಲ್ಲಿದ್ದರೆ ಇಪ್ಪತ್ತೆ$çದು ಸಾವಿರ ರೂ.ಗಳನ್ನು ನರೇಗಾ ಯೋಜನೆಯ ಶೇ.6ರ ಆಡಳಿತಾತ್ಮಕ ವೆಚ್ಚದಲ್ಲಿ ಪಾವತಿಸಲು ಮುಖ್ಯಕಾರ್ಯನಿರ್ವಾಹಕ ಅ ಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಈ ತುರ್ತು ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ಸಿಬ್ಬಂದಿ ಕೊರತೆ ಇದ್ದಲ್ಲಿ ಅದರ ನಿವಾರಣೆಗೆ ಸಿಇಒ ಅವರಿಂದ ಅನುಮತಿ ಪಡೆದು ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂದರು.
ಕುಡಿಯುವ ನೀರಿನಲ್ಲಿನ ದೋಷಗಳಿಂದಾಗಿ ಫಂಗಸ್ ಹರಡಿರುವ ಸಂಭವವಿದೆ ಎಂದು ತಜ್ಞರು ವರದಿ ನೀಡಿರುವ ಹಿನ್ನೆಲೆಯಲ್ಲಿ ನೀರನ್ನು ಕಾಯಿಸಿ ಆರಿಸಿ ಕುಡಿಯುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿ. ನಗರಗಳಿಂದ ಬಹುಸಂಖ್ಯಾತರು ಗ್ರಾಮೀಣ ಪ್ರದೇಶಗಳಿಗೆ ಹಿಂದಿರುಗುತ್ತಿದ್ದಾರೆ. ಅಂತಹ ವ್ಯಕ್ತಿಗಳ ಮೇಲೆ ನಿಗಾ ಇಡಬೇಕಾದ ಅಗತ್ಯವಿದೆ ಎಂದರು.
ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದಾಗ್ಯೂ ಸಾರ್ವಜನಿಕರು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸೋಂಕನ್ನು ನಿಯಂತ್ರಿಸುವಲ್ಲಿ ಜನಜಾಗೃತಿಯೊಂದೇ ಪರಿಹಾರ ಎಂದವರು ನುಡಿದರು.
ವಿಡಿಯೋ ಸಂವಾದದಲ್ಲಿ ಪಂಚಾಯಿತ್ ರಾಜ್ ಇಲಾಖೆಯ ಹಿರಿಯ ಅ ಧಿಕಾರಿಗಳು ಸೇರಿದಂತೆ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳ ವ್ಯಾಪ್ತಿಯ ಮುಖ್ಯ ಕಾರ್ಯನಿರ್ವಾಹಕ ಅ ಧಿಕಾರಿಗಳು, ಕಾರ್ಯನಿರ್ವಾಹಕ ಅ ಧಿಕಾರಿಗಳು, ಪಿಡಿಒಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.