ತರುಣ್ ತೇಜ್‍ಪಾಲ್ ವಿರುದ್ಧ ಅತ್ಯಾಚಾರ ಪ್ರಕರಣ : ಗೋವಾ ಸರ್ಕಾರ ಹೈಕೋರ್ಟ್ ನಲ್ಲಿ ಮೇಲ್ಮನವಿ
Team Udayavani, May 27, 2021, 4:28 PM IST
ಪಣಜಿ: ತೆಹೆಲ್ಕಾದ ಮಾಜಿ ಸಂಪಾದಕ ತರುಣ್ ತೇಜ್‍ಪಾಲ್ ವಿರುದ್ಧ ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿರುವ ಗೋವಾ ಸೆಷನ್ಸ ಕೋರ್ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಹೈಕೋರ್ಟನಲ್ಲಿ ಮೇಲ್ಮನವಿ ಸಲ್ಲಿಸಿದೆ. ಈ ಮೇಲ್ಮನವಿಯ ಪ್ರಾಥಮಿಕ ವಿಚಾರಣೆ ಗುರುವಾರ ನಡೆದಿದೆ.
ತೀರ್ಪಿನಲ್ಲಿ ಪೀಡಿತ ಯುವತಿ ಗುರುತು ಹಿಡಿಯುವ ಹಲವು ಮಾಹಿತಿಯಿದ್ದು ಅದನ್ನು ತೆಗೆದುಹಾಕುವಂತೆ ನ್ಯಾಯಾಲಯವು ಸೂಚನೆ ನೀಡಿದ್ದು, ಈ ಪ್ರಕರಣದ ವಿಚಾರಣೆಯನ್ನು ಜೂನ್ 2 ಕ್ಕೆ ಮುಂದೂಡಲಾಗಿದೆ.
ಮೇ 21 ರಂದು ಮಾಪ್ಸಾ ಸೇಷನ್ ಕೋರ್ಟನ ನ್ಯಾಯಮೂರ್ತಿ ಕ್ಷಮಾ ಜೋಶಿ ರವರು ತೇಜ್‍ಪಾಲ್ ಪ್ರಕರಣದ ತೀರ್ಪು ನೀಡಿದ್ದರು. ಈ ತೀರ್ಪಿಗೆ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಪತ್ರಿಕಾಗೋಷ್ಠಿ ನಡೆಸಿ- ತೇಜ್‍ಪಾಲ್ ಪ್ರಕರಣದಲ್ಲಿ ಎಲ್ಲ ಸಾಕ್ಷಿಗಳಿರುವಾಗ ಒಬ್ಬ ಮಹಿಳೆಗೆ ಅನ್ಯಾಯವಾಗುವುದನ್ನು ಗೋವಾ ಸರ್ಕಾರ ಸಹಿಸಿಕೊಳ್ಳುವುದಿಲ್ಲ.
ಇದರಿಂದಾಗಿ ಗೋವಾ ಸರ್ಕಾರವೇ ಈ ಪ್ರಕರಣದಲ್ಲಿ ಉಚ್ಛ ನ್ಯಾಯಾಲಯದ ಮೆಟ್ಟಿಲೇರಲಿದೆ ಎಂದು ಹೇಳಿದ್ದರು. ಅಂತೆಯೇ ಗೋವಾ ಸೆಷನ್ಸ ಕೋರ್ಟ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಬುಧವಾರ ಹೈಕೋರ್ಟನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ ಜೂನ್ 2 ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.