ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 98 ಅಂಕ ಏರಿಕೆ, 15,300ರ ಗಡಿ ದಾಟಿದ ನಿಫ್ಟಿ
ಟೋಕಿಯೊ ಷೇರುಮಾರುಕಟ್ಟೆಯಲ್ಲಿ ನೆಗೆಟಿವ್ ಟ್ರೆಂಡ್ ಇದ್ದು, ಶಾಂಘೈ ಷೇರುಪೇಟೆ ಲಾಭದ ವಹಿವಾಟು ನಡೆಸಿದೆ.
Team Udayavani, May 27, 2021, 4:37 PM IST
ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ದುರ್ಬಲ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯಲ್ಲಿ ಗುರುವಾರ (ಮೇ 27) ಸಂವೇದಿ ಸೂಚ್ಯಂಕ ಕೇವಲ 98 ಅಂಕಗಳಷ್ಟು ಏರಿಕೆ ಕಂಡು ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:1 ಲಕ್ಷ ರೂ.ಸಂಬಳ ಇದೆ, ನಿಮ್ಮ ಮಗಳನ್ನ ನನಗೆ ಕೊಡಿ: ಶಾರುಖ್ ಪುತ್ರಿಗೆ ಮದುವೆ ಪ್ರಪೋಸಲ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 97.70 ಅಂಕಗಳ ಏರಿಕೆಯೊಂದಿಗೆ 51,115.22 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಳಿಸಿದೆ. ಎನ್ ಎಸ್ ಇ ನಿಫ್ಟಿ ಕೂಡಾ 36.40 ಅಂಕಗಳ ಏರಿಕೆಯೊಂದಿಗೆ 15,337.85ರ ಗಡಿ ದಾಟಿದೆ.
ಸೆನ್ಸೆಕ್ಸ್ ಏರಿಕೆಯಿಂದ ಎಸ್ ಬಿಐ, ಕೋಟಕ್ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಬಜಾಜ್ ಆಟೋ, ಟೆಕ್ ಮಹೀಂದ್ರಾ, ಆಲ್ಟ್ರಾ ಟೆಕ್ ಸಿಮೆಂಟ್ ಮತ್ತು ಪವರ್ ಗ್ರಿಡ್ ಷೇರುಗಳು ಲಾಭಗಳಿಸಿದೆ.
ಮತ್ತೊಂದೆಡೆ ಎಚ್ ಡಿಎಫ್ ಸಿ, ಬಜಾಜ್ ಫೈನಾನ್ಸ್, ಒಎನ್ ಜಿಸಿ ಮತ್ತು ಭಾರ್ತಿ ಏರ್ ಟೆಲ್ ಷೇರುಗಳು ನಷ್ಟ ಅನುಭವಿಸಿದೆ. ಹಾಂಗ್ ಕಾಂಗ್, ಸಿಯೋಲ್ ಮತ್ತು ಟೋಕಿಯೊ ಷೇರುಮಾರುಕಟ್ಟೆಯಲ್ಲಿ ನೆಗೆಟಿವ್ ಟ್ರೆಂಡ್ ಇದ್ದು, ಶಾಂಘೈ ಷೇರುಪೇಟೆ ಲಾಭದ ವಹಿವಾಟು ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.