ತರುಣ್ ತೇಜ್ಪಾಲ್ ಪ್ರಕರಣ : ಜೂನ್ 2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Team Udayavani, May 27, 2021, 6:25 PM IST
ಪಣಜಿ: ತೆಹೆಲ್ಕಾದ ಮಾಜಿ ಸಂಪಾದಕ ತರುಣ್ ತೇಜ್ಪಾಲ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿರುವ ಗೋವಾ ಸೆಷನ್ಸ ಕೋರ್ಟ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಹೈಕೋರ್ಟನಲ್ಲಿ ಸಲ್ಲಿಸಿರುವ ಮೇಲ್ಮನವಿಯ ಪ್ರಾಥಮಿಕ ವಿಚಾರಣೆ ಗುರುವಾರ ನಡೆದಿದೆ.
ಸೆಷೆನ್ಸ್ ಕೋರ್ಟ ತೀರ್ಪಿನಲ್ಲಿ ಸತ್ರಸ್ಥೆ ಯುವತಿ ಗುರುತು ಹಿಡಿಯುವ ಹಲವು ಮಾಹಿತಿಯಿದ್ದು ಅದನ್ನು ತೆಗೆದುಹಾಕುವಂತೆ ನ್ಯಾಯಾಲಯವು ಸೂಚನೆ ನೀಡಿದ್ದು, ಈ ಪ್ರಕರಣದ ವಿಚಾರಣೆಯನ್ನು ಜೂನ್ 2 ಕ್ಕೆ ಮುಂದೂಡಲಾಗಿದೆ.
ಮೇ 21 ರಂದು ಮಾಪ್ಸಾ ಸೇಷನ್ ಕೋರ್ಟನ ನ್ಯಾಯಮೂರ್ತಿ ಕ್ಷಮಾ ಜೋಶಿರವರು ತೇಜ್ಪಾಲ್ ಪ್ರಕರಣದ ತೀರ್ಪು ನೀಡಿದ್ದರು. ಈ ತೀರ್ಪಿನ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಪತ್ರಿಕಾಗೋಷ್ಠಿ ನಡೆಸಿ ತೇಜ್ಪಾಲ್ ಪ್ರಕರಣದಲ್ಲಿ ಎಲ್ಲ ಸಾಕ್ಷಿಗಳಿರುವಾಗ ಒಬ್ಬ ಮಹಿಳೆಗೆ ಅನ್ಯಾಯವಾಗುವುದನ್ನು ಗೋವಾ ಸರ್ಕಾರ ಸಹಿಸಿಕೊಳ್ಳುವುದಿಲ್ಲ. ಇದರಿಂದಾಗಿ ಗೋವಾ ಸರ್ಕಾರವೇ ಈ ಪ್ರಕರಣದಲ್ಲಿ ಉಚ್ಛ ನ್ಯಾಯಾಲಯದ ಮೆಟ್ಟಿಲೇರಲಿದೆ ಎಂದು ಹೇಳಿದ್ದರು. ಅಂತೆಯೇ ಗೋವಾ ಸೆಷನ್ಸ ಕೋರ್ಟ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಬುಧವಾರ ಹೈಕೋರ್ಟನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ ಜೂನ್ 2 ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.