ಕೋವಿಡ್ ಲಸಿಕೆಯನ್ನು ರಾಷ್ಟ್ರೀಯ ಆಂದೋಲನವನ್ನಾಗಿಸಿ: ಜಿಲ್ಲಾ ಕಾಂಗ್ರೆಸ್
Team Udayavani, May 27, 2021, 10:45 PM IST
ಉಡುಪಿ: ಕೋವಿಡ್ ಲಸಿಕೆ ತೆಗೆದುಕೊಳ್ಳುವುದನ್ನು ಕೇಂದ್ರ ಸರಕಾರ ಒಂದು ರಾಷ್ಟ್ರೀಯ ಆಂದೋಲನವನ್ನಾಗಿ ರೂಪಿಸಬೇಕು. ಲಸಿಕೆಯನ್ನು ದೇಶದ ಜನರಿಗೆ ಉಚಿತ ಮತ್ತು ಕಡ್ಡಾಯಗೊಳಿಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸರಕಾರವನ್ನು ಒತ್ತಾಯಿಸಿದೆ.
ಕೋವಿಡ್ ನಿರ್ವಹಣೆ ಮತ್ತು ಲಸಿಕೆ ಸರಬುರಾಜಿನಲ್ಲಿ ಸರಕಾರ ಎಡವಿದೆ. ರಾಜಕೀಯದ ಅಸ್ತಿತ್ವಕ್ಕಾಗಿ ಸುಳ್ಳು ಹೇಳಿಕೆಗಳ ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದೆ. 2ನೇ ಲಸಿಕೆಗಾಗಿಯೇ ಜನರು ಪರದಾಡುತ್ತಿದ್ದಾರೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದಾಗಿ ಹೇಳಿ, ಆನ್‌ಲೈನ್ ನೊಂದಣಿ ಹೆಸರಿನಲ್ಲಿ ಲಸಿಕಾ ಕೊರತೆ ಮರೆಮಾಚುವ ವ್ಯವಸ್ಥಿತ ನಾಟಕ ನಡೆಸುತ್ತಿದೆ. ಕೇಂದ್ರ ಸರಕಾರ ತನ್ನ ಆರ್ಥಿಕ ಲೆಕ್ಕಾಚಾರದಿಂದ ಹೊರ ಬಂದು ಸೂಕ್ತ ಕ್ರಮ ಕೈಗೊಳ್ಳ ಬೇಕು ಎಂದರು.
ಕೇಂದ್ರ ಸರಕಾರ ಕಳೆದ ಫೆ.ಯಲ್ಲಿ 50 ಕೋಟಿ ಜನರಿಗೆ ಉಚಿತ ಲಸಿಕೆಗಾಗಿ 35 ಸಾವಿರ ಕೋ.ರೂ. ಮೀಸಲಿಟ್ಟಿದೆ ಎಂದು ಹೇಳಿತ್ತಾದರೂ ವಾಸ್ತವದಲ್ಲಿ ಸಿರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಲಸಿಕಾ ಸರಬರಾಜು ಸಮಸ್ಥೆಯಿಂದ ಮಾರ್ಚ್ ತಿಂಗಳಲ್ಲಿ ಪಡೆದದ್ದು ಕೇವಲ 2.10 ಕೋಟಿ ಡೋಸ್ ಮಾತ್ರ. ಈ ನಡುವೆ ಲಸಿಕೆಯನ್ನು ರಾಜ್ಯ ಸರಕಾರಗಳೇ ಪೂರೈಸಿಕೊಳ್ಳಬೇಕೆ ಅಥವಾ ಕೇಂದ್ರ ಸರಕಾರವೇ ಪೂರೈಸುತ್ತದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲವೆಂದು ಹೇಳಿದರು.
ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭ ಅದರ ಕೇಂದ್ರ ಸರಕಾರದ ಹೊಣೆಗಾರಿಕೆಯನ್ನು ತೆಗೆದುಕೊಳ್ಳಬೇಕು. ಆದರೆ ನಿಷ್ಕ್ರಿಯಗೊಂಡ ರಾಜ್ಯ ಸರಕಾರ ಇದನ್ನು ಪ್ರಶ್ನಿಸುವ ಧೈರ್ಯ ತೋರದೆ ಲಸಿಕೆಗಾಗಿ ಜನರನ್ನು ಬೀದಿಗೆ ಬೀಳಿಸಿದೆ ಎಂದು ಜಿಲ್ಲಾ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.