ನೀಗಿತು ಕುಡಿಯುವ ನೀರಿನ ಸಮಸ್ಯೆ

ಶಾಸಕ ದಿನಕರ ಶೆಟ್ಟಿ  ಇಚ್ಛಾಶಕ್ತಿ-ಜನಪರ ಕಾಳಜಿ­ನಿಟ್ಟು ಸಿರು ಬಿಟ್ಟ ಅಘನಾಶಿನಿ ನಿವಾಸಿಗಳು

Team Udayavani, May 27, 2021, 9:19 PM IST

6465465454

ಕುಮಟಾ: ತಾಲೂಕಿನ ಕಾಗಾಲ ಗ್ರಾಪಂ ವ್ಯಾಪ್ತಿಯ ಅಘನಾಶಿನಿ ಭಾಗದ ನಿವಾಸಿಗಳು ಕಳೆದ ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಬವಣೆ ಎದುರಿಸುತ್ತಿದ್ದು, ಶಾಸಕ ದಿನಕರ ಶೆಟ್ಟಿಯವರ ಇಚ್ಛಾಶಕ್ತಿ ಹಾಗೂ ಜನಪರ ಕಾಳಜಿಯಿಂದ ಇದಕ್ಕೀಗ ಮುಕ್ತಿ ದೊರೆತಂತಾಗಿದೆ.

ಕಳೆದ ಸಾಲಿನಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಬಿಡುಗಡೆಯಾದ ಅನುದಾನದಲ್ಲಿ ಗ್ರಾಪಂ ಟಾಸ್ಕ್ಫೋರ್ಸ್‌ ಸಮಿತಿ ಮೂಲಕ ಕೊಳವೆಬಾವಿ ನಿರ್ಮಿಸಿ, ಅಘನಾಶಿನಿ ಭಾಗದ ಜನತೆಗೆ ಕುಡಿಯುವ ನೀರು ಪೂರೈಸುವಲ್ಲಿ ಶಾಸಕ ಶೆಟ್ಟಿ ಯಶಸ್ವಿಯಾಗಿದ್ದಾರೆ. ಅಘನಾಶಿನಿ ಭಾಗದ ಜನತೆ ಕಳೆದ ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದು, ಅಘನಾಶಿನಿ ನದಿ ಅರಬ್ಬಿ ಸಮುದ್ರಕ್ಕೆ ಸಂಗಮವಾಗುವ ಈ ಭಾಗದಲ್ಲಿ ತೆರೆದ ಬಾವಿ ನಿರ್ಮಿಸಿದರೆ ಉಪ್ಪು ನೀರು ಸೇರುವ ಸಾಧ್ಯತೆ ಅಧಿಕವಾಗಿದೆ. ಅಲ್ಲದೇ, ಮಳೆಗಾಲದಲ್ಲಿಯೂ ಸಹ ಸಿಹಿ ನೀರಿನ ಮೂಲಗಳಿಗೆ ಉಪ್ಪು ನೀರು ಸೇರ್ಪಡೆಗೊಳ್ಳುವ ಕಾರಣ ಸ್ಥಳೀಯ ಜನತೆ ಕುಡಿಯುವ ನೀರಿಗಾಗಿ ಪರಿತಪಿಸಬೇಕಾಗಿತ್ತು.

ಈ ಬಗ್ಗೆ ಸ್ಥಳೀಯ ಗ್ರಾ.ಪಂ ಹಲವು ಕ್ರಮ ಕೈಗೊಂಡರೂ ಶಾಶ್ವತ ಪರಿಹಾರ ಮಾತ್ರ ದೊರೆತಿರಲಿಲ್ಲ. ಈ ಸಂಬಂಧ ಸ್ಥಳೀಯರು ಸಂಬಂಧಿಸಿದ ಇಲಾಖೆ ಹಾಗೂ ಶಾಸಕ ದಿನಕರ ಶೆಟ್ಟಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿದ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಅಲ್ಲದೇ, ಕಳೆದ ಸಾಲಿನಲ್ಲಿ ಕ್ಷೇತ್ರದ ಕುಡಿಯುವ ನೀರಿನ ಯೋಜನೆಗಾಗಿ ಬಿಡುಗಡೆಯಾದ 15 ಲಕ್ಷ ರೂ. ಅನುದಾನದಲ್ಲಿ 1.5 ಲಕ್ಷ ರೂ. ಅನುದಾನವನ್ನು ಆಘನಾಶಿನಿ ಭಾಗದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನೀಡುವುದಾಗಿ ಭರವಸೆ ನೀಡಿದ್ದರು.

ಶಾಸಕ ದಿನಕರ ಶೆಟ್ಟಿಯವರ ಸಹಕಾರದೊಂದಿಗೆ ಕಾಗಾಲ ಗ್ರಾಪಂ ಟಾಸ್ಕ್ಫೋರ್ಸ್‌ ಸಮಿತಿ ಶಾಸಕರ ಅನುದಾನದ ಜೊತೆಗೆ ಗ್ರಾ.ಪಂ ಅನುದಾನವನ್ನೂ ಬಳಸಿ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ಅಘನಾಶಿನಿಯ ಕಿರುಬೇಲೆ ಬಳಿ ಒಟ್ಟೂ 3 ಲಕ್ಷ ರೂ.ಗಳಲ್ಲಿ ಎರಡು ಬೋರ್‌ವೆಲ್‌ಗ‌ಳನ್ನು ತೆಗೆಸಿದ್ದು, ಇದರಿಂದ ಪಂಚಾಯತ ವ್ಯಾಪ್ತಿಯ ಬಹುತೇಕ ಭಾಗದ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಂತಾಗಿದೆ. ಪಂಚಾಯತ ವ್ಯಾಪ್ತಿಯ ಪ್ರತಿ ಮನೆಗಳಿಗೂ ನಳ ಅಳವಡಿಸಿ, ಮೀಟರ್‌ ಹಾಕುವ ಮೂಲಕ ಜನತೆಗೆ ಸಕಾಲಕ್ಕೆ ಕುಡಿಯುವ ನೀರು ಪೂರೈಸುವುದರ ಜೊತೆಗೆ ನೀರು ಪೋಲಾಗದಂತೆ ಕ್ರಮವಹಿಸಲು ಸ್ಥಳೀಯ ಗ್ರಾ.ಪಂ ಚಿಂತನೆ ನಡೆಸಿದೆ.

ಟಾಪ್ ನ್ಯೂಸ್

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Vidhana-Soudha-CM

Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Vidhana-Soudha-CM

Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.