ರೇಣುಕಾಚಾರ್ಯ ಕಾರ್ಯವೈಖರಿಗೆ ಸಂಸದರ ಶಹಬ್ಟಾಸ್‌ ಗಿರಿ


Team Udayavani, May 27, 2021, 9:21 PM IST

27-12

ಹೊನ್ನಾಳಿ: ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಕೊರೊನಾ ಮಹಾಮಾರಿಯನ್ನು ತೊಲಗಿಸಲು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಮೆಚ್ಚುಗೆ ವ್ಯಕ್ತಪಡಿಸಿದರು.

ಎಂ.ಪಿ. ರೇಣುಕಾಚಾರ್ಯ ಅವರು ತಮ್ಮ ತಂದೆ-ತಾಯಿ ಸ್ಮರಣಾರ್ಥ ನೀಡಿರುವ 4 ಆಂಬ್ಯುಲೆನ್ಸ್‌, 50 ಸ್ಟೀಲ್‌ ಕಾಟ್‌ ಹಾಗೂ 50 ಬೆಡ್‌ಗಳನ್ನು ಬುಧವಾರ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಹಸ್ತಾಂತರಿಸಿ ಆರೋಗ್ಯ ಇಲಾಖೆಗೆ ಹಸ್ತಾಂತರಿಸಿ ಮಾತನಾಡಿದರು. ತಾಲೂಕು ಆಸ್ಪತ್ರೆಗೆ ಅವಶ್ಯವಿರುವಷ್ಟು ಆಕ್ಸಿಜನ್‌ ಕಾನ್ಸಂಟ್ರೇಟರ್‌ಗಳು, ಆಕ್ಸಿಜನ್‌ ಘಟಕ ಸೆರಿದಂತೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ.

ಅಲ್ಲದೆ ಕೊರೊನಾ ವಿರುದ್ಧ ತಾವೇ ವಾರಿಯರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೊಂದು ದೊಡ್ಡ ಸಾಧನೆ ಎಂದರು. ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳಲ್ಲಿ ಕೊರೊನಾ ವ್ಯಾಪಕವಾಗಿ ಹಬ್ಬುತ್ತಿದೆ. ಜನರು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದಲ್ಲಿ ಅವಘಡಗಳು ಸಂಭವಿಸುತ್ತವೆ ಎಂದು ಎಚ್ಚರಿಸಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ನನ್ನ ತಾಯಿ ಕಮಲಮ್ಮ ಹಾಗೂ ತಂದೆ ಪಂಚಾಕ್ಷರಯ್ಯ ಅವರ ಬಲವಾದ ಆಶೀರ್ವಾದವೇ ನಾನು ಉನ್ನತ ಸ್ಥಾನಕ್ಕೇರಲು ಕಾರಣ. ಅವರ ಹೆಸರಿನಲ್ಲಿ ಅಳಿಲು ಸೇವೆ ಎನ್ನುವಂತೆ ಕೊರೊನಾ ವೇಳೆಯಲ್ಲಿ ಆಸ್ಪತ್ರೆಗೆ ತುರ್ತಾಗಿ ಬೇಕಾಗಿರುವ ಆಂಬ್ಯುಲೆನ್ಸ್‌, ಕಾಟ್‌ ಮತ್ತು ಬೆಡ್‌ಗಳನ್ನು ವೈಯಕ್ತಿಕವಾಗಿ ನೀಡಿದ್ದೇನೆ. ಅವುಗಳ ಸದುಪಯೋಗವಾದರೆ ಅದೇ ನನ್ನ ಪುಣ್ಯ ಎಂದು ಭಾವಿಸುವುದಾಗಿ ತಿಳಿಸಿದರು.

ಅವಳಿ ತಾಲೂಕುಗಳ ಜನರ ರಕ್ಷಣೆ ನನ್ನ ಮೊದಲ ಕರ್ತವ್ಯ. ನಾನೆಂದೂ ಮಾಲೀಕ ಎಂದು ತಿಳಿದುಕೊಳ್ಳದೇ ಜನರ ಸೇವಕನೆಂದು ಭಾವಿಸಿ ಕಾರ್ಯ ನಿರ್ವಹಿಸುತ್ತಿದ್ದೇನೆ. ನಾನು ದಿನದ 24 ಗಂಟೆಗಳಲ್ಲಿ 18 ಗಂಟೆ ಕೆಲಸ ಮಾಡುತ್ತೇನೆ. ಇದಕ್ಕೆ ಅವಳಿ ತಾಲೂಕುಗಳ ನಾಗರಿಕರ ಆಶೀರ್ವಾದವೇ ಕಾರಣ ಎಂದರು.

ಜಿಲ್ಲಾ ಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇಳಿಕೆಯಾಗುವ ನಿರೀಕ್ಷೆ ಇದೆ. ಜಿಲ್ಲೆಯಲ್ಲಿ ಒಟ್ಟು 1059 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ 416 ಪ್ರಕರಣಗಳು ಇವೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯಾಧಿ ಕಾರಿ ಡಾ| ನಾಗರಾಜ್‌, ಪುರಸಭಾಧ್ಯಕ್ಷ ಕೆ.ವಿ. ಶ್ರೀಧರ, ತಹಶೀಲ್ದಾರ್‌ ಬಸನಗೌಡ ಕೋಟೂರ, ಪಿಎಸ್‌ಐ ಬಸವರಾಜ ಆರ್‌. ಬಿರಾದಾರ್‌, ತಾಲೂಕು ಆರೋಗ್ಯಾಧಿಕಾರಿ ಡಾ.ಕೆಂಚಪ್ಪ ಇದ್ದರು.

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.