“ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಚಾಲನೆ
Team Udayavani, May 27, 2021, 10:13 PM IST
ಚಿತ್ರದುರ್ಗ: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರೋಗ ನಿಯಂತ್ರಣ ಹಾಗೂ ಜಾಗೃತಿಗಾಗಿ ರೂಪಿಸಿರುವ “ವೈದ್ಯರ ನಡೆ ಹಳ್ಳಿ ಕಡೆ’ ಎಂಬ ಕಾರ್ಯಕ್ರಮಕ್ಕೆ ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ ಬುಧವಾರ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಲಾಯಿತು.
ನಗರದ ಹೊರವಲಯದ ಪಿಳ್ಳೆಕೇರನಹಳ್ಳಿಗೆ ಭೇಟಿ ನೀಡಿದ ವೇಳೆ ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಜಿಲ್ಲೆಯ ವಿವಿಧೆಡೆ ಹಾಸ್ಟೆಲ್‌ಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಪ್ರಾರಂಭಿಸಲಾಗಿದೆ. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಹಾಸಿಗೆ, ಉಚಿತ ಊಟದ ವ್ಯವಸ್ಥೆ, ಬಿಸಿ ನೀರು, ಪ್ರತ್ಯೇಕ ಶೌಚಾಲಯ ಸೌಲಭ್ಯ, ವಿಶೇಷ ಕಾಳಜಿಯಿಂದ ಹಾಗೂ ಮಕ್ಕಳ ರೀತಿಯಲ್ಲಿ ಆರೈಕೆ ಮಾಡಲು ವೈದ್ಯರು ಹಾಗೂ ಶುಶ್ರೂಷಕರು ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಹಾಗಾಗಿ ಕೋವಿಡ್ ಸೋಂಕು ದೃಢಪಟ್ಟ ಸಂದರ್ಭದಲ್ಲಿ ಹೋಂ ಐಸೋಲೇಷನ್ ಬದಲಾಗಿ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗಿ ಕೆಲವು ದಿನಗಳ ಕಾಲ ಚಿಕಿತ್ಸೆ ಪಡೆದು ಗುಣಮುಖರಾಗಿ ಎಂದು ತಿಳಿಸಿದರು. ಜಿಪಂ ಸಿಇಒ ಡಾ| ಕೆ. ನಂದಿನಿದೇವಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ.
ಕೋವಿಡ್ ಸೋಂಕು ತಡೆಗಟ್ಟುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೋವಿಡ್ ಲಕ್ಷಣಗಳಿರುವವರು ತಕ್ಷಣ ಕೋವಿಡ್-19 ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
“ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಅಂಗವಾಗಿ ಚಿತ್ರದುರ್ಗ ತಾಲೂಕಿನ ಕಾಸವರಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಮದಕರಿಪುರ, ಜಿ.ಆರ್. ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಪಿಳ್ಳೇಕೆರೆನಹಳ್ಳಿ, ಗೊಡಬನಹಾಳ್ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗೊಡಬನಾಳ್ ಹಾಗೂ ಕ್ಯಾಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸೀಬಾರ ಗ್ರಾಮ ಸೇರಿದಂತೆ ಚಿತ್ರದುರ್ಗ ನಾಲ್ಕು ಹಳ್ಳಿಗಳಿಗೆ ಭೇಟಿ ನೀಡಿ ಜನರ ಆರೋಗ್ಯ ತಪಾಸಣೆ ನಡೆಸಲಾಯಿತು.
ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆ ಮಾಡಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು, ಕೋವಿಡ್ ಸೋಂಕಿನ ಪ್ರಸರಣದ ಸರಪಳಿ ತುಂಡರಿಸುವುದು, ಜನರನ್ನು ಪರೀಕ್ಷೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದು “ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಉದ್ದೇಶವಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ. ರಾಧಿ ಕಾ, ಡಿಎಚ್‌ಒ ಡಾ| ಸಿ.ಎಲ್. ಪಾಲಾಕ್ಷ, ತಹಶೀಲ್ದಾರ್ ಜೆ.ಸಿ. ವೆಂಕಟೇಶಯ್ಯ, ಸರ್ವೇಕ್ಷಣಾ ಧಿಕಾರಿ ಡಾ| ರಂಗನಾಥ್ ತಾಲೂಕು ಆರೋಗ್ಯಾಧಿ ಕಾರಿ ಡಾ| ಬಿ.ವಿ. ಗಿರೀಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.