ಹಿಂದೆ ಮಾಡಿದ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುತ್ತಿದೆ: ಕುಮಾರಸ್ವಾಮಿ
Team Udayavani, May 28, 2021, 8:37 AM IST
ಬೆಂಗಳೂರು: ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಿಂದಾಲ್ಗೆ ಲೀಸ್ ಕಂ ಸೇಲ್ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂಥಾಗಿದೆ ಎಂದಿದ್ದಾರೆ.
ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ ‘ಸಂಸ್ಕೃತಿ’. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್ ಸಾಕ್ಷಿ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.