ಮಂಗಳೂರು : ಅಕ್ರಮವಾಗಿ ಸಾಗಿಸುತ್ತಿದ್ದ 262 ಗ್ರಾಂ ಚಿನ್ನ ಪೊಲೀಸರ ವಶಕ್ಕೆ
Team Udayavani, May 28, 2021, 2:21 PM IST
ಮಂಗಳೂರು : ಅಕ್ರಮವಾಗಿ ಸಾಗಿಸುತ್ತಿದ್ದ 262 ಗ್ರಾಂ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ವಶ ಪಡಿಸಿಕೊಂಡಿರುವ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆರೋಪಿಯನ್ನು ಸಿದ್ದಿಕ್ ಮಿಕ್ಡಾಮ್ ಹುಸೇನ್(27) ಎಂದು ಗುರುತಿಸಲಾಗಿದೆ.
ಪೊಲೀಸರು ವಶಕ್ಕೆ ಪಡೆದಿರುವ ಚಿನ್ನವು ಸುಮಾರು 13 ಲಕ್ಷ ರೂ.ಬೆಲೆ ಬಾಳುತ್ತಿತ್ತು ಎಂದು ಹೇಳಲಾಗಿದೆ. ಆರೋಪಿಯು ಭಟ್ಕಳ ಮೂಲದವನಾಗಿದ್ದು, ಏರ್ ಇಂಡಿಯಾ ಫ್ಲೈಟ್ ಐಎಕ್ಸ್ 384 ಮೂಲಕ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದಾನೆ. ಈ ವೇಳೆ ಪೊಲೀಸರು ಚಿನ್ನವನ್ನು ವಶಕ್ಕೆ ಪಡೆದು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.
ಕಾರ್ಯಾಚರಣೆಯಲ್ಲಿ ಏರ್ ಕಸ್ಟಮ್ಸ್ ತಂಡದ ಪ್ರವೀಣ್ ಕಂಡಿ , ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳಾದ ರಾಕೇಶ್ ಕುಮಾರ್, ಸತೀಶ್ ಕುಮಾರ್, ಸಂದೀಪ್ ಸೇರಿದಂತೆ ಇತರರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.