ಬೆಳಗಾವಿ: ಕಬ್ಬಿನ ಬಾಕಿ ಬಿಲ್ ಪಾವತಿಗೆ ಜಿಲ್ಲಾಧಿಕಾರಿ ಸೂಚನೆ
Team Udayavani, May 28, 2021, 5:51 PM IST
ಬೆಳಗಾವಿ: 2020-21ನೇ ಸಕ್ಕರೆ ಹಂಗಾಮಿಗೆ ಕಬ್ಬು ಪೂರೈಸಿದ ರೈತರಿಗೆ ಬಾಕಿ ಬಿಲ್ಲನ್ನು ತಕ್ಷಣವೇ ಪಾವತಿಸಬೇಕು ಎಂದು ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಬ್ಬು ಸರಬರಾಜು ಮಾಡಿದ ರೈತರಿಗೆ ಕಬ್ಬು ನಿಯಂತ್ರಣ ಅಧಿನಿಯಮ-1966 ರಂತೆ ಕಬ್ಬು ಸರಬರಾಜು ಮಾಡಿದ 14 ದಿನದೊಳಗಾಗಿ ಮೊತ್ತ ಪಾವತಿಸಬೆಕೇಂಬ ನಿಯಮವಿದೆ. ಆದರೆ ಆಯುಕ್ತರು ಬಿಡುಗಡೆ ಮಾಡಿರುವ ವರದಿಯಂತೆ ಇನ್ನೂ ಕೆಲವು ಕಾರ್ಖಾನೆಯವರು ಪ್ರತಿಶತ 90 ಕ್ಕಿಂತ ಕಡಿಮೆ ಮೊತ್ತ ಪಾವತಿಸಿದ್ದಾರೆ ಎಂದು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಬಾಕಿ ಉಳಿದಿರುವ ಕಬ್ಬಿನ ಬಿಲ್ಲನ್ನು ಮೇ-2021 ರ ಅಂತ್ಯದೊಳಗೆ ಪಾವತಿಸಲು ಸಕ್ಕರೆ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಬಾಕಿ ಬಿಲ್ ಪಾವತಿಸಿದ ಬಳಿಕ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ವರದಿ ಸಲ್ಲಿಸಬೇಕು. ಒಂದು ವೇಳೆ ವರದಿ ಸಲ್ಲಿಸಲು ತಪ್ಪಿದ್ದಲ್ಲಿ ಕಬ್ಬು ನಿಯಂತ್ರಣ ಅಧಿನಿಯಮ-1966 ರಡಿ ಶಿಸ್ತು ಕ್ರಮ ಜರುಗಿಸಲು ಆಯುಕ್ತರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರಿಗೆ ಶಿಪಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.