ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಿ
Team Udayavani, May 28, 2021, 7:53 PM IST
ತುಮಕೂರು: ಕೊರೊನಾ ಮಹಾಮಾರಿಯಸಂದರ್ಭದಲ್ಲಿ ಜೀವದ ಹಂಗು ತೊರೆದು ಸೇವೆಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯಸರ್ಕಾರ ಪ್ರೋತ್ಸಾಹ ಧನ ಬಿಡುಗಡೆ ಮಾಡಿ ಕೊರೊನಾ ಸಂಕಷ್ಟದಲ್ಲಿ ನೆರವಾಗಬೇಕು ಎಂದುಗ್ರಾಮಾಂತರ ಶಾಸಕ ಡಿ .ಸಿ .ಗೌರಿಶಂಕರ್ ರಾಜ್ಯಸರ್ಕಾರವನ್ನು ಒತ್ತಾಯಿಸಿದರು.
ತುಮಕೂರು ಗ್ರಾಮಾಂತರ ಕ್ಷೇತ್ರದ ಬೆಳ್ಳಾವಿ,ಹೆಗ್ಗೆರೆ ಮಲ್ಲಸಂದ್ರ ವ್ಯಾಪ್ತಿಯ 400 ಆಶಾ ಹಾಗೂಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತರೇಷನ್ ಕಿಟ್, ಮಾಸ್ಕ್ , ಸ್ಯಾನಿಟೈಸರ್, ಫೇಸ್‌ಶೀಲ್ಡ…, ವಿತರಿಸಿ ಮಾತನಾಡಿದ ಅವರು, ಕಳೆದವರ್ಷ ಕೊರೊನಾ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಪ್ರೋತ್ಸಾಹಧನ ನೀಡಲಿಲ್ಲ, ಪ್ರೋತ್ಸಾಹ ಧನಕ್ಕೆಒತ್ತಾಯಿಸಿ ಪ್ರತಿಭಟನೆ ಮಾಡಿದಾಗ ಸರ್ಕಾರಪೊಲೀಸ್ ಬಲ ಬಳಸಿ ಪ್ರತಿಭಟನೆ ಹತ್ತಿಕ್ಕಲಾಯಿತು.ಈಗ ಕೊರೊನಾ 2ನೇ ಅಲೆಯಲ್ಲಿ ಆಶಾಕಾರ್ಯಕರ್ತೆಯರನ್ನೇ ಸೇವೆಗೆ ಬಳಸಿಕೊಳ್ಳುತ್ತಿದೆ.ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಆಶಾ ಕಾರ್ಯಕರ್ತೆಯರಿಗೆ ಶೀಘ್ರವಾಗಿ ಪ್ರೋತ್ಸಾಹ ಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸರ್ಕಾರಕ್ಕೆ ಟ್ವಿಟ್ ಮಾಡಿ ಮನವಿಮಾಡಿದ್ದಾರೆ.
ಸರ್ಕಾರ ಶೀಘ್ರವಾಗಿ ಪೋÅತ್ಸಾಹ ಧನಬಿಡುಗಡೆ ಮಾಡಿ ಆಶಾ ಕಾರ್ಯಕರ್ತೆಯರಕುಟುಂಬಕ್ಕೆ ಆಸರೆಯಾಗುವಂತೆ ಆಗ್ರಹಿಸಿದರು.ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯ್ತಿಇಒ ಅವರಿಂದ ಕೊರೊನಾ ಸೋಂಕಿತರ ಪಟ್ಟಿ ತರಿಸಿಕೊಂಡು ಅವರಿಗೆ ಉಚಿತ ರೇಷನ್ ಕಿಟ್ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಗ್ರಾಮಾಂತರಕ್ಷೇತ್ರಕ್ಕೆ ಎಲ್ಲ ಸೇವೆ ಮಾಡಲು ಸಿದ್ಧ ಎಂದರು.
ಆಕ್ಸಿಜನ್ ಬೆಡ್ ಸೇವೆ ಲಭ್ಯ: ಕೋಡಿಮುದ್ದನಹಳ್ಳಿಯಲ್ಲಿರುವ ಕೋವಿಡ್ ಕೇರ್ ಸೆಂಟರ್‌ನಲ್ಲಿ30 ಬೆಡ್‌ಗಳ ಆಕ್ಸಿಜನ್ ಬೆಡ್ ಸೇವೆ ಲಭ್ಯವಾಗಲಿದೆ. ಕ್ಷೇತ್ರದ ಜನತೆ ಇದರ ಸದುಪಯೋಗಪಡಿಸಿಕೊಳ್ಳಬೇಕು. ಹಾಗೆಯೇ ಕೋವಿಡ್ ಕೇರ್‌ಸೆಂಟರ್ ನಲ್ಲಿರುವ ರೋಗಿಗಳಿಗೆ ,ಮಾಸ್ಕ್ , ಊಟ,ಕಷಾಯ ಎಲ್ಲ ರೀತಿ ಸೌಕರ್ಯ ಒದಗಿಸಲಾಗುತ್ತಿದೆ. ಅದೇ ರೀತಿ ಕೋವಿಡ್ ಕೇರ್ ಸೆಂಟರ್‌ಗೆಸ್ವಂತವಾಗಿ 10 ಲಕ್ಷ ರೂ.ವೆಚ್ಚದಲ್ಲಿ ಔಷಧಖರೀದಿಸಿ ನೀಡಿರುವುದಾಗಿ ಹೇಳಿದರು. ತಾಲೂಕುಜೆಡಿಎಸ್ ಅಧ್ಯಕ್ಷ ರಾಮಚಂದ್ರಪ್ಪ, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಹಾಲನೂರು ಅನಂತಕುಮಾರ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆಗೌರಮ್ಮ, ವೈದ್ಯಾಧಿಕಾರಿ ಡಾ.ರಾಧಾಕೃಷ್ಣ, ಆರಕ್ಷಕ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.