ಕೋವಿಡ್ ಕಾಟದಿಂದಾಗಿ ಕೆಲಸವಿಲ್ಲದೇ ಸಂಕಷ್ಟ: ಬಾಣಸಿಗರ ಬದುಕು ಬೀದಿಗೆ

Team Udayavani, May 29, 2021, 10:13 AM IST

ಕೋವಿಡ್ ಕಾಟದಿಂದಾಗಿ ಕೆಲಸವಿಲ್ಲದೇ ಸಂಕಷ್ಟ: ಬಾಣಸಿಗರ ಬದುಕು ಬೀದಿಗೆ

ಸಿರುಗುಪ್ಪ: ಕಾರಬೂಂದಿ, ಲಾಡು, ಜಿಲೇಬಿ, ಮೈಸೂರ್‌ಪಾಕ್‌, ಜಹಾಂಗೀರ್‌, ಪಲಾವ್‌, ಚಿತ್ರನ್ನಾ, ಮೊಸರನ್ನ, ಅನ್ನ, ಸಾಂಬಾರ್‌, ಸಾರು, ಮಜ್ಜಿಗೆ ತಯಾರಿಸಿ ತಮ್ಮ ಜೀವನವನ್ನು ಸಾಗಿಸುತ್ತಿದ್ದ ತಾಲೂಕಿನ 200ಕ್ಕೂ ಹೆಚ್ಚು ಬಾಣಸಿಗರು ಯಾವುದೇ ಅಡುಗೆ ಮಾಡುವ ಕೆಲಸವಿಲ್ಲದೆ, ಆದಾಯವಿಲ್ಲದೆ ಅವರ ಬದುಕು ಬೀದಿಗೆ ಬಂದಿದೆ.

ಕಳೆದ ಒಂದು ವರ್ಷದಿಂದ ಕೊರೊನಾ ಮಹಾಮಾರಿಯ ಕಾಟದಿಂದಾಗಿ ಅದ್ಧೂರಿ ಮದುವೆ ಸಮಾರಂಭಗಳು ನಡೆಯುತ್ತಿಲ್ಲ. ಅದ್ಧೂರಿ ವಿವಾಹ ಭೋಜನದ ಖಾದ್ಯಗಳನ್ನು ಸಾವಿರಾರು ಆಮಂತ್ರಿತರಿಗೆ ಸಿದ್ಧಪಡಿಸಿ ಕೂಲಿ ಹಣ ಪಡೆಯುತ್ತಿದ್ದ ಬಾಣಸಿಗರಿಗೆ ಈಗ ಕೆಲಸವಿಲ್ಲ, ಕೂಲಿಯೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮದುವೆ ಸೇರಿದಂತೆ ಇತರೆ ಎಲ್ಲ ಶುಭಸಮಾರಂಭಗಳನ್ನು ಸರ್ಕಾರ ನಿಷೇಧ ಮಾಡಿರುವುದರಿಂದ ಯಾವುದೇ ಸಮಾರಂಭಗಳು ನಡೆಯುತ್ತಿಲ್ಲ. ಹೀಗಾಗಿ ಅವರು ತಮ್ಮ ಕುಟುಂಬದ ಹೊಟ್ಟೆ ತುಂಬಿಸಿಕೊಳ್ಳಲು ಪರದಾಡುವಂತಾಗಿದೆ.

ರೈತರು, ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳ ವಹಿವಾಟಿನ ಮೇಲೆ ತೀವ್ರವಾದ ಪ್ರಹಾರ ಮಾಡಿರುವ ಕೊರೊನಾ ಈಗ ಬಾಣಸಿಗರ ಬದುಕಿನ ಮೇಲೆ ಸಂಕಷ್ಟದ ಛಾಯೆ ಆವರಿಸುವಂತೆ ಮಾಡಿದೆ. ತಾಲೂಕಿನಲ್ಲಿ ಮದುವೆ ಸೇರಿದಂತೆ ಇತರೆ ಶುಭಸಮಾರಂಭಗಳಲ್ಲಿ ಸಾವಿರಾರು ಮಂದಿಗೆ ಅಡುಗೆ ಮಾಡಲು 200ಕ್ಕೂ ಹೆಚ್ಚು ಜನ ಬಾಣಸಿಗರಿದ್ದು, ಕೋವಿಡ್‌ 19 2ನೇ ಅಲೆಯು ತೀವ್ರವಾಗಿ ಹೆಚ್ಚಾಗುತ್ತಿದ್ದು, ಹಳ್ಳಿಗಳಿಗೂ ವ್ಯಾಪಿಸುತ್ತಿದೆ, ಶುಭಸಮಾರಂಭಗಳ ಮೇಲೆ ತಾಲೂಕಾಡಳಿತ ಮತ್ತು ಪೊಲೀಸ್‌ ಇಲಾಖೆ ಕಟ್ಟೆಚ್ಚರ ವಹಿಸಿದೆ. ಲಾಕ್‌ಡೌನ್‌ ಘೋಷಣೆಯಾದ ಮೇಲೆ ಇಂತಹ ಸಮಾರಂಭಗಳ ಮೇಲೆ ಸರ್ಕಾರ ಹದ್ದಿನಕಣ್ಣಿಟ್ಟಿದೆ.

ನಿಗದಿತ ಮದುವೆಗೂ ಅವಕಾಶ ಇಲ್ಲದಂತಾಗಿದ್ದು, ರುಚಿಕಟ್ಟಾಗಿ ಅಡುಗೆ ತಯಾರಿಸಿ ಉಣಬಡಿಸಲು ನೆರವಾಗುತ್ತಿದ್ದ ಬಾಣಸಿಗರ ಮೇಲೆ ಈ ನಿಯಮ ಬರೆ ಎಳೆದಂತಾಗಿದೆ. ಕೇವಲ 3 ತಿಂಗಳ ಅವ ಧಿಯಲ್ಲಿಯೇ ನಡೆಯುವ ಮದುವೆಯ ಸುಗ್ಗಿ ಕಾಲದಲ್ಲಿ ಹತ್ತಾರು ಮದುವೆಯಲ್ಲಿ ಅಡುಗೆ ಮಾಡಿ ವರ್ಷಕ್ಕೆ ಆಗುವಷ್ಟು ಕುಟುಂಬದ ಎಲ್ಲ ಖರ್ಚುವೆಚ್ಚದ ಗಳಿಕೆ ಮಾಡುತ್ತಿದ್ದ ನಮಗೆ ದುಡಿಮೆ ಇಲ್ಲದಂತಾಗಿದೆ. ಮದುವೆಗೆ ಈಗಂತು ಅನುಮತಿ ಇಲ್ಲದಿರುವುದರಿಂದ ಯಾರು ಕರೆಯುತ್ತಿಲ್ಲ. ಇದರಿಂದಾಗಿ ಅಡುಗೆ ಸಿದ್ಧಪಡಿಸಲು ಸಾಧ್ಯವಿಲ್ಲ. ಹೀಗಾಗಿ ನಮಗೆ ಕೂಲಿ ದೊರೆಯುತ್ತಿಲ್ಲವೆಂಬ ಅಳಲು ಬಾಣಸಿಗರದ್ದಾಗಿದೆ.

ಅಸಂಘಟಿತ ವಲಯವಾಗಿರುವ ಬಾಣಸಿಗರಿಗೂ ಸರ್ಕಾರ ಪರಿಹಾರ ಘೋಷಣೆ ಮಾಡಬೇಕು, ನಮ್ಮದೇನು ದೊಡ್ಡ ಸಂಖ್ಯೆಯಲ್ಲ, ಸಂಕಷ್ಟದ ಪರಿಸ್ಥಿತಿಯಲ್ಲಾದರೂ ಸರ್ಕಾರ ನಮ್ಮ ಬಾಣಸಿಗರಿಗೆ ಪ್ಯಾಕೇಜ್‌ ಘೋಷಣೆ ಮಾಡುವುದರ ಮೂಲಕ ನೆರವಿನ ಹಸ್ತ ಚಾಚಬೇಕು. ನಂದವಾರ ಮಲ್ಲಿಕಾರ್ಜುನ, ಬಾಣಸಿಗ.

-ಆರ್‌. ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.