ಕರಾಯ ಅವಳಿ ಮನೆ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
Team Udayavani, May 29, 2021, 2:03 PM IST
ಉಪ್ಪಿನಂಗಡಿ: ಇಲ್ಲಿನ ಕರಾಯ ಪರಿಸರದಲ್ಲಿ ನಡೆದ ಎರಡು ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ಉರುವಾಲು ಗ್ರಾಮದ ಸಂಶುದ್ದೀನ್ ಯಾನೆ ಸಂಶು, ಕರಾಯದಲ್ಲಿ ನೆಲೆಸಿರುವ ನವಾಜ್ ಮಹಮ್ಮದ್, ಯು.ನಿಜಾಮ್ ಮತ್ತು ಸರ್ಫರಾಜ್ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಜನವರಿ 14ರಂದು ಕರಾಯ ಗ್ರಾಮದ ಶರತ್ ಎಂಬವರ ಮನೆಗೆ ಯಾರೂ ಇಲ್ಲದ ಸಮಯದಲ್ಲಿ ನುಗ್ಗಿ 3,81,000 ರೂ ಮೌಲ್ಯದ ಚಿನ್ನಾಭರಣ ಮತ್ತು 14 ಸಾವಿರ ರೂ ನಗದು ದೋಚಿದ್ದರು. ಮೇ 14ರಂದು ಉರುವಾಲು ಗ್ರಾಮದ ಮುರಿಯಾಳದ ಶಾಹೀದಾ ಎಂಬವರ ಮನೆಗೆ ನುಗ್ಗಿ 1,70,000 ರೂ ಮೌಲ್ಯದ ಚಿನ್ನಾಭರಣ ಮತ್ತು ನಾಲ್ಕು ಸಾವಿರ ರೂ. ನಗದು ದೋಚಿದ್ದರು. ಎರಡೂ ಘಟನೆಗಳ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ:ಉತ್ತರಪ್ರದೇಶದಲ್ಲಿ ಮತ್ತೊಂದು ಕಳ್ಳಭಟ್ಟಿ ಮದ್ಯದ ದುರಂತ; 22 ಮಂದಿ ಸಾವು; ಐವರು ಅಮಾನತು
ಈ ಬಗ್ಗೆ ತನಿಖೆ ನಡೆಸಲು ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಮೇ.28ರಂದು ನೆಕ್ಕಿಲಾಡಿ ಚೆಕ್ ಪೋಸ್ಟ್ ಬಳಿ ಆರೋಪಿಗಳನ್ನು ಸೆರೆ ಹಿಡಿದಿದ್ದು, ಅವರಿಂದ 5,50,000 ರೂ ಮೌಲ್ಯದ ಚಿನ್ನಾಭರಣ ಮತ್ತು ಮೂರು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳಲ್ಲಿ ಸಂಶುದ್ದೀನ್ ಎಂಬಾತ ಬೆಂಗಳೂರು ಉಪ್ಪಾರ ಪೇಟೆ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.