ಬೀಜ ಮಾರಾಟ ಪರವಾನಗಿ ಪಡೆಯಲು ಅರ್ಜಿ ಆಹ್ವಾನ
Team Udayavani, May 29, 2021, 3:51 PM IST
ಬಳ್ಳಾರಿ: ತೋಟಗಾರಿಕೆ ಇಲಾಖೆಯಿಂದ ತೋಟಗಾರಿಕೆ ಬೀಜಗಳ ಮಾರಾಟ ಪರವಾನಿಗೆ ಪಡೆಯಲು ತೋಟಗಾರಿಕೆ ಬೀಜಗಳ ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೋಟಗಾರಿಕೆ ಬೆಳೆಗಳ (ಹೂವು, ಹಣ್ಣು ಮತ್ತು ತರಕಾರಿ) ಉತ್ಪಾದನೆಯಲ್ಲಿ ಉಪಯೋಗಿಸಲಾಗುವ ಬೀಜದ ಗುಣಮಟ್ಟ ಬಹಳ ಮುಖ್ಯವಾಗಿರುವುದರಿಂದ, ಬಳ್ಳಾರಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದ ಬೀಜಗಳನ್ನು ಮಾರಾಟ ಮಾಡುತ್ತಿರುವ ವಿತರಕರು (ಡೀಲರ್ಸ್) ತರಕಾರಿ ಬೀಜ ಮಾರಾಟ ಪರವಾನಗಿಯನ್ನು ತೋಟಗಾರಿಕೆ ಇಲಾಖೆಯಿಂದ ನೀಡಲಾಗುತ್ತಿದ್ದು, ವಿತರಕರು (ಡೀಲರ್ಸ್) ಕೂಡಲೇ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕಚೇರಿಗಳಿಗೆ ಭೇಟಿ ನೀಡಿ, ಅರ್ಜಿಯನ್ನು ನೋಂದಣಿ ಮಾಡಿ ಮಾರಾಟ ಪರವಾನಗಿ ಪಡೆಯಬಹುದು. ಜಿಲ್ಲೆಯಲ್ಲಿ ಈಗಾಗಲೇ ಕಂಪನಿಯವರು ನಿಗದಿಪಡಿಸಿರುವ ದರಗಳಿಗಿಂತ ಹೆಚ್ಚಿನ ಬೆಲೆಗೆ ತರಕಾರಿ ಬೀಜ ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದು, ಈ ಬಗ್ಗೆ ರೈತರು ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವ ವಿತರಕರ (ಡೀಲರ್ಸ್) ಬಗ್ಗೆ ದೂರು ನೀಡಿದ್ದಲಿ ಅಂತಹ ವಿತರಕರ (ಡೀಲರ್ಸ್) ಪರವಾನಗಿಯನ್ನು ರದ್ದುಪಡಿಸಿ, ಬೀಜ ನಿಯಂತ್ರಣ ಕಾಯ್ದೆ-1983 ಅನ್ವಯ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಮುಂಗಾರು ಹಂಗಾಮಿನ ಚಟುವಟಿಕೆಗಳು ಜಿಲ್ಲೆಯಲ್ಲಿ ಈಗಾಗಲೇ ಆರಂಭಗೊಂಡಿದ್ದು, ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಕೆಂಪು ಮೆಣಸಿನಕಾಯಿ ಬೆಳೆಯ ಸಿಜೆಂಟಾ ಕಂಪನಿಯ ತಳಿಗಳಾದ 5531, 2043 ಬಿತ್ತನೆ ಬೀಜಗಳಿಗೆ ಪ್ರಸ್ತುತ ಉತ್ತಮ ಬೇಡಿಕೆಯಿದೆ. ವಿವಿಧ ಕಂಪನಿಯ ತಳಿಗಳು ಸಹ ಉತ್ತಮ ಇಳುವರಿ,ಗುಣಮಟ್ಟ ಹಾಗೂ ಉತ್ತಮ ಮಾರುಕಟ್ಟೆ ಮೌಲ್ಯವನ್ನು ಹೊಂದಿರುವುದರಿಂದ ರೈತರು ಆದ್ಯತೆ ಮೇರೆಗೆ ಬಿತ್ತನೆಗೆ ಉಪಯೋಗಿಸಬಹುದಾಗಿದೆ. ರೈತರಿಗೆ ಉತ್ತಮ ಬಿತ್ತನೆ ಬೀಜ ಒದಗಿಸುವ ಉದ್ದೇಶಕ್ಕಾಗಿ ಪ್ರಮಾಣಕ್ಕೆ ಅನುಗುಣವಾಗಿ ಬೀಜಗಳನ್ನು ನೀಡುತ್ತಿದ್ದು, ರೈತರು ಬಿಲ್ಲು ಸಮೇತ ಬೀಜ ಖರೀದಿಸಬೇಕು. ಈ ಕ್ರಮವನ್ನು ಅನುಸರಿಸದೇ ಖರೀದಿಸಿದಲ್ಲಿ ಮುಂದಿನ ದಿನಗಳಲ್ಲಿ ಯಾವುದಾದರೂ ಬೆಳೆ ನಷ್ಟ ಹಾಗೂ ಕಳಪೆ ಗುಣಮಟ್ಟದ ಬೀಜದ ಕುರಿತು ವರದಿಯಾದರೆ ರೈತರ ಪರಿಹಾರ ಧನ ಹಾಗೂ ಇತರೇ ಸೌಲಭ್ಯಗಳನ್ನು ನಿಯಮಾನುಸಾರ ಒದಗಿಸಲು ಕಷ್ಟವಾಗುತ್ತದೆ. ಹಾಗಾಗಿ ರೈತರು ಬಿಲ್ಲು ಸಮೇತ ಬೀಜಗಳನ್ನು ಖರೀದಿಸಿ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.