ಆದ್ಯತಾ ಗುಂಪಿಗೆ ಲಸಿಕೆ : ಜಿಲ್ಲಾಧಿಕಾರಿ ಜ್ಯೋತ್ಸ್ನಾ

Team Udayavani, May 29, 2021, 4:18 PM IST

zsdfghn zxcvbvcxz

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಮುಂಚೂಣಿ ಕಾರ್ಯರ್ತರೊಂದಿಗೆ ಸರ್ಕಾರ ಸೂಚಿಸಿದ ಆದ್ಯತಾ ವಲಯ ಮತ್ತು ಗುಂಪುಗಳಿಗೆ ಕೊರೊನಾ ಲಸಿಕೆ ನೀಡಲು ಶುರು ಮಾಡಲಾಗಿದೆ. ಕೆಲವು ಕಡೆ ಕಾಮಗಾರಿ ಸ್ಥಳದಲ್ಲೇ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ  ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾದ್ಯಂತ ಈಗಾಗಲೇ 2.30 ಲಕ್ಷ ಜನರು ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ. 57 ಸಾವಿರ ಜನರಿಗೆ ಎರಡನೇ ಡೋಸ್‌ ಲಸಿಕೆ ನೀಡಲಾಗಿದೆ. ಕೆಲ ದಿನಗಳ ಹಿಂದೆ ಲಸಿಕೆ ಕೊರತೆ ಇತ್ತು. ಆದರೆ, ಜಿಲ್ಲೆಯಲ್ಲಿ ಈಗ 20 ಸಾವಿರ ಡೋಸ್‌ ಕೋವಿಶೀಲ್ಡ್‌ ಮತ್ತು ಸುಮಾರು ಐದು ಸಾವಿರ ಡೋಸ್‌ ಕೋವ್ಯಾಕ್ಸಿನ್‌ ಲಸಿಕೆ ಲಭ್ಯ ಇದೆ ಎಂದು ಹೇಳಿದರು. ಕೋವಿಶೀಲ್ಡ್‌ ಎರಡನೇ ಡೋಸ್‌ ಪಡೆಯುವಿಕೆ ಅವಧಿಯನ್ನು 12 ವಾರಗಳಿಗೆ ವಿಸ್ತರಿಸಲಾಗಿದೆ. ಕೋವ್ಯಾಕ್ಸಿನ್‌ ಲಸಿಕೆಗೆ ನಾಲ್ಕು ವಾರಗಳ ಅಂತರವೇ ಮುಂದುವರಿದಿದೆ. ಹೀಗಾಗಿ ಸರ್ಕಾರದ ನಿರ್ದೇಶನದ ಪ್ರಕಾರದ ಎರಡನೇ ಡೋಸ್‌ ಲಸಿಕೆ ನೀಡಲು ಆದ್ಯತೆ ನೀಡಲಾಗುತ್ತಿದೆ.

ಮುಂಚೆಯೇ ಅನಗತ್ಯವಾಗಿ ಲಸಿಕಾ ಕೇಂದ್ರಕ್ಕೆ ಬಂದು ಸಾಲುಗಟ್ಟಿ ನಿಲ್ಲುವ ಅಗತ್ಯವಿಲ್ಲ. ಎರಡನೇ ಲಸಿಕೆ ಸಂಬಂಧ ನಿಮ್ಮ ಮೊಬೈಲ್‌ಗೆ ಸಂದೇಶ ಬಂದ ನಂತರವೇ ಕೇಂದ್ರಗಳಿಗೆ ಬನ್ನಿ ಎಂದು ಮನವಿ ಮಾಡಿದರು. ನೋಡಲ್‌ ಅಧಿಕಾರಿಗಳ ನೇಮಕ: ಮುಂಚೂಣಿ ಕಾರ್ಯರ್ತರೊಂದಿಗೆ ಆದ್ಯತಾ ಗುಂಪುಗಳಿಗೂ ಲಸಿಕೆ ನೀಡಲು ಸರ್ಕಾರ ಮಾರ್ಗಸೂಚಿ ನೀಡಿದೆ. ಅಂಗವಿಕಲರು, ಕೈದಿಗಳು, ಚಿತಾಗಾರ ಮತ್ತು ಸ್ಮಶಾನಗಳಲ್ಲಿ ಕೆಲಸ ಮಾಡುವರು, ಕ್ಯಾಬ್‌ ಚಾಲಕರು, ಆಟೋ ಚಾಲಕರು, ಬೀದಿ ವ್ಯಾಪಾರಿಗಳು, ಕೊರೊನಾ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು, ನೀರು ಸರಬರಾಜು ಮತ್ತು ವಿದ್ಯುತ್‌ ಪೂರೈಕೆ ಕಾರ್ಮಿಕರಿಗೆ ಆದ್ಯತೆ ಮೇಲೆ ಲಸಿಕೆ ಕೊಡಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಇವರಿಗೆ ಲಸಿಕೆ ನೀಡಲು ವಿಶೇಷ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು. ಅಲ್ಲದೇ, ಅವರು ಕಾಮಗಾರಿ ಸ್ಥಳದಲ್ಲೂ ಲಸಿಕೆ ನೀಡಲಾಗುವುದು. ಇದಕ್ಕಾಗಿ ಆಯಾ ವಲಯವಾರು ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗುವುದು. ಮುಂದೆ ಅಧಿಕ ಲಸಿಕೆ ಲಭ್ಯವಾದಲ್ಲಿ 18 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೂ ಲಸಿಕೆ ಕೊಡಲಾಗುವುದು ಎಂದರು. ಗ್ರಾಮೀಣದಲ್ಲಿ ಸೋಂಕು ನಿಯಂತ್ರಣಕ್ಕಾಗಿ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲಿಸಲಾಗುತ್ತಿದೆ. ಕಳೆದ ಒಂದು ವಾರದಿಂದ ಹೋಂ ಐಸೋಲೇಷನ್‌ದಲ್ಲಿ ಇದ್ದವನ್ನು ಕೇರ್‌ ಸೆಂಟರ್‌ಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.