ಲಂಬಾಣಿ ತಾಂಡಾ ಜನರಿಗೆ ವಿಶೇಷ ಪ್ಯಾಕೇಜ್ ಗೆ ಎಂಎಲ್ ಸಿ ಪ್ರಕಾಶ್ ರಾಠೋಡ್ ಆಗ್ರಹ

Team Udayavani, May 29, 2021, 4:33 PM IST

ಲಂಬಾಣಿ ತಾಂಡಾ ಜನರಿಗೆ ವಿಶೇಷ ಪ್ಯಾಕೇಜ್ ಗೆ ಶಾಸಕ ಪ್ರಕಾಶ್ ರಾಠೋಡ್ ಆಗ್ರಹ

ವಿಜಯಪುರ: ಜಿಲ್ಲೆಯಲ್ಲೂ ಹೆಚ್ವಿನ ಪ್ರಮಾಣದಲ್ಲಿ ಕೋವಿಡ್ ಸೋಂಕು ಹಬ್ಬಿದ್ದು, ದುಡಿಮೆ ಅರಸಿ ಗುಳೇ ಹೋಗಿದ್ದ ಲಂಬಾಣಿ ತಾಂಡಾದ ಜನರು ಲಾಕಡೌನ್ ಸಂದಭ೯ದಲ್ಲಿ ತಾಂಡಾಗಳಿಗೆ ಮರಳಿದ್ದಾರೆ. ಉದ್ಯೋಗ ಇಲ್ಲದೇ ಮನೆಯಲ್ಲಿರುವ ಲಂಬಾಣಿಗಳಿಗೆ ಜೀವನ‌ ನಿರ್ವಹಣೆಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮೇಲ್ಮನೆ ಸದಸ್ಯ ಪ್ರಕಾಶ ರಾಠೋಡ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.

ಶನಿವಾರ ವಿಜಯಪುರ ಜಿಲ್ಲೆಯ ಶಾಸಕರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ಸಮಸ್ಯೆ ಕುರಿತು ನಡೆಸಿದ ವಿಡಿಯೋ ಸಂವಾದದಲ್ಲಿ ಈ ಬೇಡಿಕೆ ಮಂಡಿಸಿರುವ ಪ್ರಕಾಶ ರಾಠೋಡ, ಮಕ್ಕಳಿಗೂ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಕಂಡು ಬರುತ್ತಿದೆ. ವಿಜಯಪುರ ಜಿಲ್ಲೆಯ ಉತ್ತನಾಳ ತಾಂಡಾದಲ್ಲಿ 52 ಜನರಿಗೆ ಕೋವಿಡ್ ಸೋಂಕು ತಗುಲಿದ್ದು,15-20 ವಷ೯ದ 15 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಹೀಗಾಗಿ ಸರ್ಕಾರ ವಿಶೇಷ ಗಮನಕೊಡಬೇಕಿದೆ ಎಂದು ಅಗ್ರಹಿಸಿದರು.

ಇದಲ್ಲದೇ ಇಂಥ ಹಲವು ತಾಂಡಾಗಳಲ್ಲಿ ಕೋವಿಡ್ ಸೋಂಕು ಹಬ್ಬಿರುವುದರಿಂದ ವಿಶೇಷವಾಗಿ ಗಮನ ಹರಿಸಬೇಕಿದೆ‌ ಅಲ್ಲದೇ ಸೋಂಕು ಇನ್ನೂ ಹರಡುವಿಕೆಯನ್ನು ತಡೆಯಲು ಹಾಗೂ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದರು.

ಸರ್ಕಾರ ಟಾಸ್ಕ್ ಫೋರ್ಸ್ ಸಮಿತಿ ಮಾಡಿದ್ದು, ಸಮಿತಿಯವರು ಹಳ್ಳಿಗಳಲ್ಲಿ ಹೋಗಿ ‌ಕೋವಿಡ್ ಸೊಂಕಿತರನ್ನು ಪತ್ತೆಹಚ್ಚಿದ್ದಾರೆ.  ವಿಜಯಪುರ ಜಿಲ್ಲೆಯಲ್ಲಿ 3000 ಜನರಿಗೆ ಸೊಂಕು ಹಬ್ಬಿದ್ದನ್ನು ಪತ್ತೆ ಹಚ್ಚಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಪತ್ತೆಗಾಗಿ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:‘ನಾನು ಬರ್ತೇನೆ ನಿಮ್ಮನೆಗೆ…’ ಹಸುಗಳೊಂದಿಗೆ ಮನೆಗೆ ಬಂದ ಜಿಂಕೆ ಮರಿ

ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರು ಪ್ರದೇಶಾಭಿವೃದ್ದಿ ಅನುದಾನವನ್ನು ಕಾಂಗ್ರೆಸ್ ಪಕ್ಷದ ಪರವಾಗಿ ಕೋವಿಡ್ ಕಾರ್ಯಕ್ಕೆ ಬಳಸಲು ಮನವಿ ಮಾಡಿದ್ದೇವೆ. ಆದರೆ ಸರ್ಕಾರ ಇತ್ತ ಗಮನ ಹರಿಸಿಲ್ಲ. ಇದೀಗ ಉಭಯ ಸದನಗಳ ಶಾಸಕರಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನೀಡುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಿ, ಅದನ್ನು ಉಪಯೋಗಿಸಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಕೋವಿಡ್ ಸೋಂಕಿನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವ  ಬ್ಲ್ಯಾಕ್ ಫಂಗಸ್ ಸಂಕ್ರಾಮಿಕ ರೋಗ ಕನಾ೯ಟಕದಲ್ಲಿ ವ್ಯಾಪಕವಾಗಿದ್ದು, ವಿಜಯಪುರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಸದರಿ ರೋಗಿಗಳಿಗೆ ತುರ್ತು ಅಗತ್ಯವಾದ ಎಂಪೋತೆರಿಸಿನ್ ಇಂಜೆಕ್ಷನ್ ಬಹಳ ಕೊರತೆ ಇದೆ. ಆದರೆ ಇದರ ಬದಲಾಗಿ ಪೊಸಕೋನಾಜೋಲ್ ಅಥವಾ ಇಸವುಕೋವಾಜೋಲ್ ಇಂಜೆಕ್ಷನ್ ನೀಡಲು ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶಾಸಕ ಪ್ರಕಾಶ ರಾಠೋಡ ಮನವಿ ಮಾಡಿದರು

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.