ಶಾಸಕರಿಂದ 10 ಲಕ್ಷ ರೂ. ಮೊತ್ತದ 700ಕ್ಕೂ ಅಧಿಕ ಪಲ್ಸ್ ಆಕ್ಸಿ ಮೀಟರ್ ಹಸ್ತಾಂತರ
Team Udayavani, May 29, 2021, 5:55 PM IST
ಕಟಪಾಡಿ : ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಥಳೀಯ ಶಾಸಕರ ನಿಯಿಂದ ಕೋವಿಡ್ ಪೇಶೆಂಟ್ ಗಳ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅನುಕೂಲವಾಗುವಂತೆ ಕೋವಿಡ್ ಸಂಬಂಧಿಸಿದಂತೆ ತುರ್ತು ಸಂದರ್ಭದಲ್ಲಿ ಬಳಕೆಗೆ ಬರುವಂತೆ 10 ಲಕ್ಷ ರೂ. ವೆಚ್ಚದಲ್ಲಿ ಸುಮಾರು 700ಕ್ಕೂ ಅಕ ಪಲ್ಸ್ ಆಕ್ಸಿ ಮೀಟರ್ ಗುಣಮಟ್ಟದ ಉಪಕರಣವನ್ನು ದೆಹಲಿಯಿಂದ ತರಿಸಲಾಗಿದ್ದು, ಕಾಪು ಕ್ಷೇತ್ರದ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೀಡಲಾಗುತ್ತಿದೆ ಎಂದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಉದಯವಾಣಿಗೆ ತಿಳಿಸಿದರು.
ಇದನ್ನೂ ಓದಿ : ವಿಮಾನದ ಮೂಲಕ ಜೈವಿಕ ಸೋಂಕು ನಿವಾರಕ ಸಿಂಪಡಣೆಯ ಪ್ರಾಯೋಗಿಕ ಕಾರ್ಯಾಚರಣೆಗೆ ಚಾಲನೆ
ಕಾಪು ವಿಧಾನ ಸಭಾ ಕ್ಷೇತ್ರದಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆಗೆ ಪ್ರಯತ್ನಿಸಲಾಗುತ್ತಿದ್ದು, ಕಾಪು ಕ್ಷೇತ್ರದಲ್ಲಿನ ಶವಾಗಾರಕ್ಕೆ ಶೀತಲೀಕರಣ ಪೆಟ್ಟಿಗೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ. ದಾನಿಗಳ ನೆರವನ್ನೂ ಪಡೆದು ಆ್ಯಂಬುಲೆನ್ಸ್, ಕೋವಿಡ್ ಮುಂಜಾಗ್ರತಾ ಕ್ರಮವಾದ ಸ್ಯಾನಿಟೈಸರ್, ಪಿಪಿಇ ಕಿಟ್, ಮಾಸ್ಕ್ ಕೂಡಾ ಬಳಸಲಾಗುತ್ತಿದೆ. ಕಾಪು ಕ್ಷೇತ್ರದಾದ್ಯಂತ ಕೋವಿಡ್ ಮುಕ್ತಗೊಳಿಸಿ ಜನರಲ್ಲಿ ನೆಮ್ಮದಿ ಸುರಕ್ಷತೆಯತ್ತ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಜನರ ಸಹಕಾರವೂ ಅವಶ್ಯಕವಾಗಿದೆ . ಉಡುಪಿ ಜಿಲ್ಲೆಯಲ್ಲಿ ಕೊರೊನಾ ಹತೋಟಿಗೆ ಬರುತ್ತಿದೆ. ಆಕ್ಸಿಜನ್ ಸೆಂಟರ್ ಕೂಡಾ ನಮ್ಮ ಕ್ಷೇತ್ರದಲ್ಲಿದೆ.
ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರ, ಮಣಿಪುರ ಪ್ರಾಥಮಿಕ ಆರೋಗ್ಯ ಕೇಂದ್ರ, ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರ, ಕುಕ್ಕೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ,ಮುದರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ,ಶಿರ್ವ ಸಮುದಾಯ ಆರೋಗ್ಯ ಕೇಂದ್ರ ಸಹಿತ 10 ಆರೋಗ್ಯ ಕೇಂದ್ರಗಳಿಗೆ 700ಕ್ಕೂ ಅಧಿಕ ಪಲ್ಸ್ ಆಕ್ಸಿ ಮೀಟರ್ ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.