ಶಿವಮೊಗ್ಗ : ಮೇ 31 ರಿಂದ ಜೂನ್ 7 ರವರೆಗೆ ಸಂಪೂರ್ಣ ಲಾಕ್ ಡೌನ್
Team Udayavani, May 29, 2021, 6:56 PM IST
ಶಿವಮೊಗ್ಗ : ಜಿಲ್ಲೆಯಾದ್ಯಂತ ಮೇ 31 ರಿಂದ ಜೂನ್ 7 ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ಹಾಲು ಔಷಧಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ತರಕಾರಿ ಖರೀದಿಗೆ ತಳ್ಳುವ ಗಾಡಿಯಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ದಿನಸಿ ಅಂಗಡಿಗಳಿಗೆ 6 ಗಂಟೆಯಿಂದ 8 ಗಂಟೆಯವರೆಗೆ ಮಾತ್ರ ಅವಕಾಶ ಕೊಡಲಾಗಿದೆ. ಲಾಕ್ ಡೌನ್ ಅವಧಿಯಲ್ಲಿ ಬ್ಯಾಂಕ್ ಸೇವೆಗಳು, ಸರ್ಕಾರಿ ಕಚೇರಿ ಸಹ ಸ್ಥಗಿತಗೊಳ್ಳಲಿದೆ. ಅವಶ್ಯಕ ಸರಕಾರಿ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸುತ್ತವೆ. ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.
ಶಿವಮೊಗ್ಗದ ಜನರು ಇದುವರೆಗೆ ಸಹಕಾರ ನೀಡಿದ್ದಾರೆ. ಮುಂದೆಯೂ ಅದೇ ರೀತಿ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ. ಲಾಕ್ ಡೌನ್ ಇದ್ದರೂ ಅನಗತ್ಯವಾಗಿ ಕದ್ದುಮುಚ್ಚಿ ಓಡಾಟ ಜಾಸ್ತಿಯಾಗಿದೆ. ಅನಿವಾರ್ಯವಾಗಿ ಕಠಿಣ ಲಾಕ್ ಡೌನ್ ಕೈಗೊಳ್ಳುವಂತಾಗಿದೆ. ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡುವವರ ವಾಹನ ಸಹ ಸೀಜ್ ಮಾಡಲಾಗುತ್ತದೆ. ಜೊತೆಗೆ ವಾಹನ ಚಾಲಕ ಹಾಗೂ ಸವಾರನನ್ನು ಪೊಲೀಸರು ವಶಕ್ಕೆ ಪಡೆಯಲು ಸಚಿವರ ಸೂಚನೆ ನೀಡಲಾಗಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.