ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ನೆರವಿಗೆ “ಪಿಎಂ-ಕೇರ್ಸ್”
ಪ್ರಧಾನಮಂತ್ರಿ ಕಚೇರಿ ಬಿಡುಗಡೆಗೊಳಿಸಿರುವ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
Team Udayavani, May 29, 2021, 7:24 PM IST
ನವದೆಹಲಿ: ಕೋವಿಡ್ 19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಎಲ್ಲಾ ಮಕ್ಕಳಿಗೆ “PM-CARES ಯೋಜನೆಯಡಿ ನೆರವು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಮೇ 29) ಘೋಷಿಸಿದ್ದಾರೆ.
ಮಕ್ಕಳು ದೇಶದ ಭವಿಷ್ಯದ ಪ್ರಜೆಗಳು ಮತ್ತು ಈ ಮಕ್ಕಳನ್ನು ಬೆಂಬಲಿಸಲು ಮತ್ತು ರಕ್ಷಿಸಲು ದೇಶವು ಎಲ್ಲಾ ರೀತಿಯ ಬೆಂಬಲ ನೀಡಲಿದೆ. ಇದರಿಂದ ದೇಶದ ಬಲಿಷ್ಠ ಪ್ರಜೆಗಳಾಗಿ ಅಭಿವೃದ್ಧಿ ಹೊಂದಲು ಉಜ್ವಲ ಭವಿಷ್ಯ ಕಲ್ಪಿಸಿಕೊಡಲಿದೆ ಎಂದು ಪ್ರಧಾನಿ ಹೇಳಿದರು.
ಅನಾಥರಾದ ಮಕ್ಕಳಿಗೆ 18 ವರ್ಷ ತುಂಬುತ್ತಲೇ ಪ್ರತಿ ತಿಂಗಳು ಸ್ಟೈಫಂಡ್ ನೀಡಲಾಗುವುದು. ನಂತರ 23 ವರ್ಷ ತುಂಬಿದ ಮೇಲೆ ಪಿಎಂ ಕೇರ್ಸ್ ನಿಂದ 10 ಲಕ್ಷ ರೂಪಾಯಿ ನಗದು ಹಣ ನೀಡಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿ ಬಿಡುಗಡೆಗೊಳಿಸಿರುವ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಕೋವಿಡ್ 19 ಸೋಂಕಿನಿಂದ ಭಾರತದಲ್ಲಿ 577 ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದು, ತಂದೆ-ತಾಯಿ ಕಳೆದುಕೊಂಡ ಮಕ್ಕಳು ತಮ್ಮ ಬಂಧುಗಳ ಸುಪರ್ದಿಯಲ್ಲಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಪ್ರಧಾನಿ ಘೋಷಿಸಿದ್ದೇನು:
*ಅನಾಥ ಮಕ್ಕಳಿಗೆ 18 ವರ್ಷ ತುಂಬಿದ ನಂತರ ಪ್ರತಿ ತಿಂಗಳು ಸ್ಟೈಫಂಡ್ ಪಡೆಯಲಿದ್ದಾರೆ. 23 ವರ್ಷವಾದ ಬಳಿಕ 10 ಲಕ್ಷ ರೂಪಾಯಿ ನಗದು ದೊರಕಲಿದೆ.
*ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಸಾಲದ ವ್ಯವಸ್ಥೆ ಮಾಡಲಾಗುವುದು, ಆದರೆ ಬಡ್ಡಿಯನ್ನು ಕೇಂದ್ರ ಸರ್ಕಾರ ಪಾವತಿ ಮಾಡಲಿದೆ.
*ಕೋವಿಡ್ ನಿಂದ ಅನಾಥವಾದ ಮಕ್ಕಳು 18 ವರ್ಷದವರಾಗುವವರೆಗೆ 5 ಲಕ್ಷ ಮೊತ್ತದ ಆರೋಗ್ಯ ವಿಮೆ ಸೌಲಭ್ಯ ಒದಗಿಸಲಾಗುವುದು, ಅದರ ಪ್ರೀಮಿಯಮ್ ಮೊತ್ತ ಪಿಎಂ ಕೇರ್ಸ್ ನಿಂದ ಪಾವತಿ ಮಾಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.