ಕೊರೊನಾ: ಸಹಾಯಕ್ಕಾಗಿ ಜ್ಯೋತಿ ಗಣೇಶ್ ಮನವಿ
Team Udayavani, May 29, 2021, 9:11 PM IST
ತುಮಕೂರು: ಕೋವಿಡ್ ಸಾಂಕ್ರಾಮಿಕ ಕಾಯಿಲೆ ಇರುವ ಇಂತಹಕಠಿಣ ಪರಿಸ್ಥಿತಿಯಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಪಾಲಿಕೆಗೆಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಮಾಡುವಂತೆ ನಗರ ಶಾಸಕ ಜ್ಯೋತಿಗಣೇಶ್ ಮನವಿ ಮಾಡಿದರು.
ನಗರದಲ್ಲಿ ಸಂಸ್ಥೆಯ ನಿರ್ದೇಶಕಿ ದಯಾಶೀಲಾ ಅವರಿಗೆ ಮನವಿನೀಡಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯಿಂದ ಹಲವಾರು ಸಾಮಾಜಿಕ ಕಾರ್ಯಕ್ರಮಗಳುನಡೆದಿದ್ದು, ಅವೆಲ್ಲವೂ ಸಾರ್ವಜನಿಕರಿಗೆ ಉತ್ತಮವಾದಂತಹರೀತಿಯಲ್ಲಿ ಉಪಯುಕ್ತವಾಗಿವೆ.
ಜಿಲ್ಲೆಯಲ್ಲಿ ಕೋವಿಡ್‌ನಿಂದಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರದಿಂದ ಹತ್ತುಹಲವಾರು ರೀತಿಯಲ್ಲಿ ಸಹಾಯ ಮಾಡುತ್ತಿದ್ದು, ಮತ್ತಷ್ಟು ಅಶಕ್ತರಿಗೆಬೇರು ಮಟ್ಟದಲ್ಲಿ ಸಹಾಯದ ಅವಶ್ಯಕತೆಯಿದೆ ಎಂದು ತಿಳಿಸಿದರು.
ಸಂಸ್ಥೆಯ ನಿರ್ದೇಶಕಿ ದಯಾಶೀಲಾ ಮಾತನಾಡಿ, ಈಗಾಗಲೇ ಕೋವಿಡ್‌ನಿಂದ ಮೃತಪಟ್ಟವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿನಿಧಿಗಳಿಗೆ 2 ಲಕ್ಷ ರೂ.ವಿಮೆಯನ್ನುಸಂಸ್ಥೆಯಿಂದ ನೀಡಲಾಗುತ್ತಿದ್ದು, ಪ್ರತಿ ತಿಂಗಳು ನೀಡುವ ವಿವಿಧಮಾಸಾಶನಗಳನ್ನು ಚಾಚು ತಪ್ಪದೇಸಂಸ್ಥೆಯ ವತಿಯಿಂದ ಫಲಾನುಭವಿಗಳ ಮನೆಗೆ ತಲುಪಿಸುವ ಕೆಲಸವನ್ನು ಸಂಸ್ಥೆಮಾಡುತ್ತಿದೆ ಎಂದರು. ಯೋಜನಾಧಿಕಾರಿ ಚನ್ನಕೇಶವ, ಸುನಿತಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.