6 ವಾರಗಳ ಬಳಿಕ ಅತೀ ಕಡಿಮೆ ಪ್ರಕರಣ ಪತ್ತೆ: 24 ಗಂಟೆಗಳಲ್ಲಿ 1.65 ಲಕ್ಷ ಮಂದಿಗೆ ಸೋಂಕು


Team Udayavani, May 30, 2021, 10:30 AM IST

covid19

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1.65 ಲಕ್ಷ ಮಂದಿಗೆ ಸೋಂಕು ತಗುಲಿದ್ದು, 3,460 ಮಂದಿ ಕೋವಿಡ್ ಕಾರಣದಿಂದ ಪ್ರಾಣ ತ್ಯಜಿಸಿದ್ದಾರೆ. ಕಳೆದ  6 ವಾರಗಳಲ್ಲಿ ಪತ್ತೆಯಾದ ಅತೀ ಕಡಿಮೆ ಕೋವಿಡ್ ಪ್ರಕರಣಗಳು ಇವು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ ಒಂದು ದಿನದಲ್ಲಿ 1,65,553 ಮಂದಿ ಕೋವಿಡ್ ಗೆ ತುತ್ತಾಗಿದ್ದು, ದೇಶದಲ್ಲಿ ಒಟ್ಟಾರೆ ಸೋಂಕಿತರ ಪ್ರಮಾಣ   2,78,94,800ಕ್ಕೆ ಏರಿಕೆಯಾಗಿದೆ. ಸುಮಾರು 21,14,508 ಸಕ್ರಿಯ ಪ್ರಕರಣಗಳಿದ್ದು, 2.54 ಕೋಟಿ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದೇ ವೇಳೆ ಈವರೆಗೂ ಸುಮಾರು 3.25 ಲಕ್ಷ ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಹೆಚ್ಚಾದ ಇಲಿಗಳ ಹಾವಳಿ: ಪ್ಲೇಗ್ ಭೀತಿ; ಭಾರತದಿಂದ ಪಾಷಾಣ ಆಮದಿಗೆ ಅಸ್ತು  

ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ವರದಿ ಪ್ರಕಾರ ಈವರೆಗೂ 34,31,83,748 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಮೇ 29 ರಂದು ಸುಮಾರು 20,63,839 ಜನರ ಗಂಟಲು ದ್ರವ ಮಾದರಿಯ ಪರೀಕ್ಷೆ ನಡೆಲಾಗಿದೆ.

ಏತನ್ಮಧ್ಯೆ ಕೋವಿಡ್ 19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಎಲ್ಲಾ ಮಕ್ಕಳಿಗೆ “PM-CARES ಯೋಜನೆಯಡಿ ನೆರವು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಮೇ 29) ಘೋಷಿಸಿದ್ದಾರೆ.

ಮಕ್ಕಳು ದೇಶದ ಭವಿಷ್ಯದ ಪ್ರಜೆಗಳು ಮತ್ತು ಈ ಮಕ್ಕಳನ್ನು ಬೆಂಬಲಿಸಲು ಮತ್ತು ರಕ್ಷಿಸಲು ದೇಶವು ಎಲ್ಲಾ ರೀತಿಯ ಬೆಂಬಲ ನೀಡಲಿದೆ. ಇದರಿಂದ ದೇಶದ ಬಲಿಷ್ಠ ಪ್ರಜೆಗಳಾಗಿ ಅಭಿವೃದ್ಧಿ ಹೊಂದಲು ಉಜ್ವಲ ಭವಿಷ್ಯ ಕಲ್ಪಿಸಿಕೊಡಲಿದೆ ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ:  ಪ್ರೇಯಸಿಯ ಜೊತೆಗೆ ವಿವಾಹ ಬಂಧನಕ್ಕೆ ಒಳಗಾದ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್

ಟಾಪ್ ನ್ಯೂಸ್

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.