ಚಿರತೆ ಶೋಧಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಕಸರತ್ತು
ಕೃಷಿಕರು, ಗ್ರಾಮಸ್ಥರ ನಿದ್ದೆಗಡಿಸಿದ ಚಿರತೆ ರೈತರಲ್ಲಿ ಆತಂಕ; ಕೃಷಿ ಚಟುವಟಿಕೆ ವಿಳಂಬ
Team Udayavani, May 31, 2021, 8:07 PM IST
ಬ್ಯಾಡಗಿ: ತಾಲೂಕಿನಲ್ಲಿ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿರುವ ಚಿರತೆ ಹುಡುಕುವಲ್ಲಿ ವಲಯ ಅರಣ್ಯ ಇಲಾಖೆ ಅಧಿ ಕಾರಿಗಳು ಮುಂದಾಗಿದ್ದಾರೆ. ತಾಲೂಕಿನಲ್ಲಿ ಎಲ್ಲೆಂದರಲ್ಲಿ ಸಂಚರಿಸುತ್ತಿರುವ ಚಿರತೆಯೊಂದು ಕೃಷಿಕರು ಸೇರಿದಂತೆ ಸಾರ್ವಜನಿಕರು, ದಾರಿಹೋಕರ ನಿದ್ದೆಗೆಡಿಸಿದೆ.
ಚಿರತೆ ಹಾವಳಿಗೆಯಿಂದಾಗಿ ಈಗಾಗಲೇ ಗ್ರಾಮೀಣ ಭಾಗದ ಜನರು ಕೃಷಿ ಚಟುವಟಿಕೆ ನಡೆಸಲು ಹಿಂದೇಟು ಹಾಕುತ್ತಿದ್ದು ರೈತರು ಆತಂಕಕ್ಕೆ ಒಳಗಾಗಿದ್ದಾರೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಜನರಿಗೆ ಚಿರತೆ ತನ್ನ ಇರುವಿಕೆ ತೋರಿಸಿದೆ. ಇದರಿಂದ ಭಯಭೀತರಾಗಿ ಮನೆಯಿಂದ ಹೊರಗೆ ಬಾರದೇ ಉಳಿದಿದ್ದಾರೆ.
ಚಿರತೆ ಹಾವಳಿಯಿಂದಾಗಿ ಹೊಲಗಳಿಗೆ ತೆರಳಿ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ಸಹ ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದಾರೆ. ನೆಲ್ಲಿಕೊಪ್ಪ ಗ್ರಾಮದ ಬಳಿ ಈಗಾಗಲೇ ಜಿಂಕೆಯೊಂದನ್ನು ಕೊಂದ ಚಿರತೆ ಅರಣ್ಯ ಪ್ರದೇಶದಲ್ಲಿ ಸಂಚಾರ ಮಾಡುತ್ತಿರುವ ಬಗ್ಗೆ ಅನುಮಾನಗಳಿದ್ದು, ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ತಾಲೂಕಿನ ಹಿರೇಅಣಜಿ ಗ್ರಾಮ ಸೇರಿದಂತೆ ಹಲವು ಕಡೆಗಳಲ್ಲಿ ಚಿರತೆ ಕುರಿತು ಮಾಹಿತಿಯನ್ನು ಕಲೆ ಹಾಕುವಲ್ಲಿ ನಿರತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.