ಜೂನ್ ಅಂತ್ಯದ ವರೆಗೆ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಪಾವತಿ ಮೇಲೆ ಶೇ.5 ವಿನಾಯಿತಿ
Team Udayavani, May 31, 2021, 7:40 PM IST
ಬೆಂಗಳೂರು: ನಗರದಲ್ಲಿ ಲಾಕ್ ಡೌನ್ ಮತ್ತು ಕೊರೊನಾ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲ ಆಸ್ತಿಗಳ ಆಸ್ತಿ ತೆರಿಗೆ ಪಾವತಿಯ ಮೇಲೆ ಶೇ.5 ರಷ್ಟು ವಿನಾಯಿತಿಯನ್ನು ಜೂನ್ ಅಂತ್ಯದ ವರೆಗೆ ವಿಸ್ತರಿಸಲಾಗಿದೆ.
ಸಾಮಾನ್ಯವಾಗಿ ಏಪ್ರಿಲ್ ನಲ್ಲಿ ಆಸ್ತಿ ತೆರಿಗೆ ಪಾವತಿಯ ಮೇಲೆ ಶೇ. 5 ರಷ್ಟು ವಿನಾಯಿತಿ ನೀಡಲಾಗುತ್ತದೆ. ಆದರೆ, ಕಳೆದ ವರ್ಷ ಮತ್ತು ಪ್ರಸಕ್ತ ಸಾಲಿನಲ್ಲಿ ಆಸ್ತಿ ತೆರಿಗೆ ಪಾವತಿಯ ಮೇಲಿನ ಶೇ.5 ರಷ್ಟು ವಿನಾಯಿತಿ ಯನ್ನು ಮೇ ಅಂತ್ಯದ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಜೂನ್ 7 ರ ವರೆಗೆ ಲಾಕ್ ಡೌನ್ ಮುಂದುವರಿಯುವ ಹಿನ್ನೆಲೆಯಲ್ಲಿ ,ಮೇ ತಿಂಗಳಲ್ಲಿ ಹಲವರು ಆಸ್ತಿ ತೆರಿಗೆ ವಿನಾಯಿತಿಯಿಂದ ವಂಚಿತರಾಗಿದ್ದರಿಂದ ಹಾಗೂ ಮುಖ್ಯ ವಾಗಿ ಜನ ಆರ್ಥಿಕ ಸಂಕಷ್ಟದಲ್ಲಿ ಇರುವುದರಿಂದ ಜೂನ್ ಅಂತ್ಯದ ವರೆಗೆ (ಜೂನ್ 30) ಆಸ್ತಿ ತೆರಿಗೆ ಪಾವತಿಯ ಮೇಲೆ ಶೇ. 5 ರಷ್ಟು ವಿನಾಯಿತಿ ಮುಂದುವರಿಸಲಾಗಿದೆ.
ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 44473 ಜನ ಗುಣಮುಖ; 16604 ಹೊಸ ಪ್ರಕರಣ ಪತ್ತೆ
ಪಾಲಿಕೆಯ ಇತಿಹಾಸದಲ್ಲೇ ಮೂರು ತಿಂಗಳು ಆಸ್ತಿ ತೆರಿಗೆ ವಿನಾಯಿತಿ ನೀಡಿರುವುದು ಹೊಸ ದಾಖಲೆ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.