ಎಲ್ಲ ಮನೆಗಳಿಗೂ ಶುದ್ಧ ಕುಡಿವ ನೀರು


Team Udayavani, May 31, 2021, 10:21 PM IST

31-18

ಚಿತ್ರದುರ್ಗ: ಜಲಜೀವನ್‌ ಮಿಷನ್‌ ಯೋಜನೆಯಡಿ ಜಿಲ್ಲೆಯ ಎಲ್ಲ ಮನೆಗಳಿಗೆ ಶುದ್ಧ ಕುಡಿಯುವ ನೀರು ದೊರೆಯಲಿದೆ. ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ನಿಗದಿ ತ ಅವಧಿಯಲ್ಲಿ ಪೂರ್ಣಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ಜಲಜೀವನ್‌ ಮಿಷನ್‌ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಲಜೀವನ್‌ ಮಿಷನ್‌ ಯೋಜನೆ ಗ್ರಾಮೀಣ ಭಾಗಕ್ಕೆ ಶುದ್ಧ ನೀರು ಕೊಡುವ ಯೋಜನೆಯಾಗಿದ್ದು, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಅಧಿ ಕಾರಿಗಳು ಪಾತ್ರ ಮಹತ್ವದ್ದಾಗಿದೆ. ಇಒ ಹಾಗೂ ಪಿಡಿಒಗಳು ಇದರ ಜವಾಬ್ದಾರಿ ಹೊತ್ತು ಕಾಮಗಾರಿ ನಿಭಾಯಿಸಬೇಕು ಎಂದರು.

ಜೆಜೆಎಂ ಯೋಜನೆಯಡಿಯಲ್ಲಿ ಶೇ.40ರಷ್ಟು ಟೆಕ್ನಿಕಲ್‌ ವರ್ಕ್‌ ಹಾಗೂ ಶೇ.60 ರಷ್ಟು ಸಮುದಾಯದ ಅಭಿವೃದ್ಧಿ ಕಾರ್ಯಗಳನ್ನು ಒಳಗೊಂಡಿದೆ. ಯೋಜನೆಗಾಗಿ ಸರ್ವೇ ಮಾಡುವ ಸಂದರ್ಭದಲ್ಲಿ ಪಿಡಿಒಗಳು ಹಾಜರಿರಬೇಕು ಎಂದು ತಾಕೀತು ಮಾಡಿದರು. ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಪಿ.ಎಸ್‌. ಜ್ಞಾನೇಶ್‌ ಮಾತನಾಡಿ, ಜಲಜೀವನ್‌ ಮಿಷನ್‌ ಯೋಜನೆಯಡಿ 100 ದಿನಗಳ ಸಾಧನೆಯಡಿ ಶಾಲೆ, ಅಂಗನವಾಡಿ, ಕಾಲೇಜು, ಹಾಸ್ಟೆಲ್‌ಗ‌ಳಿಗೆ ಕುಡಿಯುವ ನೀರು ಒದಗಿಸಲಾಗಿದೆ. ಶಾಲೆಗಳಿಗೆ ಸಂಬಂ ಧಿಸಿದಂತೆ 244 ಕಾಮಗಾರಿಗಳಲ್ಲಿ 225 ಪೂರ್ಣಗೊಂಡಿವೆ.

1395 ಅಂಗನವಾಡಿ ಕಾಮಗಾರಿಗಳಲ್ಲಿ 1296 ಪೂರ್ಣಗೊಂಡಿವೆ. ಆಶ್ರಮ ಶಾಲೆಯ 6 ಕಾಮಗಾರಿಗಳಲ್ಲಿ 4 ಪೂರ್ಣಗೊಂಡಿವೆ ಹಾಗೂ ಪಿಯು ಕಾಲೇಜಿನ 13 ಕಾಮಗಾರಿಗಳಲ್ಲಿ 6 ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು. ವಿವಿಸಾಗರ ಜಲಮೂಲದಿಂದ ಹಿರಿಯೂರು ತಾಲೂಕು ವ್ಯಾಪ್ತಿಯ 38 ಗ್ರಾಮಗಳು ಐಮಂಗಲ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಜುಲೈ ಅಂತ್ಯದೊಳಗೆ ಟ್ರಯಲ್‌ ರನ್‌ ಮುಕ್ತಾಯವಾಗಲಿದ್ದು, ಆಗಸ್ಟ್‌ ತಿಂಗಳಿಂದ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ತಿಳಿಸಿದರು.

ಸೋಂಕಿತರನ್ನು ಆರೈಕೆ ಕೇಂದ್ರಕ್ಕೆ ಕರೆತನ್ನಿ: ಜಿಲ್ಲೆಯಲ್ಲಿ ಕೋವಿಡ್‌ ಸ್ಥಿತಿಗತಿ ಕುರಿತು ಮಾಹಿತಿ ಪಡೆದ ಎಲ್‌.ಕೆ. ಅತೀಕ್‌, ಜಿಲ್ಲೆಯ ಗ್ರಾಮೀಣ ಪ್ರದೇಶಗಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್‌ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಕಾರ್ಯಪಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸಬೇಕು. ಕೋವಿಡ್‌ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್‌ ಕೇರ್‌ ಸೆಂಟರ್‌ಗೆ ಸ್ಥಳಾಂತರಿಸಬೇಕು ಎಂದು ಅಧಿ ಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ಕರೆತರುವ ಕೆಲಸ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಲವು ಗ್ರಾಮಗಳಲ್ಲಿ ಅಧಿ  ಕಾರಿಗಳ ಕ್ರಮಕ್ಕೆ ಅಡ್ಡಿಪಡಿಸದವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕೋವಿಡ್‌ ಕೇರ್‌ ಸೆಂಟರ್‌ಗೆ ಬಾರದವರ ಮನೆಯನ್ನು ಸೀಲ್‌ ಡೌನ್‌ ಮಾಡಲಾಗುತ್ತಿದೆ ಎಂದು ಹೇಳಿದರು.

ಡಿಎಚ್‌ಒ ಡಾ. ಪಾಲಾûಾ ಮಾತನಾಡಿ, ಜಿಲ್ಲೆಯಲ್ಲಿ 6578 ಕೋವಿಡ್‌ ಸಕ್ರಿಯ ಪ್ರಕರಣಗಳಿವೆ. ಈಗಾಗಲೇ 22 ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆಯಲಾಗಿದೆ. 392 ಡಿಸಿಎಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 1360 ಹಳ್ಳಿಗಳ ಪೈಕಿ 834 ಹಳ್ಳಿಗಳು ಕೋವಿಡ್‌ ಮುಕ್ತವಾಗಿವೆ ಎಂದು ತಿಳಿಸಿದರು. ಜಿಪಂ ಸಿಇಒ ಡಾ.ಕೆ.ನಂದಿನಿದೇವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿ ಕಾರಿಗಳು ಉಪಸ್ಥಿತರಿದ್ದರು.¬

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.