ಕೋವಿಡ್ 19 ಸೋಂಕು ತಡೆಗಟ್ಟಲು ನೋಯ್ಡಾದಲ್ಲಿ ಜೂನ್ 30ರವರೆಗೆ ಸೆಕ್ಷನ್ 144 ಜಾರಿ
ಮನೋರಂಜನಾ ಕಾರ್ಯಕ್ರಮ ನಡೆಸುವಂತಿಲ್ಲ. ಕ್ರೀಡಾ ಚಟುವಟಿಕೆ ಮತ್ತು ಜಾತ್ರೆಗಳನ್ನು ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ.
Team Udayavani, Jun 1, 2021, 9:05 AM IST
ನವದೆಹಲಿ:ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಪರಾಧ ದಂಡ ಸಂಹಿತೆ ಸೆಕ್ಷನ್ 144 ಅನ್ನು ಜೂನ್ 30ರವರೆಗೆ ಹೇರಲಾಗಿದೆ ಎಂದು ನೋಯ್ಡಾ ಅಧಿಕಾರಿಗಳು ಮಂಗಳವಾರ(ಜೂನ್ 01) ತಿಳಿಸಿದ್ದಾರೆ.
ಇದನ್ನೂ ಓದಿ:ಸಿನಿಮಾ ಅವಕಾಶ ಹೆಸರಲ್ಲಿ ಸತತ ಅತ್ಯಾಚಾರ: ಬಾಲಿವುಡ್ ನ 9 ಮಂದಿಯ ವಿರುದ್ಧ ಮಾಡೆಲ್ ದೂರು
ಗೌತಮ್ ಬುದ್ಧ ನಗರದಲ್ಲಿ 68 ನೂತನ ಕೋವಿಡ್ ಪ್ರಕರಣ ಪತ್ತೆಯಾದ ನಂತರ ಹೆಚ್ಚುವರಿ ಡೆಪ್ಯುಟಿ ಪೊಲೀಸ್ ಕಮಿಷನರ್ ಶ್ರದ್ಧಾ ಪಾಂಡೆ ಕೋವಿಡ್ ಗೆ ಸಂಬಂಧಿಸಿದಂತೆ ನೂತನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿರುವುದಾಗಿ ವರದಿ ಹೇಳಿದೆ.
ನೋಯ್ಡಾದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ 62,356ಕ್ಕೆ ಏರಿಕೆಯಾಗಿದ್ದು, 1073 ಸಕ್ರಿಯ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳಲ್ಲಿ ಮೆಡಿಕಲ್ ಮತ್ತು ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆ ಬಂದ್ ಎಂದು ವರದಿ ತಿಳಿಸಿದೆ.
ಪೂರ್ವಾನುಮತಿ ಪಡೆಯದೇ ಯಾವುದೇ ಸಾಂಸ್ಕೃತಿಕ, ರಾಜಕೀಯ, ಸಾಮಾಜಿಕ ಹಾಗೂ ಮನೋರಂಜನಾ ಕಾರ್ಯಕ್ರಮ ನಡೆಸುವಂತಿಲ್ಲ. ಕ್ರೀಡಾ ಚಟುವಟಿಕೆ ಮತ್ತು ಜಾತ್ರೆಗಳನ್ನು ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.