ಸಿಎಂ ಬರುವ ಮುನ್ನವೇ ಬಿಮ್ಸನಲ್ಲಿ ಮೈನರ್ ಸರ್ಜರಿ
Team Udayavani, Jun 1, 2021, 8:06 PM IST
ಬೆಳಗಾವಿ: ಇಲ್ಲಿನ ಬಿಮ್ಸ್‌ನ ಅವ್ಯವಸ್ಥೆ ಹಾಗೂ ಕೋವಿಡ್ ವಾರ್ಡ್ ನಲ್ಲಿಯೇ ಶವ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಶುಶ್ರೂಷಕರು, ನರ್ಸಿಂಗ್ ಮುಖ್ಯಸ್ಥರು ಮತ್ತು ಒಬ್ಬ ವೈದ್ಯರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕೋವಿಡ್ ವಾರ್ಡ್‌ಗೆ ಶನಿವಾರ ಭೇಟಿ ನೀಡಿದ್ದ ವೇಳೆ, ಶವವನ್ನು ಸಾಗಿಸದೇ ಕೋವಿಡ್ ವಾರ್ಡ್ ನಲ್ಲಿಯೇ ಇಟ್ಟಿದ್ದು ಗಮನಿಸಿ ಬಿಮ್ಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು.
ಜಿಲ್ಲಾಸ್ಪತ್ರೆ ಬಗ್ಗೆ ಅನೇಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ, ಜೂನ್ 4ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಇದರ ಬೆನ್ನಲ್ಲೇ ಹಲವು ಬೆಳವಣಿಗೆಗಳು ನಡೆದಿವೆ. ಒಬ್ಬ ನರ್ಸಿಂಗ್ ಮುಖ್ಯಸ್ಥರನ್ನು ಹಾಗೂ ಆರು ಶುಶ್ರೂಷಕರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಹುಸೇನಸಾಬ ಖಾಜಿ ಆದೇಶ ಹೊರಡಿಸಿದ್ದಾರೆ. ಜತೆಗೆ ಕರ್ತವ್ಯ ಚ್ಯುತಿ ಎಸಗಿದ ಆರೋಪದ ಮೇಲೆ ವೈದ್ಯರೊಬ್ಬರನ್ನೂ ಸೇವೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಖಾಜಿ ಅವರ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಡಾ|ಸುಧಾಕರ ಅವರಿಗೆ ತಾತ್ಕಾಲಿಕವಾಗಿ ಅ ಧಿಕಾರ ವಹಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.