ಕೊರೊನಾ ವಾರಿಯರ್ಗೆ ಸುರಕ್ಷತಾ ಕಿಟ್ ವಿತರO
Team Udayavani, Jun 1, 2021, 8:18 PM IST
ಜಗಳೂರು: ತಾಲೂಕಿನ ಸೊಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿ ಅವರು ವೈಯಕ್ತಿಕವಾಗಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್ ಒಳಗೊಂಡ ಕೋವಿಡ್ ಸುರಕ್ಷತಾ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಹಗಲಿರುಳು ಸೇವೆ ಸಲ್ಲಿಸುತ್ತಿದ್ದಾರೆ. ಕೊರೊನಾ ಸೋಂಕಿತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ.
ಅದಕ್ಕಾಗಿ ಸುರಕ್ಷತಾ ಕಿಟ್‌ಗಳನ್ನು ಬಳಕೆ ಮಾಡಬೇಕು ಎಂದರು. ಕೋವಿಡ್ ಎರಡನೇ ಅಲೆ ವ್ಯಾಪಿಸುತ್ತಿದ್ದು, ಸಾವಿನ ಪ್ರಕಾರಣಗಳು ಹೆಚ್ಚಾಗಿವೆ. ವೈರಸ್ ತಡೆಗಟ್ಟಲು ಕಠಿಣ ಕ್ರಮಗಳನ್ನು ಅನುಸರಿಸಬೇಕಿದ್ದು, ಜನರ ಸಹಕಾರದ ಅಗತ್ಯವಿದೆ.
ರೋಗ ಲಕ್ಷಣಗಳು ಬಂದಲ್ಲಿ ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಅಲ್ಲದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದ ಗ್ರಾಪಂ ಅಧ್ಯಕ್ಷರು, ನಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಳ್ಳಿಗಳಲ್ಲಿ ಮೂರು ಬಾರಿ ಸ್ಯಾನಿಟೈಸ್ ಮಾಡಲಾಗಿದೆ. ಚರಂಡಿ ಸ್ವತ್ಛತೆಗೆ ಗಮನ ನೀಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.