ಕೈ ಹಿಡಿದ ಉದ್ಯೋಗ ಖಾತ್ರಿ
ವಲಸೆ ಕಾರ್ಮಿಕರಿಗೆ ಅರಣ್ಯ ಪ್ರದೇಶದಲ್ಲಿ ಇಂಗುಗುಂಡಿ ತೆಗೆಯುವ ಕೆಲಸ,
Team Udayavani, Jun 1, 2021, 9:35 PM IST
ಕೊಪ್ಪಳ: ಕೊರೊನಾ ಎರಡನೇ ಅಲೆ ಲಾಕ್‌ಡೌನ್‌ನಲ್ಲಿ ಸಾಮಾಜಿಕ ಅಂತರದೊಂದಿಗೆ ನರೇಗಾ ಕಾಮಗಾರಿಗೆ ಅವಕಾಶ ನೀಡಿದ್ದರಿಂದ ಹಲವು ಕುಟುಂಬಗಳ ಜೀವನ ನಿರ್ವಹಣೆಗೆ ಕನಕಗಿರಿ ತಾಲೂಕಿನಲ್ಲಿ ನರೇಗಾ ಕೆಲಸ ಅನುಕೂಲವಾಗಿದೆ.
ತಾಲೂಕಿನ ಚಿಕ್ಕಮಾದಿನಾಳ ಗ್ರಾಪಂ ವ್ಯಾಪ್ತಿಯ ನಾಗಲಾಪುರ ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಅರಣ್ಯ ವಲಯ ಗಂಗಾವತಿ ಹಾಗೂ ಚಿಕ್ಕಮಾದಿನಾಳ ಗ್ರಾಪಂನಿಂದ ಬಂಕಾಪುರ ಗ್ರಾಮದ ಒಟ್ಟು 76 ಜನರಿಗೆ ನರೇಗಾ ಕೆಲಸ ನೀಡಲಾಗಿದೆ. ಕೂಲಿ ಕಾರ್ಮಿಕರಲ್ಲಿ ಕೆಲವರು ಬೆಂಗಳೂರು, ಮಂಗಳೂರು ನಗರ ಪ್ರದೇಶಕ್ಕೆ ಗುಳೆ ಹೋಗಿ ಲಾಕ್ ಡೌನ್ ನಿಂದ ಮರಳಿ ಸ್ವಗ್ರಾಮಕ್ಕೆ ಬಂದಿದ್ದರು. ಅವರಿಗೆ ಯಾವುದೇ ಕೆಲಸ ಇಲ್ಲವಾಗಿತ್ತು. ಉದ್ಯೋಗ ಖಾತ್ರಿ ಯೋಜನೆಯಡಿ ಅರಣ್ಯ ಪ್ರದೇಶದಲ್ಲಿ ಇಂಗುಗುಂಡಿ ತೆಗೆಯುವ ಕೆಲಸ ನೀಡಲಾಗಿದೆ.
2021ರ ಮೇ 15ರಿಂದ ಸತತ ಈ ಕೂಲಿ ಕಾರ್ಮಿಕರಿಗೆ 16 ದಿನ ಕೆಲಸ ನೀಡಲಾಗಿದೆ. 15 ಅಡಿ ಉದ್ದ, 3 ಅಡಿ ಅಗಲ ಹಾಗೂ 3 ಅಡಿ ಆಳವಿರುವ ಒಟ್ಟು 300 ಟ್ರಂಚ್‌ಗಳನ್ನು ಕೂಲಿಕಾರ್ಮಿಕರು ತೆಗೆದಿದ್ದಾರೆ.
ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ 1216 ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ಮಳೆ ಬಂದರೆ ಈ ಟ್ರಂಚ್‌ಗಳಲ್ಲಿ ಲಕ್ಷಾಂತರ ಲೀಟರ್ ನೀರು ಇಂಗಲಿದೆ. ಇದರಿಂದ ಮಣ್ಣು ಮತ್ತು ತೇವಾಂಶ ಸಂರಕ್ಷಣೆಗೆ ಸಹಕಾರಿ ಆಗಲಿದೆ. ಈ ಅರಣ್ಯ ಪ್ರದೇಶದಲ್ಲಿರುವ 16000 ಸಸಿಗಳು ಉತ್ತಮವಾಗಿ ಬೆಳೆಯಲು ಅನುಕೂಲವಾಗಲಿದೆ. ಮಳೆಗಾಲದಲ್ಲಿ ಉತ್ತಮ ಮಳೆಯಾದರೆ ಈ ಅರಣ್ಯ ಪ್ರದೇಶದಲ್ಲಿ ಅಗೆದ ಟ್ರಂಚ್‌ಗಳಲ್ಲಿ ಲಕ್ಷಾಂತರ ಲೀಟರ್ ನೀರು ಭೂಮಿ ಸೇರಲಿದೆ. ಪ್ರದೇಶದಲ್ಲಿ ಇರುವ ಗಿಡಗಳು ಹಸಿರಾಗಿ ಉತ್ತಮ ಪರಿಸರ ವಾತಾವರಣ ನಿರ್ಮಾಣವಾಗಲಿದೆ. ಇನ್ನೂ ಸುತ್ತಲಿನ ರೈತರ ಜಮೀನುಗಳಲ್ಲಿ ಇರುವ ಬೋರ್‌ವೆಲ್ ರಿಚಾರ್ಜ್‌ಗೂ ಸಹಕಾರಿ ಆಗಲಿದೆ.
ಮಣ್ಣು ಮತ್ತು ತೇವಾಂಶ ಸಂರಕ್ಷಣೆ ಮಾಡಲು ಅನುಕೂಲವಾಗಲಿದೆ. ಮಳೆಯಾಶ್ರಿತ ಇಂತಹ ಪ್ರದೇಶದಲ್ಲಿ ಎಸ್ ಎಂಸಿ ಕಾಮಗಾರಿ ನಿರ್ವಹಿಸಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.