ಕೋವಿಡ್‌ ಆಸ್ಪತ್ರೆಯಲ್ಲಿ ಸಂಬಂಧಿಗಳ ಹುಡುಗಾಟ


Team Udayavani, Jun 1, 2021, 9:56 PM IST

1-24

ಚಿಕ್ಕಮಗಳೂರು: ಕೋವಿಡ್‌ ಸೋಂಕು ದಿನೇದಿನೇ ಹೆಚ್ಚುತ್ತಿದ್ದು, ಜನರ ಜೀವ ಹಿಂಡುತ್ತಿದೆ. ಆದರೂ ಕೆಲ ನಿಯಮ ಪಾಲನೆಯಲ್ಲಿ ಆಸ್ಪತ್ರೆಗಳ ನಿಯಮ ಉಲ್ಲಂಘಿಸುತ್ತಿರುವುದು ನಡೆದೇ ಇದೆ. ಜಿಲ್ಲಾಸ್ಪತ್ರೆಯಲ್ಲಿ ತೆರೆಯಲಾಗಿರುವ ಕೋವಿಡ್‌ ಆಸ್ಪತ್ರೆಯಲ್ಲಿ ಇಂತಹದ್ದೊಂದು ಪ್ರಕರಣ ನಡೆದಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸೋಂಕಿತರ ಸಂಬಂಧಿಗಳ ವರ್ತನೆ ಹಾಗೂ ಆಸ್ಪತ್ರೆಯ ಬೇಜವಾಬ್ದಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆಯ ಕೋವಿಡ್‌ ವಾರ್ಡ್‌ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ಈ ಕೋವಿಡ್‌ ವಾರ್ಡ್‌ವೊಂದರಲ್ಲಿ ಸೋಮವಾರ ಬೆಳಗ್ಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ವ್ಯಕ್ತಿಯ ಮೃತದೇಹ ಪಕ್ಕದಲ್ಲೇ ಇದ್ದರೂ ಸೋಂಕಿತರು ಮತ್ತು ಅವರ ಸಂಬಂಧಿ ಕರು ಅಲ್ಲೇ ಕುಳಿತು ಊಟ ಮಾಡಿದ್ದಾರೆ. ಅಲ್ಲದೆ ಸೋಂಕಿನ ಭಯವಿಲ್ಲದೇ ಸೋಂಕಿತರಿಗೆ ಚಿಕಿತ್ಸೆ ನೀಡುವ ವಾರ್ಡ್‌ನಲ್ಲಿ ಸೋಂಕಿತರ ಸಂಬಂಧಿಕರು ಪಿಪಿಇ ಕಿಟ್‌ಧರಿಸದೇ ರಾಜಾರೋಷವಾಗಿ ತಿರುಗಾಡುತ್ತಿರುವ ದೃಶ್ಯ ಸೆರೆಯಾಗಿದೆ.

ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯೊಬ್ಬರು ಇದನ್ನೆಲ್ಲ ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಆ ವಿಡಿಯೋ ವೈರಲ್‌ ಆಗಿದೆ. ಸೋಂಕಿತರಿಗೆ ಊಟ, ಉಪಾಹಾರ ನೀಡುವ ನೆಪದಲ್ಲಿ ವಾರ್ಡ್‌ಗೆ ಹೋಗಿ ಬರುವ ಸಂಬಂಧಿಕರು ವಾರ್ಡ್‌ನಿಂದ ಹೊರಬಂದು ಸಾರ್ವಜನಿಕರ ಮಧ್ಯೆ ತಿರುಗಾಡುತ್ತಿದ್ದು, ಆರೋಗ್ಯ ವಂತರಿಗೂ ಸೋಂಕು ಹರಡುವ ಸಾಧ್ಯತೆ ಇದೆ.

ಕೋವಿಡ್‌ ಆಸ್ಪತ್ರೆಯ ಸೋಂಕಿತರು ಇರುವ ವಾರ್ಡ್‌ಗೆ ವೈದ್ಯರು, ಆಸ್ಪತ್ರೆ ಸಿಬ್ಬಂದಿಗೆ ಮಾತ್ರ ಪ್ರವೇಶವಿದ್ದು, ಸೋಂಕಿತರ ಸಂಬಂಧಿ ಕರಿಗೆ ಪ್ರವೇಶ ನೀಡಿರುವುದು ಹೇಗೆ, ಪಿಪಿಇ ಕಿಟ್‌ ಧರಿಸದೇ ಸೋಂಕಿತರಿರುವ ವಾರ್ಡ್‌ನಲ್ಲಿ ಅವರ ಸಂಬಂ  ಧಿಕರು ತಿರುಗಾಡಲು ಅವಕಾಶ ಇದೆಯೇ ಎಂದು ಸಾರ್ವಜನಿಕರು ಜಿಲ್ಲಾಡಳಿತವನ್ನು ಪ್ರಶ್ನಿಸಿದ್ದಾರೆ.

ಘಟನೆ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಉಮೇಶ್‌ ಪ್ರತಿಕ್ರಿಯಿಸಿ, ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡುವ ವಾರ್ಡ್‌ಗೆ ಅವರ ಸಂಬಂಧಿಕರು ಅಥವಾ ಸಾರ್ವಜನಿಕರು ಪ್ರವೇಶಿಸಲು ಅವಕಾಶವಿಲ್ಲ. ವಾರ್ಡ್‌ನಿಂದ ಮೃತದೇಹ ತೆಗೆದು ಕೊಂಡು ಹೋಗುವ ಸಂದರ್ಭದಲ್ಲಿ ಯಾರೋ ವಿಡಿಯೋ ಮಾಡಿರಬಹುದು.

ಆ ರೀತಿಯ ಪರಿಸ್ಥಿತಿ ಜಿಲ್ಲಾಸ್ಪತ್ರೆಯಲ್ಲಿ ಇಲ್ಲ, ಕೋವಿಡ್‌ ಸೋಂಕಿತರಿಗೆ ವ್ಯವಸ್ಥಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಅಂತಹ ಘಟನೆ ನಡೆದಿದ್ದರೆ ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಮತ್ತು ಮುಂದೆ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳುವಂತೆ ಜಿಲ್ಲಾ ಸರ್ಜನ್‌ ಡಾ| ಮೋಹನ್‌ಕುಮಾರ್‌ ಅವರಿಗೆ ಸೂಚಿಸಿದ್ದೇನೆ ಎಂದರು.

ಟಾಪ್ ನ್ಯೂಸ್

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.