ಮೊಣಕಾಲಿಗೆ ಗಾಯ : ಒಲಿಂಪಿಕ್ಸ್ ನಿಂದ ಹಿಂದೆ ಸರಿದ ಕೆರೊಲಿನಾ ಮರಿನ್
Team Udayavani, Jun 2, 2021, 6:40 AM IST
ಹೊಸದಿಲ್ಲಿ : ಹಾಲಿ ಒಲಿಂಪಿಕ್ ಚಾಂಪಿಯನ್, ಸ್ಪೇನ್ನ ಶಟ್ಲರ್ ಕೆರೊಲಿನಾ ಮರಿನ್ ಮೊಣಕಾಲಿನ ಗಾಯದಿಂದಾಗಿ ಟೋಕಿಯೊ ಒಲಿಂಪಿಕ್ಸ್ ಕೂಟದಿಂದ ಅಧಿಕೃತವಾಗಿ ಹಿಂದೆ ಸರಿದಿದ್ದಾರೆ.
ಕಳೆದ ವಾರ ಅಭ್ಯಾಸದ ವೇಳೆ ಮರಿನ್ಗೆ ಮೊಣಕಾಲಿನ ಗಾಯದ ಸಮಸ್ಯೆ ಎದುರಾಗಿತ್ತು. ಹೀಗಾಗಿ ಅವರು ಅಭ್ಯಾಸವನ್ನು ಅರ್ಧಕ್ಕೇ ನಿಲ್ಲಿಸಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು. ಇದೊಂದು ತೀವ್ರ ಸ್ವರೂಪದ ಗಾಯವಾದ ಕಾರಣ ಅವರು ಇದೇ ವಾರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. “ದುರದೃಷ್ಟವಶಾತ್ ನನಗೆ ಈ ಬಾರಿಯ ಒಲಿಂಪಿಂಕ್ಸ್ ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಆದರೆ ಗಾಯದಿಂದ ಶೀಘ್ರ ಚೇತರಿಸಿಕೊಂಡು ಮುಂದಿನ ಟೂರ್ನಿಯಲ್ಲಿ ಪಾಲ್ಗೊಳ್ಳುವ ವಿಶ್ವಾಸವಿದೆ’ ಎಂದು ಮರಿನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.