ಎಸ್.ಆರ್ ವಿಶ್ವನಾಥ್ ಅವರಿಗೆ ಪ್ರತಿಷ್ಠಿತ `ಗೋಲ್ಡನ್ ಪೀಸ್ ಮೇಕರ್ ಸ್ಟಾರ್’ ಪ್ರಶಸ್ತಿ
Team Udayavani, Jun 2, 2021, 8:16 AM IST
ಬೆಂಗಳೂರು: ಯಲಹಂಕ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರನ್ನು ರಷ್ಯಾ ಸರ್ಕಾರದ ಪ್ರತಿಷ್ಠಿತ `ಗೋಲ್ಡನ್ ಪೀಸ್ ಮೇಕರ್ ಸ್ಟಾರ್’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ವಿಶ್ವನಾಥ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾರಿಷಸ್ ನ ಮಿನಿಸ್ಟರ್ ಕೌನ್ಸೆಲರ್ ಜೆ.ಬಿಸ್ಸೊಂಡೊಯಾಲ್ ಅವರು ಈ ಪ್ರಶಸ್ತಿಯನ್ನು ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಏಷ್ಯನ್ ಅಕಾಡೆಮಿ ಆಫ್ ಫಿಲ್ಮ್ ಅಂಡ್ ಟೆಲಿವಿಷನ್ ನ ಅಧ್ಯಕ್ಷ ಸಂದೀಪ್ ಮಾರ್ವ ಹಾಗೂ ರಷ್ಯಾ ಸರ್ಕಾರದ ಸಚಿವ ಗಾಡ್ಝಿಮುರಾಡ್ ಒಮರೊವ್ ಅವರು ಹಾಜರಿದ್ದು, ವಿಶ್ವನಾಥ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಸಮಾಜಸೇವೆಯಲ್ಲಿ ಮತ್ತು ಸಮಾಜದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.
ಕೋವಿಡ್-19 ಬಿಕ್ಕಟ್ಟು ಶಮನವಾದ ನಂತರ ವಿಶ್ವನಾಥ್ ಅವರನ್ನು ರಷ್ಯಾಗೆ ಆಮಂತ್ರಿಸಿ ಅಲ್ಲಿನ ಸಂಸತ್ತಿನಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್.ಆರ್.ವಿಶ್ವನಾಥ್, ದೂರದ ರಷ್ಯಾ ದೇಶದವರು ನನ್ನ ಜನಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ. ಇದರಿಂದಾಗಿ ನನ್ನ ಜವಾಬ್ದಾರಿ ಹೆಚ್ಚಿದೆ ಮತ್ತು ನಾನು ಕಳೆದ ಮೂರು ದಶಕಗಳಿಂದ ನಡೆಸುತ್ತಿರುವ ಜನಸೇವೆಯನ್ನು ಮತ್ತಷ್ಟು ವಿಸ್ತಾರಗೊಳಿಸಲು ಶಕ್ತಿ ಮತ್ತು ಸ್ಫೂರ್ತಿಯನ್ನು ತುಂಬಿದಂತಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.