ಜಸ್ಟೀಸ್ ಅರುಣ್ ಕುಮಾರ್ ಮಿಶ್ರಾ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ
ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡು 2020ರ ಸೆಪ್ಟೆಂಬರ್ 3ರವರೆಗೂ ಕರ್ತವ್ಯ ನಿರ್ವಹಿಸಿದ್ದರು.
Team Udayavani, Jun 2, 2021, 1:37 PM IST
ನವದೆಹಲಿ:ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಅವರು ಬುಧವಾರ(ಜೂನ್ 02) ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಇದನ್ನೂ ಓದಿ:ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಸುದ್ದಿ ಹಬ್ಬಿಸಿದ್ದ ನಾಲ್ವರ ಬಂಧನ
ಎನ್ ಎಚ್ ಆರ್ ಸಿಯ ಅಧ್ಯಕ್ಷರಾಗಿದ್ದ ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಚ್ ಎಲ್ ದತ್ತು ಅವರ ಅಧಿಕಾರಾವಧಿ 2020ರ ಡಿಸೆಂಬರ್ ನಲ್ಲಿ ಪೂರ್ಣಗೊಂಡ ನಂತರ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಸ್ಥಾನ ಖಾಲಿ ಇದ್ದಿರುವುದಾಗಿ ವರದಿ ವಿವರಿಸಿದೆ.
ಜಸ್ಟೀಸ್ ದತ್ತು ಅವರು 2015ರಲ್ಲಿ ಸುಪ್ರೀಂಕೋರ್ಟ್ ನ ಸಿಜೆಐ ಹುದ್ದೆಯಿಂದ ನಿವೃತ್ತರಾದ ನಂತರ 2016ರ ಫೆಬ್ರುವರಿ 29ರಂದು ಎನ್ ಎಚ್ ಆರ್ ಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆ ಉಪಸಭಾಪತಿ ಹರಿವಂಶ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರನ್ನೊಳಗೊಂಡ ಸಮಿತಿ ಜಸ್ಟೀಸ್ ಅರುಣ್ ಕುಮಾರ್ ಮಿಶ್ರಾ ಅವರ ಹೆಸರನ್ನು ಎನ್ ಎಚ್ ಆರ್ ಸಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಿತ್ತು.
ಜಸ್ಟೀಸ್ ಅರುಣ್ ಮಿಶ್ರಾ ಅವರು ಕೋಲ್ಕತಾ ಮತ್ತು ರಾಜಸ್ಥಾನ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ಇವರ ತಂದೆ ಹರ್ ಗೋವಿಂದ್ ಮಿಶ್ರಾ ಅವರು ಕೂಡಾ ಮಧ್ಯಪ್ರದೇಶ ಹೈಕೋರ್ಟ್ ನ ಜಡ್ಜ್ ಆಗಿ ಸೇವೆ ಸಲ್ಲಿಸಿದ್ದರು. 2014ರ ಜುಲೈ 7ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡು 2020ರ ಸೆಪ್ಟೆಂಬರ್ 3ರವರೆಗೂ ಕರ್ತವ್ಯ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
House arrest: ಮಾರಾಮಾರಿ ಪ್ರಕರಣ; ಕೆಟಿಆರ್ ಸೇರಿ ಬಿಆರೆಸ್ ಪ್ರಮುಖರ ಗೃಹ ಬಂಧನ
Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ
MVA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್
ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್
Mahakumbh Mela: ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ ಸಾಧು ಸಂತರ ಶಾಹಿ ಸ್ನಾನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.