ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂ. 5 ರಂದು ನಿರ್ಧಾರ : ಗೃಹ ಸಚಿವ ಬಸವರಾಜ ಬೊಮ್ಮಾಯಿ

Team Udayavani, Jun 2, 2021, 5:35 PM IST

ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂ. 5 ರಂದು ನಿರ್ಧಾರ : ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ಡೌನ್  ವಿಸ್ತರಣೆಯ ಕುರಿತು ಜೂನ್ 5 ರಂದು ನಿಗದಿಯಾಗಿರುವ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜಿಲ್ಲೆಯ ರಟ್ಟಿಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಪರಿಶೀಲನೆ‌ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಜೂ.4ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಜಿಲ್ಲೆಗಳಲ್ಲಿರುವ ಪರಿಸ್ಥಿತಿಯನ್ನು ಅವರು ಅರಿತುಕೊಳ್ಳುತ್ತಾರೆ.  ಕೆಲ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಕಡಿಮೆ ಇದೆ. ಕೆಲ ಜಿಲ್ಲೆಗಳಲ್ಲಿ ಕಡಿಮೆ ಆಗಬೇಕಾಗಿದೆ. ಈ ಎಲ್ಲ ಅಂಶಗಳನ್ನು ಗಮನಿಸಿ ತಜ್ಞರು ನೀಡುವ ವರದಿಯನ್ನು ವಿಶ್ಲೇಷಣೆ ಮಾಡಿ ರಾಜ್ಯದಲ್ಲಿ ಲಾಕ್ಡೌನ್ ಯಾವ ರೀತಿ ಇರಬೇಕು ಮತ್ತು ಹೇಗೆ ಮುಂದುವರಿಸಬೇಕು  ಎಂಬುದರ ಕುರಿತು ಆ ಸಭೆಯಲ್ಲಿ ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಭಾರತಕ್ಕೆ ವಿಯೆಟ್ನಾಂ ನೀಡಿದ್ದು ಸಹಾಯವಲ್ಲ, ಒಗ್ಗಟ್ಟಿನ ಭಾವನೆ : ಫಾಮ್ ಸಾನ್ ಚೌ

ಕೋವಿಡ್ ೩ ಅಲೆಗೆ ರಾಜ್ಯ ಸರ್ಕಾರ ತನ್ನ ಶಕ್ತಿ ಮೀರಿ ಸಿದ್ಧತೆಗಳನ್ನು ಮಾಡಿದೆ. ಈಗಾಗಲೇ ರಾಜ್ಯದಲ್ಲಿ 24 ಸಾವಿರಕ್ಕಿಂತ ಹೆಚ್ಚು ಆಕ್ಸಿಜನ್ ಬೆಡ್ ಗಳನ್ನು ಸಿದ್ಧಪಡಿಸಲಾಗಿದೆ. ವೆಂಟಲೇಲೆಟರ್ ಗಳ ಸಂಖ್ಯೆಯನ್ನು ಶೇ.100ರಷ್ಟು ಹೆಚ್ಚು ಮಾಡಲಾಗಿದೆ. ಪ್ರತಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜನ್ ಜನರೇಟರ್ ಮಾಡಬೇಕೆಂದು ತೀರ್ಮಾನಿಸಲಾಗಿದೆ.  ಆಕ್ಸಿಜನ್ ಜನರೇಟರ್ ಇದ್ರೆ ಅಪಾಯದಲ್ಲಿರುವ ಸೋಂಕಿತರಿಗೆ ಅನುಕೂಲ ಆಗುತ್ತದೆ ಎಂದು ಅವರು ಹೇಳಿದರು.

ಜುಲೈ-ಆಗಸ್ಟ್ ಸಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಲಸಿಕೆ ನೀಡುವ ಅಭಿಯಾನ ನಡೆಯಲಿದೆ.  ಸದ್ಯಕ್ಕೆ ಕೋವಿಡ್ ವಾರಿಯರ್ ಮತ್ತು ಎರಡನೇ ಡೋಸ್ ಪಡೆಯಲು ಅರ್ಹರಿರುವವರಿಗೆ  ಅವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.

ಹಾವೇರಿ ಜಿಲ್ಲೆಗೆ 51 ವೈದ್ಯರ ನೇಮಕ:

ಹಾವೇರಿ ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇದ್ದ ವೈದ್ಯ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಸದ್ಯಕ್ಕೆ 51 ಜನ ವೈದ್ಯರನ್ನು ನೇಮಕ ಮಾಡಲಾಗಿದೆ. ವೈದ್ಯರ ಅಗತ್ಯತೆಯನ್ನು ಇದು ನಗಿಸುತ್ತದೆ ಎಂಬ ಸಮಾಧಾನ ನನಗಿದೆ.  ಅವರು ಬೇಗ ಬಂದು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡುತ್ತೇನೆ. ಖಾಲಿ ಇರುವ ಇನ್ನಷ್ಟು ವೈದ್ಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಬ್ಲಾಕ್ ಫಂಗಸ್ ಎಂಬ ಚಾಲೆಂಜ್:

ಹಾವೇರಿ ಜಿಲ್ಲೆಯಲ್ಲಿ ನಮಗೆ ಮುಖ್ಯವಾಗಿ ಚಾಲೆಂಜ್ ಇರೋದು ಬ್ಲಾಕ್ ಫಂಗಸ್.  ಈ ಸೋಂಕಿಗೆ ಹೆಚ್ಚಿನ ಪ್ರಮಾಣದಲ್ಲಿ ಔಷಧ ನೀಡುವಂತೆ ಕೇಂದ್ರ ರಾಸಾಯನಿಕ ಸಚಿವ ಡಿವಿ ಸದಾನಂದ ಗೌಡರಿಗೆ ಮನವಿ ಮಾಡಿದ್ದೇನೆ ಹಾವೇರಿ ಜಿಲ್ಲೆಗೆ ಹೆಚ್ಚಿನ ಪ್ರಮಾಣದ ಔಷಧಿಯನ್ನು ನೀಡುವ ಭರವಸೆಯನ್ನು ಅವರು ನೀಡಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

ಮಕ್ಕಳಿಗಾಗಿ ವಿಶೇಷ ಐಸಿಯು: ಸೋಂಕು ತಗುಲಿದ  ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳಿಗಾಗಿಯೇ ವಿಶೇಷ ವಾರ್ಡ್ ನಿರ್ಮಾಣ ಮಾಡುವಂತೆ ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದೇನೆ.  ಹೆರಿಗೆ ವಾರ್ಡ್ ಅನ್ನು ವಿಶೇಷವಾಗಿ ಮಕ್ಕಳ ಐಸಿಯು ವಾರ್ಡ್ ಗಳನ್ನಾಗಿ ಪರಿವರ್ತನೆ ಮಾಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅವರು ತಿಳಿಸದರು.

ಟಾಪ್ ನ್ಯೂಸ್

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.