ತಂಬಾಕು ಬಳಕೆಯಿಂದ ದುಷ್ಪರಿಣಾಮ

Team Udayavani, Jun 2, 2021, 9:38 PM IST

2-15

ಬಳ್ಳಾರಿ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಸಾರ್ವಜನಿಕರಿಗೆ ವಾಹನದಲ್ಲಿ ಧ್ವನಿವರ್ಧಕದ ಮೂಲಕ ಜನಜಾಗೃತಿ ಮೂಡಿಸುವ ಅಭಿಯಾನಕ್ಕೆ ಡಿಎಚ್‌ಒ ಡಾ| ಎಚ್‌.ಎಲ್‌. ಜನಾರ್ಧನ್‌ ಮಂಗಳವಾರ ಚಾಲನೆ ನೀಡಿದರು.

ವಾಹನದಲ್ಲಿ ಧ್ವನಿವರ್ಧಕದ ಮೂಲಕ ಜನಜಾಗೃತಿ ಮೂಡಿಸುವ ಈ ಅಭಿಯಾನವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅ ಧಿಕಾರಿಗಳ ಕಚೇರಿಯಿಂದ, ಸಂಗಮ್‌ ವೃತ್ತ, ರಾಘವೇಂದ್ರ ಚಿತ್ರಮಂದಿರ ವೃತ್ತ, ಮೀನಾಕ್ಷಿ ವೃತ್ತ, ಜಿಲ್ಲಾ ಧಿಕಾರಿಗಳ ಕಾರ್ಯಲಯ, ರಾಯಲ್‌ ವೃತ್ತ, ಬೆಂಗಳೂರು ರಸ್ತೆ, ಬ್ರೂಸ್‌ ಪೇಟೆ ಪೋಲೀಸ್‌ ಠಾಣೆ, ಎಪಿಎಂಸಿ ಯಾರ್ಡ್‌, ಬಾಪೂಜಿ ನಗರ, ಮಿಲ್ಲರ್‌ ಪೇಟೆ, ಶ್ರೀ ರಾಂಪುರ ಕಾಲೋನಿ, ಎಮ್‌.ಜಿ ವೃತ್ತ, ಪಟೇಲ್‌ ನಗರ, ಎಸ್‌.ಎನ್‌.ಪೇಟೆ, ಗಾಂ ನಗರ, ದುರ್ಗಮ್ಮ ಗುಡಿ ವೃತ್ತ, ಎಸ್‌.ಪಿ.ಸರ್ಕಲ್‌, ಕೋಟೆ, ಕೌಲ್‌ ಬಜಾರ್‌, ಬೆಳಗಲ್‌ ಕ್ರಾಸ್‌, ರೇಡಿಯೋ ಪಾರ್ಕ, ನಂದಿ ಸ್ಕೂಲ್‌ ಹೊಸಪೇಟೆ ರಸ್ತೆ, ಸುಧಾ ಕ್ರಾಸ್‌, ಓಪಿಡಿ ಇಂದಿರಾನಗರ, ದೇವಿನಗರ, ಮೋತಿ ವೃತ್ತ, ರಾಯಲ್‌ ವೃತ್ತದ ಮುಖಾಂತರ ಪುನಃ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅ ಧಿಕಾರಿಗಳ ಕಚೇರಿಗೆ ತಲುಪಿತು. ಬಳಿಕ ಮಾತನಾಡಿದ ಡಿಎಚ್‌ಒ ಡಾ| ಜನಾರ್ಧನ್‌ ಅವರು ಸಮುದಾಯದಲ್ಲಿ ಅನಾದಿಕಾಲದಿಂದಲೂ ಬಳಕೆಯಲ್ಲಿರುವ ತಂಬಾಕಿನ ವಿವಿಧ ಉತ್ಪನ್ನಗಳನ್ನು ಸಾರ್ವಜನಿಕರು ಆರೋಗ್ಯದ ಹಿನ್ನೆಲೆಯಲ್ಲಿ ಹಂತಹಂತವಾಗಿ ಬಳಕೆಯನ್ನು ನಿಯಂತ್ರಿಸುವ ಕಾರ್ಯ ಕಾನೂನಾತ್ಮಕ ರೀತಿಯಲ್ಲಿ ಹಾಗೂ ಜಾಗೃತಿ ನೀಡುವ ಮೂಲಕ ಕೈಗೊಳ್ಳಲಾಗುತ್ತಿದೆ.

ಇತ್ತೀಚಿಗೆ ಜಾಗತಿಕವಾಗಿ ಕಂಡುಬಂದ ಕೊರೊನಾ ನಿಯಂತ್ರಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಸೇವನೆ ಮತ್ತು ಉಗುಳುವುದನ್ನು ನಿಷೇ ಧಿಸಲಾಗಿದ್ದು ಇದಕ್ಕಾಗಿ ಸಾರ್ವಜನಿಕರು ಸಂಪೂರ್ಣವಾಗಿ ಸಹಕಾರ ನೀಡುವಂತೆ ಕೋರಿದರು. ತಂಬಾಕುನಿಂದ ಕ್ಯಾನ್ಸರ್‌, ಹೃದಯ, ಶ್ವಾಸ ಸಂಬಂ ಧಿ ಇತ್ಯಾದಿ ಮಾರಣಾಂತಿಕ ಕಾಯಿಲೆಗಳು ಬರುತ್ತವೆ.

ತಂಬಾಕು ವಸ್ತುಗಳಲ್ಲಿ (ಸಿಗರೇಟ್‌, ಬೀಡಿ, ಸಿಗ್ಯಾರ್‌ ಇತ್ಯಾದಿ) 7000 ರಾಸಾಯನಿಕ ವಸ್ತುಗಳಿದ್ದು, ಅದರಲ್ಲಿ 69ರಷ್ಟು ಕ್ಯಾನ್ಸರ್‌ಕಾರಕ ವಸ್ತುಗಳಾಗಿವೆ. ಧೂಮರಹಿತ (ಜಿಗಿಯುವ ತಂಬಾಕುಗಳು) ತಂಬಾಕು ಉತ್ಪನ್ನಗಳಲ್ಲಿ 3095 ರಾಸಾಯನಿಕಗಳಿದ್ದು. ಅದರಲ್ಲಿ 28ರಷ್ಟು ಕ್ಯಾನ್ಸ್‌ರ್‌ಕಾರಕ ವಸ್ತುಗಳಿವೆ ಎಂದು ಡಿಎಚ್‌ಒ ಡಾ| ಜನಾರ್ಧನ್‌ ಅವರು ವಿವರಿಸಿದರು. ತಂಬಾಕು ಅಥವಾ ನಿಕೋಟಿನ್‌ ಬಳಕೆ ದೇಹದ ಪ್ರತಿಯೊಂದು ಅಂಗದ ಮೇಲೂ ಪರಿಣಾಮ ಬೀರುತ್ತದೆ. ಧೂಮಪಾನ ಮಾಡಿದವರ ಆಯುಷ್ಯವು ಧೂಮಪಾನ ಮಾಡದವರ ಆಯುಷ್ಯಕ್ಕಿಂತ 15ವರ್ಷ ಕಡಿಮೆಯಾಗುತ್ತೆ ಎಂದು ಅಂದಾಜಿಸಲಾಗಿದೆ.

ಸಾಮಾನ್ಯವಾಗಿ ಬೀಡಿ, ನಶ್ಯ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳು ಸಿಗರೇಟ್‌ಗಿಂತ ಸುರಕ್ಷಿತ ಎಂಬ ನಂಬಿಕಿಯಿದೆ. ಇದು ಸತ್ಯವಲ್ಲ ಅವು ಕೂಡ ಸಿಗರೇಟ್‌ನಂತೆಯೇ ಅಪಾಯಕಾರಿ. ಅದನ್ನು ಸೇವಿಸುವ ವ್ಯಕ್ತಿ ಮಾತ್ರವಲ್ಲದೆ ಆತನ ಸುತ್ತಮುತ್ತಲಿನವರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತವೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿ ಕಾರಿಗಳ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಲೇರಿಯಾ ಅಧಿ ಕಾರಿ ಡಾ| ಮರಿಯಂಬಿ, ಜಿಲ್ಲಾ ಸರ್ವೇûಾಣಾ ಧಿಕಾರಿ ಡಾ| ಆರ್‌.ಅಬ್ದುಲ್ಲಾ, ಜಿಲ್ಲಾ ಕುಷ್ಠರೋಗ ನಿಯಂತ್ರಣಾ ಧಿಕಾರಿ ಡಾ| ರಾಜಶೇಖರ್‌ ರೆಡ್ಡಿ, ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ| ಗುರುರಾಜ್‌ ಬಿ ಚವ್ಹಾಣ್‌, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ದುರುಗೇಶ ಮಾಚನೂರು, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ| ಜಬೀನ್‌ ತಾಜ್‌, ಜಿಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸಂಯೋಜಕರು ಗುರುರಾಜ್‌, ಜಿಲ್ಲಾ ಆರೋಗ್ಯ ಶಿಕ್ಷಣಾ ಧಿಕಾರಿ ಈಶ್ವರ ದಾಸಪ್ಪನವರ್‌, ತಂಬಾಕು ವ್ಯಸನ ಮುಕ್ತ ಕೇಂದ್ರದ ಮಲ್ಲೇಶಪ್ಪ, ಡಾ| ಗುರುಪ್ರಸಾದ್‌ ಪುರೋಹಿತ್‌, ಶರತ್‌ ಬಾಬು ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.