ಹೋಂ ಐಸೋಲೇಷನ್‌ಗೆ ಅವಕಾಶ ನೀಡಲ್ಲ

Team Udayavani, Jun 2, 2021, 9:54 PM IST

2-17

ಹಿರಿಯೂರು: ಗ್ರಾಮೀಣ ಜನರು ನಿರ್ಲಕ್ಷéದಿಂದ ಪ್ರಾಣ ಹಾನಿ ಮಾಡಿಕೊಳ್ಳಬಾರದು. ಆರೋಗ್ಯ ರಕ್ಷಣೆಗೆ ಗಮನ ನೀಡಬೇಕು ಎಂದು ಜಿಲ್ಲಾಧಿ ಕಾರಿ ಕವಿತಾ ಎಸ್‌. ಮನ್ನಿಕೇರಿ ಹೇಳಿದರು. ತಾಲೂಕಿನ ಆಲೂರು ಗ್ರಾಮದಲ್ಲಿ ಮಂಗಳವಾರ ನಡೆದ ಕೊರೊನಾ ಜಾಗೃತಿ ಹಾಗೂ “ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಲೂರು ಗ್ರಾಮದ 40ಕ್ಕೂ ಹೆಚ್ಚು ಕೊರೊನಾ ಸೋಂಕಿತರು ದೇವರಕೊಟ್ಟ ಕೋವಿಡ್‌ ಸೆಂಟರ್‌ಗೆ ದಾಖಲಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಪ್ರತಿಯೊಬ್ಬರೂ ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಬೇಕು. ಕೆಮ್ಮು, ನೆಗಡಿ, ಜ್ವರ ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಕಡ್ಡಾಯವಾಗಿ ಲಸಿಕೆ ತೆಗೆದುಕೊಳ್ಳಬೇಕು ಎಂದರು.

ಕೋವಿಡ್‌ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಕಾರ್ಯಪಡೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಬೇಕು. ಕೋವಿಡ್‌ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್‌ ಕೇರ್‌ ಸೆಂಟರ್‌ಗೆ ಸ್ಥಳಾಂತರಿಸಬೇಕು. ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‌ ಗೆ ಅವಕಾಶ ನೀಡಬಾರದು ಎಂದು ಸೂಚಿಸಿದರು.

ಸೋಂಕಿತರ ಮನೆಗಳನ್ನು ಸೀಲ್‌ ಡೌನ್‌ ಮಾಡಬೇಕೆಂದು ಗ್ರಾಮಸ್ಥರು ಜಿಲ್ಲಾಧಿ ಕಾರಿಗಳನ್ನು ಒತ್ತಾಯಿಸಿದರು. ಸೀಲ್‌ ಡೌನ್‌ ಮಾಡುವುದರಿಂದ ಜನರಿಗೆ ತೊಂದರೆಯಾಗುತ್ತದೆ. ಅದರ ಬದಲಾಗಿ ಸೋಂಕಿತರ ಮನೆ ಬಳಿ ರೆಡ್‌ ಟೇಪ್‌ ಹಾಕುವಂತೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಧಿ ಕಾ ಮಾತನಾಡಿ, ಕೊರೊನಾ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ. ಸೋಂಕು ನಿಯಂತ್ರಣಕ್ಕೆ ಬರುವವರೆಗೆ ಗ್ರಾಮಸ್ಥರು ನಗರ ಸಂಚಾರಕ್ಕೆ ಕಡಿವಾಣ ಹಾಕಬೇಕು. ಸರ್ಕಾರದ ಲಾಕ್‌ಡೌನ್‌ ನಿಯಮವನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಇಲ್ಲದಿದ್ದರೆ ವಿನಾಕಾರಣ ತೊಂದರೆಗೆ ಸಿಲುಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದ್ಯಾಮಲಾಂಬ ಶ್ರೀನಿವಾಸ್‌ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಪಾಲಾಕ್ಷ, ತಹಶೀಲ್ದಾರ್‌ ಜಿ.ಎಚ್‌. ಸತ್ಯನಾರಾಯಣ, ತಾಲೂಕು ಆರೋಗ್ಯಾಧಿ ಕಾರಿ ಡಾ| ವೆಂಕಟೇಶ್‌, ಡಾ| ಸಾದಿ ಕ್‌, ಡಾ| ರಂಗನಾಥ್‌, ಗ್ರಾಪಂ ಉಪಾಧ್ಯಕ್ಷೆ ಜಯಲಕ್ಷ್ಮೀ ದೇವರಾಜ್‌, ಲೆಕ್ಕಾಧಿ ಕಾರಿ ಸ್ವಾಮಿ, ಪಿಡಿಒ ಶಿವಣ್ಣ, ಗ್ರಾಪಂ ಸದಸ್ಯರಾದ ರಿಹಾನ ತಾಜ್‌, ಹೇಮಲತಾ, ಡಿ.ಜಿ. ಗೌಡ, ದೇವರಾಜ್‌, ಶ್ರೀನಿವಾಸ್‌, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.