ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಿದ ರೇಣು
Team Udayavani, Jun 2, 2021, 10:14 PM IST
ಹೊನ್ನಾಳಿ: ಕೊರೊನಾದಿಂದ ಮೃತಪಟ್ಟ ಯುವಕನ ಮೃತದೇಹವನ್ನು ಗ್ರಾಮಕ್ಕೆ ತರಲು ಗ್ರಾಮಸ್ಥರು ಒಪ್ಪದ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಖುದ್ದಾಗಿ ಆಂಬ್ಯುಲೆನ್ಸ್ ಚಾಲನೆ ಮಾಡಿಕೊಂಡು ಹೋಗಿ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ತೋರಿದ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಬೆಂಗಳೂರಿನಲ್ಲಿ ಸಾಪ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಲಾಕ್‌ಡೌನ್ ಹಿನ್ನೆಲೆಯಲ್ಲಿ ಹೊನ್ನಾಳಿಗೆ ಬಂದಿದ್ದ. ಆ ಯುವಕನಿಗೆ ಕೊರೊನಾ ಸೋಂಕು ತಗುಲಿ ಹೊನ್ನಾಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಸೋಮವಾರ ಬೆಳಿಗ್ಗೆ ಕೋವಿಡ್ ವಾರ್ಡಿಗೆ ಭೇಟಿ ನೀಡಿದ್ದ ಶಾಸಕರು ಯುವಕನಿಗೆ ಧೈರ್ಯ ಹೇಳಿ ಬಂದಿದ್ದರು. ಇದಾಗಿ ಕೆಲವೇ ಗಂಟೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ. ಕೋವಿಡ್‌ನಿಂದ ಮೃತಪಟ್ಟ ಯುವಕನ ಮೃತದೇಹವನ್ನು ಗ್ರಾಮಕ್ಕೆ ತರದಂತೆ ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿದರು.
ಜಗಳೂರು ತಾಲೂಕು ಮೂಲದವರಾದ ಯುವಕನ ಪೋಷಕರು ಹೊನ್ನಾಳಿಯಲ್ಲಿ ನೆಲೆಸಿದ್ದಾರೆ. ಯುವಕನ ಮೃತದೇಹವನ್ನು ಜಗಳೂರು ತಾಲೂಕಿನ ಹುಟ್ಟೂರಿಗೆ ತೆಗೆದುಕೊಂಡು ಹೋಗಲು ಪೋಷಕರು ಮುಂದಾದಾಗ ಗ್ರಾಮಸ್ಥರು ಮೃತದೇಹಬವನ್ನು ಗ್ರಾಮಕ್ಕೆ ತರದಂತೆ ಮನವಿ ಮಾಡಿದ್ದರೆ.
ಈ ವಿಷಯ ತಿಳಿಯುತ್ತಿದ್ದಂತೆ ಶಾಸಕರೇ ಸ್ವತಃ ಮೃತದೇಹವನ್ನು ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು ಹೋಗಿ ಹೊನ್ನಾಳಿಯ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಿಸಿದರು. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಮ್ಮ ಇನ್ನೆರಡು ವರ್ಷದಲ್ಲಿ ವಿದೇಶಕ್ಕೆ ಹೋಗಿ ಉನ್ನತ ಶಿಕ್ಷಣ ಪಡೆಯುತ್ತೇನೆ ಎಂದು ತಾಯಿಯ ಬಳಿ ಹೇಳಿಕೊಳ್ಳುತ್ತಿದ್ದ ಮಗ ಇದೀಗ ಬಾರದ ಲೋಕಕ್ಕೆ ತೆರಳಿದ್ದಾನೆ. ಮೃತ ಯುವಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕರು, ಯುವಕನ ತಾಯಿಯ ಆಕ್ರಂದನ ಕಂಡು ತಾವು ಕೂಡ ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.