ಜೋಗ ಜಲಪಾತಕ್ಕೆಹೊಸ ಸ್ಪರ್ಶ ನೀಡಲು ಯೋಜನೆ


Team Udayavani, Jun 2, 2021, 10:23 PM IST

2-22

ಶಿವಮೊಗ್ಗ: ಜಗದ್ವಿಖ್ಯಾತ ಜೋಗ ಜಲಪಾತದ ಸೌಂದರ್ಯವನ್ನು ಸರ್ವಋತುಗಳಲ್ಲೂ ಸಾರ್ವಜನಿಕರು ವೀಕ್ಷಿಸಲು ಅನುಕೂಲವಾಗುವಂತೆ 160 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಮಂಗಳವಾರ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜೋಗ ಜಲಪಾತದ ಅಭಿವೃದ್ಧಿ ಹಾಗೂ ನಗರದ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಅಂದಾಜು 65 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ಸ್ಥರದ ನೂತನ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಸಂಬಂಧಿ ಸಿದಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರತಿ ಶನಿವಾರ ಮತ್ತು ಭಾನುವಾರ ಹಾಗೂ ಹಬ್ಬ-ಹರಿದಿನಗಳಲ್ಲಿ ಜಲಪಾತ ವೀಕ್ಷಿಸಲು ಅವಕಾಶ ಒದಗಿಸಲಾಗುವುದು. ಈ ಅವ ಧಿಯಲ್ಲಿ ಜಲಪಾತಕ್ಕೆ ಜಲಾಶಯದ ನೀರನ್ನು ಹರಿಯಬಿಡುವುದರಿಂದ ವಿದ್ಯುತ್‌ ಉತ್ಪಾದನೆಯಲ್ಲಿ ಸುಮಾರು 5 ಕೋಟಿ ರೂ. ನಷ್ಟ ಉಂಟಾಗಬಹುದಾಗಿದ್ದು, ಇದನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ಭರಿಸುವ ಬಗ್ಗೆ ಕೆ.ಪಿ.ಟಿ.ಸಿ.ಎಲ್‌.ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದ ಅವರು, ಜೋಗದ ಸುತ್ತಮುತ್ತಲಲ್ಲಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗುವಂತೆ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು.

ಈ ಎಲ್ಲಾ ಕಾಮಗಾರಿಗಳು ನಿರೀಕ್ಷಿತ 2ವರ್ಷ ವರ್ಷಗಳ ಅವ ಧಿಯಲ್ಲಿ ಮುಕ್ತಾಯವಾಗಲಿದ್ದು, ಈ ಸಂಬಂಧ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿಗಳು ಭರದಿಂದ ಸಾಗಿವೆ. ಈ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡ ನಂತರ ಸುಮಾರು 20 ಸಾವಿರ ಪ್ರವಾಸಿಗರು ಪ್ರತಿದಿನ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡುವ ನಿರೀಕ್ಷೆ ಇದೆ ಎಂದರು. ಸಾಗರ ಸಮೀಪದ ತಳಕಳಲೆ ಸಮೀಪದಲ್ಲಿ ವಾಟರ್‌ ನ್ಪೋರ್ಟ್ಸ್ಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ವ್ಯವಸ್ಥಿತ ನಿರ್ವಹಣೆಗೂ ಕ್ರಮ ವಹಿಸಲಾಗಿದೆ.

ಅಲ್ಲದೆ ಶಿವಮೊಗ್ಗ ಸಮೀಪದ ಸಕ್ರೆಬೈಲು, ಅಕ್ಕಮಹಾದೇವಿ ಜನ್ಮಸ್ಥಳ ಉಡುಗುಣಿ, ನಗರದ ಕೋಟೆ, ಶಿವಪ್ಪನಾಯಕನ ಅರಮನೆ ಮುಂತಾದ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದು. ಇದರಿಂದಾಗಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ ದೊರೆತು ಜನರ ಜೀವನಮಟ್ಟ ಸುಧಾರಣೆಗೊಳ್ಳಲಿದೆ. ಪರೋಕ್ಷವಾಗಿ ಉದ್ಯೋಗಾವಕಾಶಗಳು ಹೆಚ್ಚಲಿವೆ ಎಂದರು.

ಅಂತಾರಾಷ್ಟ್ರೀಯ ಕ್ರೀಡಾಂಗಣ: ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಅಂದಾಜು 65 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದೊಂದಿಗೆ ಸುವ್ಯವಸ್ಥಿತವಾದ ಅಂತಾರಾಷ್ಟ್ರೀಯ ಮಾದರಿಯ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಕ್ರೀಡಾಂಗಣದ ಮಾಲೀಕತ್ವ ಕುವೆಂಪು ವಿಶ್ವವಿದ್ಯಾನಿಲಯದ್ದಾಗಿದ್ದು, ಅವರ ವ್ಯವಸ್ಥಿತ ನಿರ್ವಹಣೆಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಅಲ್ಲದೆ ಪ್ರಸ್ತುತ ಸಹ್ಯಾದ್ರಿ ಕಾಲೇಜಿನ ವಾಣಿಜ್ಯ ವಿಭಾಗದ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಹಾಗೂ ವಸತಿ ನಿಲಯಕ್ಕೆ ಪೂರಕವಾಗಿ ಇನ್ನಷ್ಟು ಅಗತ್ಯ ಕಟ್ಟಡ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು. ಈ ಸಂಬಂಧ ಕ್ರಿಯಾ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸಚಿವರು ಕಾಲೇಜಿನ ಪ್ರಾಂಶುಪಾಲರಿಗೆ ಸೂಚಿಸಿದರು. ಈ ಕ್ರೀಡಾಂಗಣವು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವ ಹಾಗೂ ಪ್ರತಿಭಾವಂತ ಕ್ರೀಡಾಪಟುಗಳ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಅಂತಾರಾಷ್ಟ್ರೀಯ ತರಬೇತಿ ಕಾರ್ಯಾಗಾರಗಳು ನಡೆಯಲಿವೆ ಎಂದರು. ಲಾಕ್‌ಡೌನ್‌ ಅನ್ನು ಕಠಿಣವಾಗಿ ಜಾರಿಗೊಳಿಸಿದ ನಂತರ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರ ಸಂಚಾರ ಶೇ.95ಕ್ಕೆ ಕುಸಿದಿದೆ.

ಅಲ್ಲದೆ ರೋಗಿಗಳ ಸಂಖ್ಯೆಯಲ್ಲೂ ಗಣನೀಯ ಸುಧಾರಣೆ ಕಂಡು ಬರುತ್ತಿದೆ ಎಂದ ಅವರು, ಮುಂದಿನ ಕೆಲವು ದಿನಗಳ ಕಾಲ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಹಾಗೂ ಅನಗತ್ಯವಾಗಿ ಮನೆಯಿಂದ ಹೊರಗೆ ಹೋಗದಂತೆ ಮನವಿ ಮಾಡಿದರು. ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ರುದ್ರೇಗೌಡ, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌, ಕುವೆಂಪು ವಿವಿ ಕುಲಪತಿ ಪ್ರೊ| ವೀರಭದ್ರಪ್ಪ, ಮೇಯರ್‌ ಸುನಿತಾಅಣ್ಣಪ್ಪ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್‌, ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅ ಧಿಕಾರಿ ಎಂ.ಎಲ್‌. ವೈಶಾಲಿ, ಅಪರ ಜಿಲ್ಲಾ ಧಿಕಾರಿ ಜಿ.ಅನುರಾಧಾ, ಭೂಮಿಪುತ್ರ ಕನ್ಸಲ್‌ ಟೆನ್ಸಿಯ ವ್ಯವಸ್ಥಾಪಕ ಅಲೋಕ್‌ ಶೆಟ್ಟಿ ಸೇರಿದಂತೆ ಕುವೆಂಪು ವಿವಿಯ ಸಿಂಡಿಕೇಟ್‌ ಸದಸ್ಯರು, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್‌ ಮುಂತಾದವರು ಇದ್ದರು.

ಇದೇ ಸಂದರ್ಭದಲ್ಲಿ ಆಯುಷ್‌ ಇಲಾಖೆಯು ಕೊರೊನಾ ಸೋಂಕಿನಿಂದ ಗುಣಮುಖರಾದವರಿಗೆ ದೈಹಿಕ ಕ್ಷಮತೆ ಹೆಚ್ಚಿಸಿಕೊಳ್ಳಲು ಸಾರ್ವಜನಿಕ ವಿತರಣೆಗೆ ಬಿಡುಗಡೆ ಮಾಡಿರುವ ಆಯುರ್ವೆàದ ಔಷಧದ ಕಿಟ್‌ನ್ನು ಸಚಿವ ಕೆ.ಎಸ್‌. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ಬಿಡುಗಡೆಗೊಳಿಸಿದರು.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.