14 ಲಕ್ಷ ರೂ ಮೌಲ್ಯದ ಅನಧಿಕೃತ ಬೀಜ ಸಂಗ್ರಹ: ಕೃಷಿ ಅಧಿಕಾರಿಗಳಿಂದ ದಾಳಿ
Team Udayavani, Jun 3, 2021, 8:36 AM IST
ಗಂಗಾವತಿ: ಕೃಷಿ ಇಲಾಖೆಯ ಅನುಮತಿ ಪಡೆಯದೇ 14ಲಕ್ಷ ರೂ.ಮೌಲ್ಯದ ಬೀಜ, ಗೊಬ್ಬರ ಅನಧಿಕೃತ ಸಂಗ್ರಹ ಮಾಡಿದ ಗೋಡೌನ್ ಮೇಲೆ ಕೃಷಿ ಇಲಾಖೆ ಮತ್ತು ಕೃಷಿ ಜಾಗೃತ ದಳದ ಅಧಿಕಾರಿ ದಾಳಿ ನಡೆಸಿದ್ದಾರೆ.
ಸಿಬಿಎಸ್ ವೃತ್ತದ ಸಮೀಪದ ಗೋಡೌನ್ ನಲ್ಲಿ ಶಂಕ್ರಪ್ಪ ಮೇಟಿ ಎಂಬುವವರಿಗೆ ಸೇರಿದ ಮಲ್ಲಿಕಾರ್ಜುನ ಸೀಡ್ಸ್ ಕಂಪನಿ ಹೆಸರಿನಲ್ಲಿದ್ದ ಬೀಜ ಗೊಬ್ಬರ ಅಂಗಡಿಯಲ್ಲಿ ಕೃಷಿ ಇಲಾಖೆಯಿಂದ ಪರವಾನಿಗೆ ಪಡೆಯದೇ ಸುಮಾರು 14 ಲಕ್ಷ ರೂ.ಮೌಲ್ಯದ ಸಜ್ಜಿ ಮೆಕ್ಕೆಜೋಳ ಹಾಗೂ ರಸಗೊಬ್ಬರ ದಾಸ್ತಾನು ಮಾಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆಯ ಸಹಾಯ ನಿರ್ದೇಶಕ ಸಂತೋಷ ಪಟ್ಟದಕಲ್ಲು, ಜಾಗೃತ ದಳದ ಎಡಿಎ ನಿಂಗಪ್ಪ ಸೇರಿ ಇತರೆ ಅಧಿಕಾರಿಗಳ ತಂಡ ದಾಳಿ ನಡೆಸಿ ಸಂಗ್ರಹಿಸಿದ್ದ ಬೀಜ ಗೊಬ್ಬರ ವಶಕ್ಕೆ ಪಡೆದು ಗೋಡೌನ್ ಸೀಜ್ ಮಾಡಲಾಗಿದೆ.
ಅನಧಿಕೃತವಾಗಿ ಬೀಜಗೊಬ್ಬರ ಸಂಗ್ರಹ ಮಾಡಿ ಮಾಡುತ್ತಿದ್ದ ಶಂಕ್ರಪ್ಪ ಮೇಟಿ ಮಾಲೀಕತ್ವದ ಮಲ್ಲಿಕಾರ್ಜುನ ಸೀಡ್ಸ್ ಅಂಗಡಿಯನ್ನು ಸೀಜ್ ಮಾಡಲಾಗಿದೆ. ಸರಕಾರದ ನಿಯಮದಂತೆ ಸಮಗ್ರ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ಲು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.